ಸಂತೃಸ್ತರಿಗೆ ಅತ್ಯುತ್ತಮ ಪ್ಯಾಕೇಜ್ ಭರವಸೆ ನೀಡಿ ಖುಷಿಪಟ್ಟ ಮುಖ್ಯಮಂತ್ರಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಉತ್ತರ ಕನ್ನಡ ಭೇಟಿ  ಮೇಲ್ನೋಟಕ್ಕೆ ಯಶಸ್ವಿಯಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ  ಯಡಿಯೂರಪ್ಪ ನವರಯೋಜನೆಯನ್ನು ಮುಂದುವರಿಸಿದ ಮುಖ್ಯಮಂತ್ರಿಗಳು ಯಡಿಯೂರಪ್ಪ ಪ್ರವಾಸ ಮೊಟಕುಗೊಳಿಸಿ ಉತ್ತರ ಕನ್ನಡ ಕ್ಕೆ ಭೇಟಿ ನೀಡದ ಪ್ರದೇಶವನ್ನೇ ಆಯ್ಕೆ ಮಾಡಿ ಬೊಮ್ಮಾಯಿ ಇಂದು ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ಸಂದರ್ಶಿಸಿದರು.

ಮಧ್ಯಾಹ್ನ 12 ಗಂಟೆಯ ನಂತರ ಯಲ್ಲಾಪುರ,  ಅಂಕೋಲಾ ತಾಲೂಕುಗಳ ಪ್ರವಾಹ ಪೀಡಿತ ಪ್ರದೇಶಗಳಾದ ಕಳಚೆ, ಕಲ್ಲೇಶ್ವರಗಳನ್ನು  ಭೇಟಿ ಮಾಡಿದರು. ಮುರಿದ ಸೇತುವೆ,ಕುಸಿದ ರಸ್ತೆ,ಜಲಪ್ರಳಯದಿಂದ ಆದ ಅನಾಹುತಗಳನ್ನು ವೀಕ್ಷಿಸಿದರು. ಈ ಸಮಯದಲ್ಲಿ ಪ್ರವಾಹ ಸಂತ್ರಸ್ತರ ಅಹವಾಲು ಆಲಿಸಿ ಪ್ರವಾಹ ನಿರ್ವಹಣೆಯ ಬಗ್ಗೆ ಜನಾಭಿಪ್ರಾಯ ಕೇಳಿದರು. ತಮ್ಮ ಗೋಳು ತೋಡಿಕೊಂಡ ಜನರಿಗೆ ಧೈರ್ಯತುಂಬಿ ಸಾಂತ್ವನ ಹೇಳಿದ ಮುಖ್ಯಮಂತ್ರಿಗಳು ಜಿಲ್ಲೆಯ ಪ್ರವಾಹ ಪೀಡಿದ ಪ್ರದೇಶಗಳು ಮತ್ತು ಸಂತೃಸ್ತ ಜನರಿಗೆ ಅತ್ಯುತ್ತಮ ಪ್ಯಾಕೇಜ್ ನೀಡುವ ಭರವಸೆ ನೀಡಿದರು.

ಮಳೆ ಹಾನಿ, ಪ್ರವಾಹದ ಅನಾಹುತ ಹಾಗೂ ಕೋವಿಡ್ ನಿರ್ವಹಣೆಗಳ ಬಗ್ಗೆ  ಮಾಹಿತಿ ಪಡೆದು ಅಧಿಕಾರಿಗಳಿಗೆ ನಿರ್ಧೇಶನ ನೀಡಿದ ಅವರು ಕರೋನಾ ಮತ್ತು ಪ್ರವಾಹದ ನಿರ್ವಹಣೆ ಸಮರ್ಪಕವಾಗಿ ನಡೆಯಬೇಕು.ಸರ್ಕಾರ ಅಗತ್ಯ ಮತ್ತು ಅನಿವಾರ್ಯ ಕೆಲಸಗಳಿಗೆ ಯಾವ ಕೊರತೆಯನ್ನೂ ಮಾಡುವುದಿಲ್ಲ. ಅನಾಹುತ ಅವಗಢದ ಸಂದರ್ಭಗಳಲ್ಲಿ ಜನರ ಸೇವೆಗಾಗಿ ಅಧಿಕಾರಿಗಳೂ ಶ್ರಮಿಸದಿದ್ದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವುದಿಲ್ಲ  ಎಂದು ಎಚ್ಚರಿಸಿದರು.
ನೂತನ ಮುಖ್ಯಮಂತ್ರಿಗಳ ಚೊಚ್ಚಲ ಪ್ರವಾಸ, ಪ್ರವಾಹ ಪೀಡಿತ ಪ್ರದೇಶಗಳ ಭೇಟಿ ಬಗ್ಗೆ ಸ್ಥಳೀಯರೂ ಸಂತಸ ಹಂಚಿಕೊಂಡರು. ತಮ್ಮ  ಪ್ರವಾಸವನ್ನು ಉತ್ತರ ಕನ್ನಡದಿಂದ ಪ್ರಾರಂಭಿಸಿದ ಮುಖ್ಯಮಂತ್ರಿಗಳೂ ಕೂಡಾ ಈ ಭೇಟಿ ಹಲವು ಉತ್ತಮ ಕೆಲಸಗಳಿಗೆ ಶುಭಾರಂಭ  ಎಂದು ಖುಷಿ ಪಟ್ಟರು.

ಮುಖ್ಯಮಂತ್ರಿಗಳಿಗೆ ಜೊತೆಯಾಗಿದ್ದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಮತ್ತು ಪ್ರಮೋದ್ ಹೆಗಡೆ ಬಸವರಾಜ್ ಬೊಮ್ಮಾಯಿಯವರಿಗೆ ಪ್ರವಾಹ ಪೀಡಿತರ ತೊಂದರೆ ಮತ್ತು ಕಳಚೆ, ಕಲ್ಲೇಶ್ವರಗಳ ಪುನರ್ವಸತಿ ಕೇಂದ್ರಗಳ ಜನರ ಬವಣೆಗಳನ್ನು ವಿವರಿಸಿದರು. ಮೊದಲ ಪ್ರವಾಸದಲ್ಲೇ ಸ್ಥಳಿಯರಿಗೆ ಭರವಸೆ ತುಂಬುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳು ತಮ್ಮ ಭೇಟಿಯಿಂದ ಶುಭಗಳಿಗೆ ಪ್ರಾರಂಭವಾಗಬಹುದು ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *