ಕಾರವಾರ ಜಿ.ಪಂ. ಕಟ್ಟಡಕ್ಕೆ ಬೆಂಕಿ & ಉಪೇಂದ್ರ ಪೈ ರಿಂದ ಮೊಟ್ಟೆ ವಿತರಣೆ

May be an image of standing and outdoors

ಉ.ಕ ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಹರಸಾಹಸ

ಕಾರವಾರ, 05- ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯ ಅಭಿಲೇಖಾಲಯದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೂರು ಮಹಡಿಯ ಕಟ್ಟಡ ಹೊತ್ತಿ ಉರಿದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.ಕಾರವಾರದ ಜಿಲ್ಲಾ ಪಂಚಾಯಿತಿ ಹಿಂಭಾಗದಲ್ಲಿರುವ ಅಭಿಲೇಖಾಲಯದಲ್ಲಿ ಶಾರ್ಟ್ ಸರ್ಕ್ಯೂಟ್​​​ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಬೆಂಕಿ ಕಟ್ಟಡದ ಮೂರು ಮಹಡಿಗೂ ಆವರಿಸಿದೆ. ಕಟ್ಟಡದಲ್ಲಿ ಜಿಲ್ಲಾ ಪಂಚಾಯಿತಿಯ ದಾಖಲಾತಿಗಳನ್ನು ಇಡಲಾಗಿದ್ದು, ಕೆಲವು ದಾಖಲಾತಿಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ.ಅವಘಡವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು ,. ಸ್ಥಳದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಸಿಇಒ ಪ್ರಿಯಾಂಗ್​ ಎಂ. ಹಾಜರಿದ್ದು ಪರಿಶೀಲನೆ ನಡೆಸಿದ್ದಾರೆ.

ಶಿರಸಿ : ಉಪೇಂದ್ರ ಪೈ ಸೇವಾ ಟ್ರಸ್ಟ, ವತಿಯಿಂದ
ಟ್ರಸ್ಟಿನ ಅಧ್ಯಕ್ಷರಾದ ಉಪೇಂದ್ರ ಪೈ ಅವರು ತಮ್ಮ ಮನೆಯ ಆವರಣದಲ್ಲಿ ಶಿರಸಿಯ  ಸವಿತಾ ಸಮಾಜದ ಭಾಂದವರಿಗೆ ಹಾಗೂ ಸಾರ್ವಜನಿಕರಿಗೆ
ಒಬ್ಬರಿಗೆ ಒಂದು ಡಜನ್ ಮೊಟ್ಟೆಯಂತೆ ಸರಿ ಸುಮಾರು ಅಂದಾಜು 3000 ಮೊಟ್ಟೆ ವಿತರಿಸಿದರು …ಸಮಸ್ತ ಸವಿತಾ ಸಮಾಜದ ಬಾಂಧವರು, ಸಾರ್ವಜನಿಕರು ಉಪೇಂದ್ರ ಪೈ ಅವರಿಗೆ ಅಭಿನಂದನೆ ಸಲ್ಲಿಸಿದರು ಈ ಸಂದರ್ಭದಲ್ಲಿ ಶಿರಸಿ ನಗರದ ಆಟೋ ಚಾಲಕ ಹಾಗೂ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಈಶ್ವರ್ ಆಚಾರಿ,  ಸಂಘದ ಸದಸ್ಯರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *