ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ನಿಧನರಾಗಿದ್ದು ಅವರಿಗೆ 104 ವರ್ಷ ವಯಸ್ಸಾಗಿತ್ತು.

Doreswamy

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ನಿಧನರಾಗಿದ್ದು ಅವರಿಗೆ 104 ವರ್ಷ ವಯಸ್ಸಾಗಿತ್ತು.

ಹೃದಯ ಸಂಬಂಧಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎಚ್.ಎಸ್.ದೊರೆಸ್ವಾಮಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ‌ ಅವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ದೊರೆಸ್ವಾಮಿ ಅವರಿಗೆ ಹೃದಯ ಕಾಯಿಲೆ, ಅಧಿಕ ರಕ್ತದೊತ್ತಡ, ಬ್ರಾಂಕೈಟಿಸ್ (ಶ್ವಾಸನಾಳಗಳ ಒಳಪೊರೆಯ ಉರಿಯೂತ) ಸೇರಿದಂತೆ ವಿವಿಧ ವಯೋಸಹಜ ಸಮಸ್ಯೆಗಳು ಇದ್ದವು.  ಕೆಲದಿನಗಳ ಹಿಂದೆ ಹೃದಯ ಸಮಸ್ಯೆ ಸಂಬಂಧ ಜಯದೇವ ಆಸ್ಪತ್ರೆಗೆ ದಾಖಲಾದ ಅವರಿಗೆ ಕೋವಿಡ್  ಪರೀಕ್ಷೆ ನಡೆಸಲಾಗಿತ್ತು. ಅವರಿಗೆ ಜ್ವರ, ನೆಗಡಿ ಹಾಗೂ ಕೆಮ್ಮಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಆಗ ಕೊರೋನಾ ಸೋಂಕಿತರಾಗಿರುವುದು ಖಚಿತಪಟ್ಟಿತ್ತು. 7 ದಿನಗಳಲ್ಲಿ ಅವರು ಚೇತರಿಸಿಕೊಂಡು ಜಯನಗರದಲ್ಲಿರುವ ನಿವಾಸಕ್ಕೆ ತೆರಳಿದ್ದರು.

ಈ ಬಗ್ಗೆ ಮಾಹಿತಿ ನೀಡಿರುವ ರವಿಕೃಷ್ಣಾರೆಡ್ಡಿ ಅವರು, ‘ಕಳೆದ 12 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾತ್ರಿಯಿಂದ ಆರೋಗ್ಯ ಸ್ವಲ್ಪ ಹದಗೆಟ್ಟು ಇಂದು ಬೆಳಿಗ್ಗೆ ಉಸಿರಾಟಕ್ಕೆ ತೊಂದರೆ ಆಗಿತ್ತು. ತೀವ್ರ ನಿಗಾ ಘಟಕಕ್ಕೆ ಕರೆದುಕೊಂಡು ಬಂದ ಸ್ವಲ್ಪ ಹೊತ್ತಿಗೆ ಹೃದಯಾಘಾತ ಆಯಿತು. ಚಿಕಿತ್ಸೆಗೆ  ಸ್ಪಂದಿಸದೆ ಅವರು ನಿಧನರಾದರು ಎಂದು ಹೇಳಿದ್ದಾರೆ.

ಎಚ್​.ಎಸ್.ದೊರೆಸ್ವಾಮಿ ಅವರ ಪೂರ್ತಿ ಹೆಸರು ಹಾರೊಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ. ಏಪ್ರಿಲ್ 10, 1918ರಲ್ಲಿ ಜನಿಸಿದ್ದ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಬ್ರಿಟಿಷರ ಕಾಲದಲ್ಲಿ ಕನ್ನಡದದ ಜನಪ್ರಿಯ ಪತ್ರಿಕೆ ಎನಿಸಿದ್ದ ‘ಪೌರವಾಣಿ’ ವರದಿಗಾರರಾಗಿ ಜನಪ್ರಿಯರಾಗಿದ್ದರು. ಸಾಹಿತ್ಯ  ಮಂದಿರದ ಮೂಲಕ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದರು. ಇತಿಹಾಸಕಾರ ರಾಮಚಂದ್ರ ಗುಹಾ ಅವರು ದೊರೆಸ್ವಾಮಿ ಅವರನ್ನು ಗೌರವಿಸುತ್ತಿದ್ದರು. ‘ದೊರೆಸ್ವಾಮಿ ಅಂದ್ರೆ ಕರ್ನಾಟಕದ ಸಾಕ್ಷಿಪ್ರಜ್ಞೆ’ ಎಂದು ಗುಹಾ ಬಣ್ಣಿಸಿದ್ದರು.

ಅಂದಿನ ಮೈಸೂರು ಪ್ರಾಂತ್ಯದಲ್ಲಿದ್ದ ಕನಕಪುರ ತಾಲ್ಲೂಕು ಹಾರೋಹಳ್ಳಿ ದೊರೆಸ್ವಾಮಿ ಅವರ ಜನ್ಮಸ್ಥಳ. ಕೇವಲ 5 ವರ್ಷದವರಿದ್ದಾಗ ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡರು. ತಾತ ಶ್ಯಾನುಭೋಗ ಶಾಮಣ್ಣ ಅವರ ಪಾಲನೆಯಲ್ಲಿ ದೊರೆಸ್ವಾಮಿ ದೊಡ್ಡವರಾದರು. ದೊರೆಸ್ವಾಮಿ ಅವರ ಅಣ್ಣ ಸೀತಾರಾಮ್  ಬೆಂಗಳೂರಿನ ಮೇಯರ್ ಆಗಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಜೂನ್ 1942ರಲ್ಲಿ ಬೆಂಗಳೂರಿನ ಪ್ರೌಢಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿ ವೃತ್ತಿ ಆರಂಭಿಸಿದರು. ಅದೇ ವರ್ಷ ಆಗಸ್ಟ್​ ತಿಂಗಳಲ್ಲಿ ಆರಂಭವಾದ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸಕ್ರಿಯರಾಗಿ ಪಾಲ್ಗೊಂಡರು. ಬ್ರಿಟಿಷರ ಆಡಳಿತಕ್ಕೆ  ಧಕ್ಕೆ ತರುವ ಉದ್ದೇಶದಿಂದ ದಾಖಲೆಗಳನ್ನು ಸುಟ್ಟುಹಾಕಲೆಂದು ಪೋಸ್ಟ್​ಬಾಕ್ಸ್​ಗಳು ಮತ್ತು ರೆಕಾರ್ಡ್​ ರೂಮ್​ಗಳಲ್ಲಿ ಟೈಮ್​ಬಾಂಬ್​ಗಳನ್ನು ಸ್ಫೋಟಿಸಿದ್ದರು. ಕಾರ್ಮಿಕ ಚಳವಳಿಗಳಲ್ಲೂ ಸಕ್ರಿಯರಾಗಿ ಪಾಲ್ಗೊಂಡಿದ್ದರು.

ದೊರೆಸ್ವಾಮಿ ಅವರು ತಮ್ಮ 19ನೇ ವಯಸ್ಸಿನಲ್ಲಿ ಲಲಿತಮ್ಮ ಅವರನ್ನು ಮದುವೆಯಾಗಿದ್ದರು. ಲಲಿತಮ್ಮ ಅವರು 2019ರ ಡಿಸೆಂಬರ್ 17ರಂದು ನಿಧನರಾದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *