ಜನರಿಂದ ಅಪಪ್ರಚಾರ, ವೈದ್ಯರ ಮೇಲೆ ಹಲ್ಲೆ: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಐಎಂಎ ಮನವಿ & 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಅಪ ಪ್ರಚಾರ ಮಾಡುತ್ತಿರುವ ಜನರ ವಿರುದ್ಧ ಸೂಕ್ತ ಕ್ರಮ ಮತ್ತು ವೈದ್ಯರು ಭೀತಿಯಿಲ್ಲದೆ ಕೆಲಸ ಮಾಡುವಂತಾಗಲು ತಾವು ಮಧ್ಯ ಪ್ರವೇಶಿಸಬೇಕೆಂದು ಭಾರತೀಯ ವೈದ್ಯಕೀಯ ಸಂಘ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

Dr_Seuj_Kumar_Senapati_shows_his_bruises_and_wounds_after_he_was_beaten_by_a_group_of_people2

ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಹೊಸ ಘೋಷಣೆ ಪ್ರಕಟ?

ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 5 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

PM Narendra Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 5 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮಂತ್ರಿ ಕಾರ್ಯಾಲಯ, ಇಂದು ಸಾಯಂಕಾಲ 5 ಗಂಟೆಗೆ ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದೆ.

ಇಂದು ಪ್ರಧಾನಿಯವರು ಎಲ್ಲಾ ನಾಗರಿಕರು ಉಚಿತ ಕೋವಿಡ್ ಲಸಿಕೆ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಹಲವು ವರ್ಗಗಳಿಗೆ ಪರಿಹಾರ ಪ್ಯಾಕೇಜ್ ಘೋಷಿಸುತ್ತಾರೆ, ಬೇರೇನಾದರೂ ನಿರ್ಧಾರ ಪ್ರಕಟಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಕಳೆದ ವರ್ಷ ಕೋವಿಡ್-19 ದೇಶಕ್ಕೆ ಅಪ್ಪಳಿಸಿದ ನಂತರ ಹಲವು ಬಾರಿ ಪ್ರಧಾನಿಯವರು ದೇಶವನ್ನುದ್ದೇಶಿಸಿ ಮಾತನಾಡಿದ್ದರು. ದೇಶವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಹೊಸ ಘೋಷಣೆಗಳನ್ನು ಪ್ರಕಟಿಸಿದ್ದರು. (kpc)

ನವದೆಹಲಿ: ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಅಪ ಪ್ರಚಾರ ಮಾಡುತ್ತಿರುವ ಜನರ ವಿರುದ್ಧ ಸೂಕ್ತ ಕ್ರಮ ಮತ್ತು ವೈದ್ಯರು ಭೀತಿಯಿಲ್ಲದೆ ಕೆಲಸ ಮಾಡುವಂತಾಗಲು ತಾವು ಮಧ್ಯ ಪ್ರವೇಶಿಸಬೇಕೆಂದು ಭಾರತೀಯ ವೈದ್ಯಕೀಯ ಸಂಘ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

ಲಸಿಕೆ ಅಭಿಯಾನದ ವಿರುದ್ಧ ಅಪಪ್ರಚಾರ ನಡೆಸುವ ಯಾವುದೇ ವ್ಯಕ್ತಿ ವಿರುದ್ಧ ಸಾಂಕ್ರಾಮಿಕ  ಕಾಯಿಲೆಗಳ ಕಾಯ್ದೆ 1897, ಭಾರತೀಯ ಅಪರಾಧ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ಅಡಿ ಪ್ರಕರಣ ದಾಖಲಿಸಬೇಕು, ಕೋವಿಡ್-19 ಸೋಂಕಿತ ರೋಗಿಗಳ ಚಿಕಿತ್ಸೆಗೆ ಆರೋಗ್ಯ ಸಚಿವಾಲಯ ಹೊರಡಿಸಿರುವ ಶಿಷ್ಟಾಚಾರ ಮಾರ್ಗಸೂಚಿ ವಿರುದ್ಧ ಸಾಮಾನ್ಯ ಜನರಲ್ಲಿ ಅನುಮಾನ ಉಂಟುಮಾಡುವ ಯಾವುದೇ ವ್ಯಕ್ತಿಯ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು, ಆರೋಗ್ಯ ಸಚಿವಾಲಯದಿಂದ ಅನುಮೋದನೆ ಪಡೆಯದೆ ಜನರನ್ನು ದಡ್ಡರನ್ನಾಗಿಸುವ ಯಾವುದೇ ವ್ಯಕ್ತಿಯ ಪ್ರಯತ್ನ ಮತ್ತು ಸೋಕಾಲ್ಡ್  ಔಷಧಗಳನ್ನು ಮೊಟಕುಗೊಳಿಸಬೇಕೆಂದು
ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕರ್ತವ್ಯ ನಿರತ ವೈದ್ಯರು ಮತ್ತಿತರ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವ ಜನರಿಗೆ 10 ವರ್ಷಗಳ ಕಾಲ ಜೈಲಿಗೆ ಕಳುಹಿಸುವಂತಹ ಆರೋಗ್ಯ ಸೇವೆಗಳ ಸಿಬ್ಬಂದಿ ಮತ್ತು ಕ್ಲಿನಿಕಲ್ ಸ್ಥಾಪನೆಗಳು (ಹಿಂಸಾಚಾರ ಮತ್ತು ಆಸ್ತಿಗೆ ಹಾನಿ) ಮಸೂದೆ 2019 ತಕ್ಷಣವೇ ಪ್ರಕಟಿಸಬೇಕು. ಇಂತಹ ಹೀನ ಕೃತ್ಯಗಳಲ್ಲಿ ತೊಡಗಿರುವವರನ್ನು ಶಿಕ್ಷೆಗೆ ಗುರಿಪಡಿಸಬೇಕು ಆದ್ದರಿಂದ ಸಮಾಜ ವಿರೋಧಿ ಶಕ್ತಿಗಳು ಆರೋಗ್ಯ ಸಿಬ್ಬಂದಿ ಮೇಲೆ ದಾಳಿಯಲ್ಲಿ ತೊಡಗಿಸಿಕೊಳ್ಳುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದಾಗಿದೆ ಎಂದು ಐಎಂಎ ಹೇಳಿದೆ. 

ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಕೋವಿಡ್-ಸಾಂಕ್ರಾಮಿಕದಿಂದ ಮೃತಪಟ್ಟ ವೈದ್ಯರ ಕುಟುಂಬಗಳಿಗೆ ವಿಮೆಯನ್ನು ನೀಡುತ್ತಿರುವುದಕ್ಕೆ ಪ್ರಧಾನಿಗೆ ಅಭಿನಂದನೆ ಸಲ್ಲಿಸಿರುವ ಐಎಂಎ, ಯೋಜನೆ ಅನುಷ್ಠಾನದಲ್ಲಿನ ಅಡೆತಡೆಯಿಂದಾಗಿ ಮೊದಲ ಅಲೆಯಲ್ಲಿ ಮೃತಪಟ್ಟ 754 ವೈದ್ಯರ ಪೈಕಿ, ಕೇವಲ 168 ವೈದ್ಯರು ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಸಾಧ್ಯವಾಗಿದೆ ಎಂದು ಪ್ರಧಾನಿಯ ಗಮನಕ್ಕೆ ತರಲಾಗಿದೆ. 

ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಲಸಿಕೆಗಳು ಇರಲು ಬಿಡದೆ 18 ವರ್ಷಕ್ಕೂ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಬೇಕು, ಕೋವಿಡ್ -19 ರ ನಂತರದ ತೊಡಕುಗಳನ್ನು ವಿವರವಾಗಿ ಅಧ್ಯಯನ ಮಾಡಲು ಮತ್ತು . ಎಲ್ಲಾ  ಔಷಧ ವಿಭಾಗಗಳಲ್ಲಿ ಬಹುಮುಖಿ ಚಿಕಿತ್ಸೆಯ ಮಾರ್ಗಸೂಚಿಗಳನ್ನು ಹೊರತರುವಂತೆ ಪ್ರತ್ಯೇಕ ಸಂಶೋಧನಾ ಕೋಶವನ್ನು ಸ್ಥಾಪಿಸುವಂತೆ ಐಎಂಎ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದೆ.

ಮಾನಸಿಕ ಹಾಗೂ ದೈಹಿಕವಾಗಿ ಯಾವುದೇ ಭಯವಿಲ್ಲದೆ ವೈದ್ಯಕೀಯ ಸಿಬ್ಬಂದಿ ಬದ್ಧತೆಯಿಂದ ಕೆಲಸ ಮಾಡಲು ವಿಶ್ವಾಸ ಮೂಡಿಸಲು ಜೂನ್ 18 ರಂದು ರಾಷ್ಟ್ರೀಯ ಪ್ರತಿಭಟನಾ ದಿನವಾಗಿ ಆಚರಿಸುತ್ತಿರುವುದಾಗಿ ಐಎಂಎ ಪತ್ರದಲ್ಲಿ ತಿಳಿಸಿದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *