ಯೋಗೇಶ್ವರ್-ಯತ್ನಾಳ್ ರಹಸ್ಯ ಭೇಟಿ: ಬಿಜೆಪಿಯಲ್ಲಿ ಶುರುವಾದ ತಳಮಳ

ಆಡಳಿತಾರೂಢ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್​ ಬೆಂಗಳೂರಿಗೆ ಬಂದು ಪಕ್ಷದಲ್ಲಿ ಬಂಡಾಯಕ್ಕೆ ಮುಲಾಮು ಹಚ್ಚಲು ಯತ್ನಿಸಿದ್ದರು…

BJP MLA Basanagouda Patil Yatnal

ವಿಜಯಪುರ: ಆಡಳಿತಾರೂಢ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್​ ಬೆಂಗಳೂರಿಗೆ ಬಂದು ಪಕ್ಷದಲ್ಲಿ ಬಂಡಾಯಕ್ಕೆ ಮುಲಾಮು ಹಚ್ಚಲು ಯತ್ನಿಸಿದ್ದರು. ರಾಜ್ಯದಲ್ಲಿ ನಾಯಕತ್ವ ಬದಲಾಣೆಯಿಲ್ಲ ಎಂದು ಘಂಟಾಘೋಷವಾಗಿ ಹೇಳಿದ್ದರು. ಆದರೆ ಬಂಡಾಯ/ ಅತೃಪ್ತಿಗಳು ಇನ್ನೂ ರಾಜ್ಯ ಬಿಜೆಪಿಯಲ್ಲಿ ಮನೆಮಾಡಿದೆ ಎನ್ನಲು ಕೆಲ ದಿಢೀರ್ ಬೆಳವಣಿಗೆಗಳು ಕಂಡು ಬಂದಿವೆ. 

ಅತ್ತ ರಾಜಧಾನಿ ಬೆಂಗಳೂರಿಗೆ ಬಂದಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದ್ದಕ್ಕಿದ್ದಂತೆ ದೆಹಲಿಗೆ ಹಾರಿದ್ದಾರೆ.  ರಮೇಶ್ ಮುಂಬೈ ಪ್ಲ್ಯಾನ್‌ ಚೇಂಜ್‌ ಮಾಡಿ, ಬೆಗಳೂರಿಗೆ ಬಂದಿದ್ದು ಯಾಕೆ..? ಯಾರ ಸಲಹೆಯಂತೆ ದೆಹಲಿಗೆ ಮತ್ತೆ ಹೋಗಿದ್ದಾರೆ..? ಇಲ್ಲಿ ಬೆಂಗಳೂರಿನಲ್ಲಿ ಇನ್ನೂ 2 ದಿನ ಉಳಿಯುವ ಯೋಜನೆಯಲ್ಲಿದ್ದ ರಮೇಶ್​ ಜಾರಕಿಹೊಳಿ ದಿಢಿರನೆ ದೆಹಲಿಗೆ ಇದ್ದಕ್ಕಿದ್ದಂತೆ ಹಾರಿದ್ದೇಕೆ ಎಂಬುದಕ್ಕೆ ಉತ್ತರ ಸಿಕ್ಕಿಲ್ಲ.

ಈ ಮಧ್ಯೆ,​  ಸಚಿವ ಸಿ.ಪಿ. ಯೋಗೇಶ್ವರ್ ಅವರು ಶಾಸಕ ಬಸನಗೌಡ ಯತ್ನಾಳ್ ಅವರನ್ನು ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. 

ಭೇಟಿಯ ವೇಳೆ ಸಚಿವ ಯೊಗೇಶ್ವರಗೆ ಬಸನಗೌಡ ಯತ್ನಾಳ್ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.  ಕೆಲ ಕಾಲ ಶಾಸಕ ಯತ್ನಾಳ್ ಹಾಗೂ ಸಚಿವ ಯೋಗೇಶ್ವರ ರಹಸ್ಯವಾಗಿ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. 

ಈ ನಡುವೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಮತ್ತೊಬ್ಬ ನಾಯಕ ಎ.ಹೆಚ್.ವಿಶ್ವನಾಥ್ ಅವರು ಜುಲೈ ತಿಂಗಳಿನಲ್ಲಿ ಎಸ್ಎಸ್ಎಲ್’ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಕಿಡಿಕಾರಿದ್ದಾರೆ. 

ಸಚಿವರ ಆಪ್ತ ಮೂಲಗಳು ಮಾಹಿತಿ ನೀಡಿರುವ ಪ್ರಕಾರ ಈ ನಾಯಕರಿಗೆ ರಾಷ್ಟ್ರೀಯ ಮಟ್ಟಜ ನಾಯಕರು ಹಾಗೂ ರಾಜ್ಯದ ಕೆಲ ನಾಯಕರ ಬೆಂಬಲವಿದೆ ಎಂದು ಹೇಳಲಾಗುತ್ತಿದೆ. 

ಯತ್ನಾಳ್ ಅವರನ್ನು ಭೇಟಿ ಮಾಡಿರುವ ಯೋಗೇಶ್ವರ್ ಅವರು ಈ ಹಿಂದೆ ಮುಖ್ಯಮಂತ್ರಿಗಳ ವಿರುದ್ಧ ಟೀಕೆ ಮಾಡಿದ್ದ ಪಂಚಮಸಾಲಿ ಮಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಈ ಎಲ್ಲಾ ಬೆಳವಣಿಗೆಗಳು ಇದ್ದಕ್ಕಿದ್ದಂತೆ ನಡೆದಿದ್ದು, ರಾಜ್ಯ ಬಿಜೆಪಿಯಲ್ಲಿ ತಳಮಳವನ್ನು ಶುರು ಮಾಡಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *