ಸಿದ್ದು ಹಲಸು ತಳಿಯಿಂದ 2 ವರ್ಷಗಳಲ್ಲಿ 22 ಲಕ್ಷ ಆದಾಯ ಗಳಿಸಿದ ರೈತ, “ವಾಣಿಜ್ಯ ಕೃಷಿಗೆ ಇದು ಸೂಕ್ತ”- ಸಿಎಂ ಯಡಿಯೂರಪ್ಪ

ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು  ಮನೆಯಂಗಳ ಮತ್ತು  ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. 

The elite siddu jackfruit sapling was presented  to Chief Minister B.S.Yediyurappa under  collaborative plant development programme

ಬೆಂಗಳೂರು: ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು  ಮನೆಯಂಗಳ ಮತ್ತು  ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. 

ಸಹಭಾಗಿ ಸಸ್ಯ ಅಭಿವೃದ್ದಿ ಕಾರ್ಯಕ್ರಮದ ಅಡಿ ಸಿದ್ದು ಹಲಸು ತಳಿಯ ಸಸ್ಯಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅರ್ಪಿಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಹಲಸಿನ ತಳಿಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದು,  ತುಮಕೂರು ಜಿಲ್ಲೆಯ ಚೇಳೂರು ಗ್ರಾಮ ಎಸ್.ಎಸ್.ಪರಮೇಶ್ ಎಂಬುವರ ತೋಟದಲ್ಲಿ ಈ ತಳಿಯನ್ನು  ಗುರುತಿಸಲಾಗಿರುವುದು ಶ್ಲಾಘನೀಯ ಎಂದರು. 

 ಉಳಿದ ಹಲಸಿನ ತಳಿಗಳಿಗೆ ಹೋಲಿಸಿದರೆ  ತಾಮ್ರ ಕೆಂಪು ಬಣ್ಣದ ಸಿದ್ದು ಹಲಸು  ಅಧಿಕ ಪೌಷ್ಠಿಕಾಂಶಗಳ ಜೊತೆಗೆ ಔಷಧೀಯ ಗುಣಗಳನ್ನು  ಹೊಂದಿದೆ. ದೇಶದಲ್ಲಿ ಲಭ್ಯವಿರುವ ಎಲ್ಲಾ ಹಲಸು ತಳಿಗಳ ಪೈಕಿ ಸಿದ್ದು ಹಲಸು ಶ್ರೇಷ್ಠ ಮತ್ತು ವಿಶಿಷ್ಟ ಎಂಬ ಮಾನ್ಯತೆ ಪಡೆದಿದೆ ಎಂದರು.  

ಎಸ್.ಎಸ್ ಪರಮೇಶ್ ಅವರು ಕಳೆದ 2 ವರ್ಷಗಳಲ್ಲಿ 22 ಲಕ್ಷ ಆದಾಯವನ್ನು ಗಳಿಸಿದ್ದು, ಜೀವ ವೈವಿಧ್ಯತೆಯನ್ನು ಕಾಪಾಡುವುದರೊಂದಿಗೆ ರೈತರು ತಮ್ಮ ಆದಾಯವನ್ನೂ ದ್ವಿಗುಣಗೊಳಿಸಿಕೊಳ್ಳಬಹುದಾಗಿದೆ ಎಂದು ನಿರೂಪಿಸಿದ್ದಾರೆ. 
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಈವರೆಗೆ ಒಂದು ಲಕ್ಷ ಸಸಿಗಳನ್ನು ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ 31 ಸಾವಿರ  ಕೃಷಿಕರಿಗೆ ವಿತರಿಸಲಾಗಿದೆ. ರಾಜ್ಯ ರೈತರು ಈ ವಿಶಿಷ್ಟ ಪ್ರಬೇಧದ ಹಲಸನ್ನು ಬೆಳೆಸುವ ಮೂಲಕ ಈ ತಳಿಯನ್ನು ಸಂರಕ್ಷಿಸುವುದಲ್ಲದೆ ಆರ್ಥಿಕ ಭದ್ರತೆಯನ್ನು ಕಂಡುಕೊಳ್ಳಬಹುದು. 

ಶಿಕಾರಿಪುರದ ತಮ್ಮ ತೋಟದಲ್ಲಿ ಸಿದ್ದು ಹಲಸು ಸಸಿಗಳನ್ನು ಬೆಳೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಬೆಳೆಸಲು ಆಸಕ್ತಿ ತೋರಿದರು. 

ಈ ಸಂದರ್ಭದಲ್ಲಿ ಸಂಸದ ಜಿ.ಎಸ್.ಬಸವರಾಜು, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ  ನಿರ್ದೇಶಕ  ಡಾ. ಬಿ.ಎನ್.ಎಸ್ ಮೂರ್ತಿ, ತುಮಕೂರಿನ   ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ  ಸಿ.ಹೆಚ್ .ಇ ಎಸ್ . ಮುಖ್ಯಸ್ಥ . ಜಿ.ಕರುಣಾಕರನ್,  ಹಾಗೂ ಸಿದ್ದು ಹಲಸು ಬೆಳೆದ ರೈತ  ಎಸ್.ಎಸ್.ಪರಮೇಶ್  ಮತ್ತಿತರರು ಉಪಸ್ಥಿತರಿದ್ದರು.(kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *