

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಯುವಕನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮೈಸೂರಿನ ಕರಪುರ ಗ್ರಾಮದಲ್ಲಿ ನಡೆದಿದೆ.


ಮೈಸೂರು: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಯುವಕನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮೈಸೂರಿನ ಕರಪುರ ಗ್ರಾಮದಲ್ಲಿ ನಡೆದಿದೆ.
ಯುವಕನಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮದ ಚಾಯತ್ ಸದಸ್ಯರು ಮನೆಯಲ್ಲಿಯೇ ಇರುವಂತೆ ಯುವಕನಿಗೆ ಸೂಚಿಸಿದ್ದು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದ್ದಾರೆ.


ಆದರೆ, ಮನೆ ಬಳಿ ಕುಳಿತಿದ್ದ ಮುತ್ತೇ ಗೌಡ ಹಾಗೂ ಬಲರಾಮ್ ಎಂಬ ಕಿಡಿಕೇಡಿಗಳು ಗುಂಪು ಸೇರಿಸಿ ಸೋಂಕಿತ ಮೇಲೆ ಏಕಾಏಕಿ ಕಲ್ಲಿನಿಂದ ದಾಳಿ ನಡೆಸಿದ್ದಾರೆ. ಅಲ್ಲದೆ, ಇತರೆ ಗ್ರಾಮದವರೂ ಕೂಡ ದಾಳಿ ಮಾಡುವಂತೆ ಪ್ರೇರೇಪಿಸಿದ್ದಾರೆ. ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು ಇತರರಿಗೂ ಸೋಂಕು ತಗಲುವ ಹಿನ್ನೆಲೆಯಲ್ಲಿ ಗ್ರಾಮಬಿಟ್ಟು ಹೋಗುವಂತೆ ಬೆದರಿಕೆ ಹಾಕಿದ್ದಾರೆ.
ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ಸೋಂಕಿತ ಯುವಕರನ ಬಲ ಮೊಣಕೈ ಮೂಳೆ ಮುರಿದಿದೆ. ರಕ್ತ ತೀವ್ರವಾಗಿ ಸೋರುತ್ತಿದ್ದ ಹಿನ್ನೆಲೆಯಲ್ಲಿ ಯುವಕನ ಪೋಷಕರು ಕೂಗಾಡಿದ್ದು, ಗ್ರಾಮಸ್ಥರು ಕೂಡಲೇ ಸ್ಥಳಕ್ಕೆ ಆ್ಯಂಬುಲೆನ್ಸ್ ಕರೆಸಿದ್ದು, ಹೆಚ್.ಡಿ.ಕೋಟೆಯ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ,
ದಾಳಿ ಬಳಿಕ ಸೋಂಕಿತ ಯುವಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನನಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಈ ಮಾಹಿತಿ ತಿಳಿದ ಕೂಡಲೇ ದಾಳಿ ನಡೆಸಲು ಎದುರು ನೋಡುತ್ತಿದ್ದರು. ಮುತ್ತೇಗೌಡ ಹಾಗೂ ಬಲರಾಮ್ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದಾರೆಂದು ಆರೋಪಿಸಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






