Congress visit-ರಾಜ್ಯ ಕಾಂಗ್ರೆಸ್’ನಿಂದ ಮನೆ-ಮನೆ ಭೇಟಿ ಅಭಿಯಾನ

ಕೋವಿಡ್ ಮೂರನೇ ಅಲೆಯ ಆತಂಕದ ಅವಧಿಯಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷರು ಕೋವಿಡ್ ನಿಯಮ ಗಾಳಿ ಗೆ ತೂರಿ ಕಾರ್ಯಕ್ರಮ ಮಾಡುವುದು, ಆಡಳಿತ ಸರ್ಕಾರದ ಶಾಸಕರು, ಸಚಿವರು ನಾಯಕತ್ವ ಬದಲಾಗಬೇಕೆಂದು ಬೀದಿರಂಪ ಮಾಡುವುದು ಇವೆಲ್ಲಾ ಜವಾಬ್ಧಾರಿಯುತ ಜನಪ್ರತಿನಿಧಿಗಳು, ಜನಪರ ಸರ್ಕಾರದ ಲಕ್ಷಣಗಳಲ್ಲ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಭೀಮಣ್ಣ ನಾಯ್ಕ ಹೇಳಿದ್ದಾರೆ.

ಸಿದ್ಧಾಪುರದಲ್ಲಿ ಲಯನ್ಸ್ ಬಾಲಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಾಲೂಕಿನ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಆರೋಗ್ಯ ಹಸ್ತ ಕಾರ್ಯಕ್ರಮದ ಮೂಲಕ ಕೋವಿಡ್ ಸೇನಾನಿಗಳ ಪಾತ್ರ ಮಾಡಿದೆ. ಕೋವಿಡ್ ಅವಧಿ ನಂತರ ಕೂಡಾ ಕಾಂಗ್ರೆಸ್ ನ ಜನಪರ ಕಾರ್ಯಕ್ರಮ ಮುಂದುವರಿಯುತ್ತದೆ ಎಂದರು. ಬ್ಲಾಕ್ ಅಧ್ಯಕ್ಷ ವಸಂತ ನಾಯ್ಕ ಸ್ವಾಗತಿಸಿದರು. ಕಾಂಗ್ರೆಸ್ ನ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಕೋವಿಡ್ ಸಂಕಷ್ಟ:

ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟಕ್ಕೀಡಾದ ಕುಟುಂಬಗಳ ಕಷ್ಟ ಆಲಿಸಿ ಸಾಂತ್ವನ ಹೇಳಲು ಜು.1ರಿಂದ 30 ದಿನಗಳ ಕಾಲ ಕೊರೋನಾ ಯೋಧರು ಮನೆ-ಮನೆಗೆ ಭೇಟಿ ಅಭಿಯಾನ ಹಮ್ಮಿಕೊಳ್ಳಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

DK shivkumar

ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟಕ್ಕೀಡಾದ ಕುಟುಂಬಗಳ ಕಷ್ಟ ಆಲಿಸಿ ಸಾಂತ್ವನ ಹೇಳಲು ಜು.1ರಿಂದ 30 ದಿನಗಳ ಕಾಲ ಕೊರೋನಾ ಯೋಧರು ಮನೆ-ಮನೆಗೆ ಭೇಟಿ ಅಭಿಯಾನ ಹಮ್ಮಿಕೊಳ್ಳಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವು-ನೋವು ಉಂಡವರು, ಉದ್ಯೋಗ, ಆರೋಗ್ಯ ಕಳೆದುಕೊಂಡವರು, ಆರ್ಥಿಕವಾಗಿ ಸಂಕಷ್ಟಕ್ಕೀಡಾದ ರೈತರು, ಕಾರ್ಮಿಕರು, ಬಡವರು ಸೇರಿದಂತೆ ಎಲ್ಲಾ ವರ್ಗದವರ ಕಷ್ಟಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುವುದು. ಪಂಚಾಯಿತಿಯಿಂದ ಪಾರ್ಲಿಮೆಂಟ್ ಕ್ಷೇತ್ರದವರೆಗೂ, ಬ್ಲಾಕ್ ಮಟ್ಟದಿಂದ ಟೌನ್ ಗಳ ವರೆಗೂ ಕೊರೋನಾ ವಾರಿಯರ್ ಗಳನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ. 

ಸ್ಥಳೀಯ ನಾಯಕರ ಮುಂದಾಳತ್ವದಲ್ಲಿ ಪ್ರತಿ ಬ್ಲಾಕ್ ನಲ್ಲಿ 10 ಸದಸ್ಯರ ತಂಡ ರಚಿಸಿ ಕನಿಷ್ಠ 200 ಕುಟುಂಬಗಳನ್ನು ಭೇಟಿ ಮಾಡಿ, ಸಾಂತ್ವನ ಹೇಳುವ ಗುರಿ ಹೊಂದಿದ್ದೇವೆ. ಆ ಕುಟುಂಬಗಳು ಏನೆಲ್ಲಾ ಸಂಕಷ್ಟ ಅನುಭವಿಸಿವೆ, ನಾವು ಹೇಗೆ ನೆರವಾಗಬಹುದು, ಸರ್ಕಾರದ ಮೇಲೆ ಒತ್ತಡ ಹಾಕಿ ಎನೆಲ್ಲಾ ನೆರವು ಕೊಡಿಸಬಹುದು ಎಂಬ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ. 

ಈ ಬಗ್ಗೆ ಎಐಸಿಸಿಗೂ ವರದಿ ನೀಡಲಾಗೂವುದು. ಜನರ ಕಷ್ಟಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗುತ್ತದೆ ಎಂದಿದ್ದಾರೆ. 

ಕೊರೋನಾಗೆ ಬಲಿಯಾದವರ ಆಡಿಟ್ ಮಾಡಿ ಎಂದು ಕೇಳಿದರೂ ಆ ಬಗ್ಗೆ ಸರ್ಕಾರ ಚಿಂತನೆ ಮಾಡಿಲ್ಲ. ಕೇವಲ ಸೀಮಿತಿ ಮಾನದಂಡಗಳನ್ನು ಇಟ್ಟುಕೊಂಡು, ಕೆಲವರಿಗೆ ಮಾತ್ರ ರೂ.1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿತು. ಇನ್ನು ಕೇಂದ್ರ ಸರ್ಕಾರ ರೂ.4 ಲಕ್ಷ ಪರಿಹಾರ ಕೊಡುವುದಾಗಿ ಘೋಷಿಸಿ, 8 ತಾಸುಗಳಲ್ಲಿ ಅದನ್ನು ಹಿಂಪಡೆಯಿತು. 20 ಲಕ್ಷ ಕೋಟಿ ಪ್ಯಾಕೇಜ್ ಯಾರಿಗೆ ನೀಡಿದ್ದಾರೆಂಬುದು ಗೊತ್ತಿಲ್ಲ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಅಭಿಯಾನ ಹಮ್ಮಿಕೊಂಡಿದ್ದೇವೆಂದು ವಿವರಿಸಿದರು. 

ಕೊರೋನಾದಿಂದ ಮೃತಪಟ್ಟವರ ಕುಟುಂಬದವರು ಪರಿಹಾರ ಪಡೆಯಲು ನೋಂದಣಿ ಮಾಡಿಸಿಕೊಳ್ಳುವ ದಿನಾಂಕ ಸರ್ಕಾರ 30ನೇ ತಾರೀಕಿನವರೆಗೆ ವಿಸ್ತರಿಸಿದ್ದು, ಹೀಗಾಗಿ ನಮ್ಮ ಕಾರ್ಯಕರ್ತು ಎಲ್ಲಾ ವರ್ಗದವರ ಮಾಹಿತಿ ಪಡೆದು, ನೋಂದಣಿ ಮಾಡಿಸಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ಸದ್ಯಕ್ಕೆ ಕಾಂಗ್ರೆಸ್ ನಾಯಕರಿಂದ ಕೈಲಾದಷ್ಟು ಸಹಾಯ ಮಾಡಲಾಗುವುದು. ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದಿದ್ದಾರೆ. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *