Local news-ಅತಿಥಿ ಉಪನ್ಯಾಸಕರ ಪ್ರತಿಭಟನೆ, ಮನವಿ

ನಿಧನ
ಸಿದ್ದಾಪುರ
ಹಿರಿಯ ವೈದಿಕರು, ಕೃಷಿಕರಾದ ಅಡವಿತೋಟದ ವೇ| ಸೀತಾರಾಮ ಮಂಜ ಭಟ್ಟ(೮೧) ಅವರು ವಯೋಸಹಜವಾಗಿ ಬುಧವಾರ ನಿಧನಹೊಂದಿದ್ದಾರೆ. ಅವರು ಪತ್ನಿ, ಪುತ್ರ ಎಸ್.ಬಿ.ಐ. ರೀಜನಲ್ ಮ್ಯಾನೇಜರ್ ಮಹಾಬಲೇಶ್ವರ ಭಟ್ಟ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು,ಬಳಗ, ಶಿಷ್ಯಕುಟುಂಬದವರನ್ನು ಅಗಲಿದ್ದಾರೆ.


ಅತಿಥಿ ಉಪನ್ಯಾಸಕರ ಪ್ರತಿಭಟನೆ, ಮನವಿ


ಮಾನ್ಯರೇ,
ಇಂದು ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ರಾಜ್ಯ ಸಮಿತಿಯ ಕರೆಯ ಮೇರೆಗೆ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ವ್ಯಾಪಿ ಆನ್ಲೈನ್ ಪ್ರತಿಭಟನೆ ನಡೆಸಲಾಯಿತು.
ಅತಿಥಿ ಉಪನ್ಯಾಸಕರಿಗೆ ಕೊರೋನಾ ಹಿನ್ನಲೆಯಲ್ಲಿ ‘ಪರಿಹಾರ ಪ್ಯಾಕೇಜ್’ ಘೋಷಣೆ ಮಾಡಬೇಕು. ಕೊರೋನಾದಿಂದ ಮೃತಪಟ್ಟ ಅತಿಥಿ ಉಪನ್ಯಾಸಕರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಈಗ ನಡೆಯುತ್ತಿರುವ ಆನ್‌ಲೈನ್ ತರಗತಿಗಳಿಗೆ ಈ ಹಿಂದೆ ಕಾರ್ಯನಿರ್ವಹಿಸಿದ ಎಲ್ಲಾ ಅತಿಥಿ ಉಪನ್ಯಾಸಕರನ್ನು ನಿಯೋಜಿಸಬೇಕು. ಅತಿಥಿ ಉಪನ್ಯಾಸಕರ ಸೇವಾಭದ್ರತೆ ಖಾತ್ರಿಪಡಿಸಬೇಕು ಎಂಬ ಬೇಡಿಕೆಗಳ ಮನವಿಯನ್ನು ಮುಖ್ಯಮಂತ್ರಿಗಳಿಗೆ ಕಳಿಸಲಾಯಿತು.

ಹಾಗೆ ರಾಜ್ಯದಾದ್ಯಂತ ಇಂದು ಅತಿಥಿ ಉಪನ್ಯಾಸಕರು ತಾವಿರುವ ಊರು, ಪಟ್ಟಣ ಹಾಗೂ ನಗರಗಳಲ್ಲಿ ಬೇಡಿಕೆಯ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ಸರ್ಕಾರ ತಮ್ಮ ಸಮಸ್ಯೆಯನ್ನು ಪರಿಗಣಿಸಿ ಪರಿಹರಿಸುವಂತೆ ಮನವಿ ಮಾಡಿದರು. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಮಸ್ಯೆ ಕುರಿತು ಪ್ರಚಾರ ನಡೆಸಿದರು. ಕೆಲವು ಕಡೆಗಳಲ್ಲಿ ನಿಯೋಗದ ಮೂಲಕ ಜಿಲ್ಲಾ ಮತ್ತು ತಾಲೂಕಿನ ಅಧಿಕಾರಿಗಳ ಮೂಲಕ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ರಾಜ್ಯವ್ಯಾಪಿ ಸುಮಾರು ೧೪,೫೦೦ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ೪೧೩ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ಕೋವಿಡ್ ಲಾಕ್‌ಡೌನ್ ಹಾಗೂ ಹಿಂದಿನ ಸೆಮಿಸ್ಟರ್‌ನಲ್ಲಿ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರನ್ನು ಸೇವೆಗೆ ನಿಯೋಜಿಸಿದ್ದರಿಂದ, ಸರಿಯಾದ ವೇತನ ಸಿಗದೇ ನಮ್ಮ ಸಮಸ್ಯೆಗಳು ಹಲವು ಪಟ್ಟು ಉಲ್ಬಣಗೊಂಡಿವೆ. ಈ ಅವಧಿಯಲ್ಲಿ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿ, ಹಲವಾರು ಅತಿಥಿ ಉಪನ್ಯಾಸಕರು ಕೊರೋನಾದಿಂದ ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಮತ್ತು ಗಂಭೀರ ಖಾಯಿಲೆಗಳಿಂದಲೂ ನರಳಿ ಸಾವಿಗೀಡಾಗಿದ್ದಾರೆ. ಎಷ್ಟೋ ಅತಿಥಿ ಉಪನ್ಯಾಸಕರು ಹಣ್ಣು-ಹಂಪಲು, ತರಕಾರಿ ಮಾರುತ್ತ ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಹೊರೆಯ ಜೊತೆಯಲ್ಲಿ ಮಾನಸಿಕ ಒತ್ತಡವೂ ಅವರನ್ನು ತೀವ್ರವಾಗಿ ಕುಗ್ಗಿಸಿದೆ. ಅತಿಥಿ ಉಪನ್ಯಾಸಕರ ಸಂಕಷ್ಟವನ್ನು ಅರಿತು ಹೋರಾಟದ ಫಲವಾಗಿ ಕಳೆದ ವರ್ಷ ತಮ್ಮ ಸರ್ಕಾರವು ಅವರ ೫ ತಿಂಗಳ ಬಾಕಿ ವೇತನವನ್ನು ಬಿಡುಗಡೆ ಮಾಡಿದ್ದು ಶ್ಲಾಘನೀಯ ಕ್ರಮವಾಗಿದೆ.

ಅದಾದ ನಂತರ ೨೦೨೦-೨೧ನೇ ಸಾಲಿನ ಪದವಿ ತರಗತಿಗಳು ಪ್ರಾರಂಭವಾದಾಗ ಇಲಾಖೆ ಕೇವಲ ಶೇ.೫೦ರಷ್ಟು ಅತಿಥಿ ಉಪನ್ಯಾಸಕರನ್ನು ಸೇವೆಗೆ ನಿಯೋಜನೆಗೊಳಿಸಿತ್ತು. ನಂತರ ಆಗ್ರಹದ ಮೇರೆಗೆ ಎಲ್ಲರನ್ನೂ ಸೇವೆಗೆ ಸೇರಿಸಿಕೊಂಡಿದ್ದನ್ನು ನೆನಪಿಸಿಕೊಳ್ಳಬಹುದು. ಒಟ್ಟಾರೆ ಅತಿಥಿ ಉಪನ್ಯಾಸಕರಾದ ನಮ್ಮೆಲ್ಲರ ಬದುಕು ಅತಂತ್ರವಾಗಿದೆ, ತೀವ್ರ ಸಂಕಷ್ಟದಲ್ಲಿದೆ.
ಇದೀಗ ೨೦೨೦-೨೧ ನೇ ಸಾಲಿನ ಸಮ ಸೆಮಿಸ್ಟರ್‌ಗಳಿಗೆ ಈ ಹಿಂದೆ ಕರ‍್ಯನಿರ್ವಹಿಸಿದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಗೆ ಸೇರಿಸಿಕೊಳ್ಳಲು ಹಾಗೂ ಆನ್‌ಲೈನ್ ತರಗತಿಗಳನ್ನು ನಡೆಸಲು ಅವರ ಸೇವೆ ಪಡೆಯಲು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ ಹಲವಾರು ಅತಿಥಿ ಉಪನ್ಯಾಸಕರನ್ನು ಈವರೆಗೂ ಸೇವೆಗೆ ಸೇರಿಸಿಕೊಂಡಿಲ್ಲ. ಕೊರೋನಾದಿಂದ ಮೃತಪಟ್ಟ ಅತಿಥಿ ಉಪನ್ಯಾಸಕರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ. ಆದ್ದರಿಂದ ಈ ಕೂಡಲೇ ನಮ್ಮ ಈ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅತಿಥಿ ಉಪನ್ಯಾಸಕರು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿಗಳು-ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ
ಕರ್ನಾಟಕ ರಾಜ್ಯ ಸಮಿತಿ
ನಂ.೩೧, ೩ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು– ೫೬೦೦೦೩ ಫೋ:೨೩೫೬೧೪೪೩/೮೮೮೪೪೪೨೭೦೦

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *