ಕಳ್ಳತನ ಪ್ರಕರಣ: ಶಿರಸಿಯ 4,ಅಂಕೋಲಾದ4 ಜನ ಸೇರಿ 8 ಜನರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಅಂಕೋಲಾ, ಮತ್ತು ಕಾರವಾರ ತಾಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಮನೆಗೆ ಕನ್ನ ಹಾಕಿ ಕಳ್ಳತನ ಮಾಡುತ್ತಿದ್ದ 07 ಜನ ಆರೋಪಿತರನ್ನು ಹಾಗೂ ಒಬ್ಬ ಕಳುವಿನ ಮಾಲನ್ನು ಸ್ವೀಕರಿಸುವ ವ್ಯಕ್ತಿ ಸೇರಿದಂತೆ 08 ಜನರನ್ನು ಕುಮಟಾ ವೃತ್ತ ನಿರೀಕ್ಷಕರಾದ ಶಿವಪ್ರಕಾಶ ನಾಯ್ಕ ರವರ ನೇತೃತ್ವದಲ್ಲಿ ಗೋಕರ್ಣ ಪೊಲೀಸರು ಬಂಧಿಸಿ, ಗೋಕರ್ಣ ಪೊಲೀಸ್ ಠಾಣೆಯ 05 ಪ್ರಕರಣಗಳು, ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯ 11 ಪ್ರಕರಣಗಳು ಹಾಗೂ ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ 02 ಪ್ರಕರಣಗಳು ಸೇರಿದಂತೆ ಒಟ್ಟೂ 18 ಕಳ್ಳತನ ಪ್ರಕರಣಗಳನ್ನು ಭೇಧಿಸಿ ಒಟ್ಟೂ 08 ಜನ ಆರೋಪಿತರನ್ನು ಬಂಧಿಸಿದ್ದಾರೆ.

ಈ ಆರೋಪಿತರಿಂದ ಕಳ್ಳತನ ಮಾಡಿದ 351 ಗ್ರಾಂ ಬಂಗಾರದ ಆಭರಣಗಳು, 01 ಕೆ.ಜಿ ಬೆಳ್ಳಿಯ ಆಭರಣ, 05 ಗ್ಯಾಸ್ ಸಿಲೆಂಡರಗಳು , 01 ಏರ್ ಗನ್, 03 ಮೋಟಾರ್ ಸೈಕಲ್ ಹಾಗೂ 08 ಮೊಬೈಲ್ ಪೋನ್ ಗಳೂ ಸೇರಿದಂತೆ ಒಟ್ಟೂ 19 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ. ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ವಿವರ ಈ ಕೆಳಗಿನಂತಿ ದೆ.

1. ಪ್ರಶಾಂತ್ ತಂದೆ ಕಿಶೋರ ನಾಯ್ಕ, ಪ್ರಾಯ- 23 ವರ್ಷ, ವೃತ್ತಿ- ಚಾಲಕ ಸಾ|| ಬಬ್ರುವಾಡ, ಅಂಕೋಲಾ.2. ಹರ್ಷಾ ತಂದೆ ನಾಗೇಂದ್ರ ನಾಯ್ಕ. ಪ್ರಾಯ 22 ವರ್ಷ, ವೃತ್ತಿ- ಚಾಲಕ ಸಾ|| ತೆಂಕಣಕೇರಿ, ಅಂಕೋಲಾ.3. ಶ್ರೀಕಾಂತ್ ತಂದೆ ಗಣಪತಿ ದೇವಾಡಿಗ, ಪ್ರಾಯ- 27 ವರ್ಷ, ವೃತ್ತಿ- ಗೌಂಡಿ ಕೆಲಸ ಸಾ|| ಕಸ್ತೂರಬಾ ನಗರ, ಶಿರಸಿ 4. ನಿಹಾಲ ತಂದೆ ಗೋಪಾಲಕೃಷ್ಣ ದೇವಳಿ ಪ್ರಾಯ- 26 ವರ್ಷ, ವೃತ್ತಿ- ಗಾರೆ ಕೆಲಸ ಸಾ|| ಕಸ್ತೂರಬಾ ನಗರ 2 ನೇ3 ಕ್ರಾಸ್, ಶಿರಸಿ5. ಸಂದೀಪ ತಂದೆ ಹನುಮಂತ ಮರಾಠೆ, ಪ್ರಾಯ- 25 ವರ್ಷ, ವೃತ್ತಿ- ಬಾರ್ಬೆಂಡಿಂಗ್ ಸಾ|| ಲಂಡಕನಳ್ಳಿ, ದೊಡ್ನಳ್ಳಿ ರಸ್ತೆ, ಶಿರಸಿ. 6) ಗಣೇಶ ಮಾರುತಿ ನಾಯ್ಕ ಪ್ರಾಯ 24 ವರ್ಷ, ವೃತ್ತಿ ಚಾಲಕ ಸಾ|| ಶಿರಕುಳಿ, ಅಂಕೋಲಾ.7) ರಾಹುಲ್ ತಂದೆ ಕೃಷ್ಣಾನಂದ ಬಂಟ್ ಪ್ರಾಯ- 22 ವರ್ಷ, ವೃತ್ತಿ- ಟೈಲ್ಸ್ ಪಿಟ್ಟಿಂಗ್ ಸಾ|| ಕೇಣಿ, ಅಂಕೋಲಾ😎 ಅಶೋಕ ತಂದೆ ಗಣಪತಿ ರೈಕರ್, ಪ್ರಾಯ- 42 ವರ್ಷ, ವೃತ್ತಿ- ಬಂಗಾರದ ಕೆಲಸ ಸಾ|| ಅರೆಕಪ್ಪ, ಬನವಾಸಿ ರಸ್ತೆ,ಶಿರಸಿ.(ಕಳುವಿನ ಮಾಲು ಸ್ವೀಕಾರ) ಈ ಕಾರ್ಯಾಚರಣೆಯಲ್ಲಿ ಶ್ರೀ ಬೆಳ್ಳಿಯಪ್ಪ ಕೆ.ಯು, ಪೊಲೀಸ್ ಉಪಾಧೀಕ್ಷಕರು ಭಟ್ಕಳ ಉಪ ವಿಭಾಗ, ಭಟ್ಕಳ, ಶ್ರೀ ಶಿವಪ್ರಕಾಶ ಆರ್ ನಾಯ್ಕ, ವೃತ್ತ ನಿರೀಕ್ಷಕರು, ಕುಮಟಾ, ಗೋಕರ್ಣ ಪೊಲೀಸ್ ಠಾಣೆಯ ಪಿ.ಎಸ್.ಐ ನವೀನ್ ಎಸ್ ನಾಯ್ಕ, ಅಂಕೋಲಾ ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರವೀಣಕುಮಾರ್, ಪೊಲೀಸ್ ಸಿಬ್ಬಂದಿಯವರಾದ ರಾಜೇಶ ಹೆಚ್ ನಾಯ್ಕ, ಸಚಿನ್ ಜಿ ನಾಯ್ಕ, ಗೋರಕನಾಥ ರಾಣೆ, ಕಿರಣಕುಮಾರ್ ಬಾಳೂರ, ನಾಗರಾಜ ಪಟಗಾರ, ರಾಜು ನಾಯ್ಕ, ಅರುಣ ನಾಯ್ಕ, ನಾಗರಾಜ ನಾಯ್ಕ, ಎ.ಎಸ್.ಐ ಅರವಿಂದ ಶೆಟ್ಟಿ, ಎ.ಎಸ್.ಐ ನಾರಾಯಣ ಗುನಗಿ, ಎ.ಎಸ್.ಐ ರಾಜು ಜೆ ಆಗೇರ, ವಿನಯ ಗೌಡ, ಜಗದೀಶ ನಾಯಕ, ಅನುರಾಜ ನಾಯ್ಕ, ಸಂಜೀವ ನಾಯ್ಕ, ಅರುಣ ಮುಕ್ಕಣ್ಣನವರ, ಶಿವಾನಂದ ಗೌಡ, ಅಮಿತ ಸಾವಂತ್, ವಸಂತ ನಾಯ್ಕ, ರವಿ ಹಾಡಕರ, ಮಹೇಶ ನಾಯ್ಕ, ರಾಮಯ್ಯ ನಾಯ್ಕ, ರಾಜು ಮಾಳಿ, ಉದಯ ತಾಂಡೇಲ ಮತ್ತು ಅಂಕೋಲಾ ಪೊಲೀಸ್ ಠಾಣೆಯ ಮಂಜುನಾಥ ಲಕ್ಮಾಪುರ, ಶ್ರೀಕಾಂತ ಕೆ ಹಾಗೂ ತಾಂತ್ರಿಕ ವಿಭಾಗ, ಜಿಲ್ಲಾ ಪೊಲೀಸ್ ಕಚೇರಿಯ ರಮೇಶ ನಾಯ್ಕ, ಸುಧೀರ ಮಡಿವಾಳ ರವರು ಪಾಲ್ಗೊಂಡಿದ್ದ್ರು, ಇವರ ಪತ್ತೆ ಕಾರ್ಯವನ್ನು ಪ್ರಶಂಸಿಸಿ, ಬಹುಮಾನ ಘೋಷಿಸಿರುತ್ತೇನೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *