ಕೋವಿಡ್ ಲಸಿಕೆ: ಬಿಜೆಪಿ ಕಾರ್ಯಕರ್ತರಿಂದ ಹೊಸ ಕಾರ್ಯಯೋಜನೆ

ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ. 

ಭಾರತದಲ್ಲಿ ಕೊರೋನಾ ಲಸಿಕೆಗೆ ಮೊದಲ ಸಾವು: ಖಚಿತ ಪಡಿಸಿದ ರಾಷ್ಟ್ರೀಯ ಸರ್ಕಾರಿ ಸಮಿತಿ

ದೇಶದಲ್ಲಿ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್ ನಿಂದ ಮೃತಪಟ್ಟಿದ್ದಾನೆ ಎಂದು ಸರ್ಕಾರಿ ಸಮಿತಿ ದೃಢಪಡಿಸಿದೆ.

Represent purposes only

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್ ನಿಂದ ಮೃತಪಟ್ಟಿದ್ದಾನೆ ಎಂದು ಸರ್ಕಾರಿ ಸಮಿತಿ ದೃಢಪಡಿಸಿದೆ.

ಲಸಿಕೆ ಪಡೆದ ನಂತರ ವ್ಯಕ್ತಿಯಲ್ಲಿ ಅಡ್ಡಪರಿಣಾಮವಾಗಿ ಅನಾಫಿಲ್ಯಾಕ್ಸಿಸ್(ತೀವ್ರ ಅಲರ್ಜಿ ಪರಿಣಾಮ) ಗೆ ಗುರಿಯಾಗಿದ್ದು ಇದರಿಂದಲೇ 2021ರ ಮಾರ್ಚ್ 8ರಂದು ಮೃತಪಟ್ಟಿರುವುದಾಗಿ ರಾಷ್ಟ್ರೀಯ ಎಇಎಫ್‌ಐ ಸಮಿತಿಯ ವರದಿಯಲ್ಲಿ ತಿಳಿಸಿದೆ.

ಇನ್ನು ಜನವರಿ 16 ಮತ್ತು 19ರಂದು ಲಸಿಕೆ ಪಡೆದಿದ್ದ ಇಬ್ಬರಿಗೂ ತೀವ್ರ ಅಲರ್ಜಿಯಾಗಿದ್ದು ಕೂಡಲೇ ಅವರು ಆಸ್ಪತ್ರೆಗೆ ದಾಖಲಾದ ನಂತರ ಚೇತರಿಸಿಕೊಂಡಿದ್ದಾರೆ ಎಂದು ಸಮಿತಿ ತಿಳಿಸಿದೆ.

31 ಪ್ರಕರಣಗಳ ಸಾಂದರ್ಭಿಕ ಮೌಲ್ಯಮಾಪನದ ಫಲಿತಾಂಶಗಳನ್ನು ಸಮಗ್ರ ಪರಿಶೀಲನೆ ಮತ್ತು ಚರ್ಚೆಗಳ ನಂತರ ಫೆಬ್ರವರಿ 5ರಂದು(ಐದು ಪ್ರಕರಣಗಳು), ಮಾರ್ಚ್ 9(ಎಂಟು ಪ್ರಕರಣಗಳು) ಮತ್ತು ಮಾರ್ಚ್ 31ರಂದು(18 ಪ್ರಕರಣಗಳು) ವರದಿಯಾಗಿತ್ತು ಎಂದು  ರಾಷ್ಟ್ರೀಯ ಎಇಎಫ್‌ಐ ಸಮಿತಿ ತಿಳಿಸಿದೆ.

ವರದಿಯ ಪ್ರಕಾರ, “ಸಾಂದರ್ಭಿಕವಾಗಿ ಮೌಲ್ಯಮಾಪನ ಮಾಡಲಾದ 31 ಪ್ರಕರಣಗಳಲ್ಲಿ 18 ಸಾವುಗಳು ಲಸಿಕೆ ಪಡೆದ ನಂತರ ಸಾಂದರ್ಭಿಕವಾಗಿ, ಅಂದರೆ ಕಾಕತಾಳೀಯವಾಗಿ ಸಂಭವಿಸಿದೆ. ಇದಕ್ಕೂ ಲಸಿಕೆಗೂ ಸಂಬಂಧವಿಲ್ಲ. ಇನ್ನು ಏಳು ಸಾವುಗಳು ಎರಡೂ ಕಾರಣಗಳಿಗೆ ಸಂಭವಿಸಿದೆ. ಇನ್ನು ಮೂರು ಸಾವುಗಳು ಲಸಿಕೆಯಿಂದಾಗಿದೆ ಎಂದು ತಿಳಿದುಬಂದಿದ್ದು ಒಂದು ಸಾವು ಉದ್ವೇಗದಿಂದಾಗಿದ್ದರೆ ಮತ್ತೆರಡು ಪ್ರಕರಣಗಳನ್ನು ವರ್ಗಿಕರಿಸಲು ಸಾಧ್ಯವಾಗುತ್ತಿಲ್ಲ ಎಂದು ಸಮಿತಿ ತಿಳಿಸಿದೆ. 

ಲಸಿಕೆ ಉತ್ಪನ್ನ-ಸಂಬಂಧಿತ ಪ್ರತಿಕ್ರಿಯೆಗಳು ನಿರೀಕ್ಷಿತ ಪ್ರತಿಕ್ರಿಯೆಗಳಾಗಿದ್ದು, ಪ್ರಸ್ತುತ ವೈಜ್ಞಾನಿಕ ಪುರಾವೆಗಳ ಆಧಾರದ ಮೇಲೆ ಲಸಿಕೆ ಕಾರಣವೆಂದು ಎಇಎಫ್ಐ ವರದಿ ಹೇಳಿದೆ. ಅಂತಹ ಪ್ರತಿಕ್ರಿಯೆಗಳ ಉದಾಹರಣೆಗಳೆಂದರೆ ಅಲರ್ಜಿ ಮತ್ತು ಅನಾಫಿಲ್ಯಾಕ್ಸಿಸ್ ಇತ್ಯಾದಿ.

File photo

ಬೆಂಗಳೂರು: ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ. 

ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್ ಅವರು, ಮುಂದಿನ ಎರಡು ಅಥವಾ ಮೂರು ತಿಂಗಳಲ್ಲಿ ಬಿಜೆಪಿ ರಾಜ್ಯ ಘಟಕವು ಕರ್ನಾಟಕದಲ್ಲಿ ಶೇ 100 ರಷ್ಟು ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ರಾಜ್ಯದಾದ್ಯಂತ ಸ್ಥಾಪಿಸಲಾಗಿರುವ ಬೂತ್‌ಗಳಲ್ಲಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. ಅಲ್ಲದೆ, 25 ಲಕ್ಷ ಕಾರ್ಯಕರ್ತರು ಸೇವೆ ಸಲ್ಲಿಸಲಿದ್ದಾರೆಂದು ತಿಳಿಸಿದ್ದಾರೆ. 

https://imasdk.googleapis.com/js/core/bridge3.464.0_en.html#goog_1581465593

ಕೋವಿಡ್ ಎಲ್ಲಾ ನಿಯಮಗಳು ಹಾಗೂ ಮುನ್ನೆಚ್ಚರಿಕೆಗಳನ್ನು ಅನುಸರಿಸಿ ಕಳೆದ ತಿಂಗಳಷ್ಟೇ ರಾಜ್ಯ ಬಿಜೆಪಿ ರಾಜ್ಯದ 29,000 ಗ್ರಾಮಗಳ 58,000 ಬೂತ್‌ಗಳಲ್ಲಿ ಕೋವಿಡ್ ಸೋಂಕಿತರಿಗೆ ಸಹಾಯ ಮಾಡುವ ಕಾರ್ಯವನ್ನು ಆರಂಭಿಸಿತ್ತು. 

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 7 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಸೇವಾ ಹಿ ಸಂಘಟನ್ ಕಾರ್ಯಕ್ರಮವನ್ನು ಬಿಜೆಪಿ ಆರಂಭಿಸಿದೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *