ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ ಹುದ್ದೆ ಸೃಷ್ಟಿ!

ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ವಿದೇಶಗಳಲ್ಲಿ ಇರುವಂತೆ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ ಎಂಬ ಹೊಸ ಹುದ್ದೆಗಳನ್ನು ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಸೃಷ್ಟಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Basavaraj Bommai

ಬೆಂಗಳೂರು: ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ವಿದೇಶಗಳಲ್ಲಿ ಇರುವಂತೆ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ ಎಂಬ ಹೊಸ ಹುದ್ದೆಗಳನ್ನು ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಸೃಷ್ಟಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅಪರಾಧ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅಲ್ಲಿ ಎಲ್ಲ ರೀತಿಯ ಸಾಕ್ಷ್ಯವನ್ನು ಸಂಗ್ರಹಿಸಿ ಅಪರಾಧಿಯನ್ನು ಪತ್ತೆ ಮಾಡುವಲ್ಲಿ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ (scene of crime officer) ಪರಿಣಿತಿ ಹೊಂದಿರುತ್ತಾರೆ. ಮೊದಲ ಹಂತದಲ್ಲಿ 206 ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.

ಈವರೆಗೆ ಸಾಕ್ಷ್ಯ ಸಂಗ್ರಹಿಸುವ ಕೆಲಸವನ್ನು ಸ್ಥಳೀಯ ಅಧಿಕಾರಿಗಳೇ ಮಾಡುತ್ತಿದ್ದರು. ಗಂಭೀರ ಸ್ವರೂಪದ ಅಪರಾಧಗಳಲ್ಲಿ ಇನ್ನು ಮುಂದೆ ಈ ತಂಡವೇ ಅಪರಾಧ ಕೃತ್ಯ ನಡೆದ ಸ್ಥಳಗಳಿಗೆ ಮೊದಲು ಭೇಟಿ ನೀಡಲಿದೆ. ಅಲ್ಲಿನ ಎಲ್ಲ ಸಾಕ್ಷಾಧಾರಗಳ ಸಂರಕ್ಷಣೆ, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಸುರಕ್ಷಿತವಾಗಿ ಕಳುಹಿಸಿಕೊಡುವುದು, ತನಿಖಾಧಿಕಾರಿಗೆ ಆ ಸಾಕ್ಷಾಧಾರಗಳನ್ನು ಒದಗಿಸುವುದು  ಸೇರಿದಂತೆ ಇತರ ಅವಶ್ಯ ಕರ್ತವ್ಯಗಳನ್ನು ಮಾಡುತ್ತಾ ಅಪರಾಧಿಗಳನ್ನು ಅತ್ಯಂತ ಶ್ರೀಘ್ರದಲ್ಲಿ ಪತ್ತೆ ಮಾಡಲು ಮೂಲಭೂತವಾಗಿ ಬೇಕಾಗುವ ಎಲ್ಲ ಕೆಲಸ ಕಾರ್ಯಗಳನ್ನು ಈ  ಅಧಿಕಾರಿಗಳು ಮಾಡುತ್ತಾರೆ’ ಎಂದು ವಿವರಿಸಿದರು.

ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಹಾಗೂ ಅಪರಾಧಿಗಳ ಪತ್ತೆಗಾಗಿಯೇ ಈ ರೀತಿಯ ಹುದ್ದೆಯನ್ನು ಸೃಷ್ಟಿಸಿರುವುದು ದೇಶದಲ್ಲೇ ಮೊದಲು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಂಗಳವಾರ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ ಹುದ್ದೆಗಳ ಆದೇಶ ಪ್ರತಿಯನ್ನು ನೀಡಲಿದ್ದಾರೆ ಎಂದು ಅವರು ತಿಳಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *