

ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ದ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ.


ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ದ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ.
ಬಿಜೆಪಿ ಹೈಕಮಾಂಡ್ ಗೆ ನನ್ನ ಮೇಲೆ ಎಲ್ಲಿಯವರೆಗೆ ವಿಶ್ವಾಸವಿರುತ್ತೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ, ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ, ಮುಂದೆಯೂ ರಾಜ್ಯದ ಜನತೆಯ ಮತ್ತು ಪಕ್ಷದ ಒಳಿತಿಗಾಗಿ ಕೆಲಸ ಮಾಡುತ್ತೇನೆ, ಈ ವಿಷಯದಲ್ಲಿ ನನಗೆ ಯಾವುದೇ ಗೊಂದಲವಿಲ್ಲ ಎಂಬ ಸ್ಫೋಟಕ ಹೇಳಿಕೆಯನ್ನು ಇಂದು ವಿಧಾನಸೌಧದಲ್ಲಿ ನೀಡಿದ್ದಾರೆ.


ಯಾವ ದಿನ ಯಡಿಯೂರಪ್ಪನವರೇ ನೀವು ಬೇಡ ಎಂದು ವರಿಷ್ಠರು ಹೇಳುತ್ತಾರೋ ಆಗ ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಯುತ್ತೇನೆ, ರಾಜೀನಾಮೆ ನೀಡಿ ಜನತೆ ಪರ ಕೆಲಸ ಮಾಡುತ್ತೇನೆ ಎಂದರು.
ಪರ್ಯಾಯ ನಾಯಕರಿಲ್ಲ ಎಂಬ ಭಾವನೆಯಿಲ್ಲ: ನನ್ನ ಬದಲಿಗೆ ಪರ್ಯಾಯ ನಾಯಕತ್ವ ಇಲ್ಲ ಎಂಬ ಮಾತನ್ನು ನಾನು ಒಪ್ಪುವುದಿಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ, ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ, ಹೈಕಮಾಂಡ್ ಸೂಚನೆ ನೀಡಿದರೆ ಯಾವುದೇ ಗೊಂದಲವಿಲ್ಲದೆ ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






