ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ: 29 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. 

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. 

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. 

https://imasdk.googleapis.com/js/core/bridge3.473.0_en.html#goog_15694410

ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಆರ್. ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ‌ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬಿಳಿಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ, ಸುನೀಲ್ ಕುಮಾರ್  – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ.

ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ, ಗೋಪಾಲಯ್ಯ-ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ ಸಿ‌ ಪಾಟೀಲ್ – ನರಗುಂದ, ಬಿಸಿ ನಾಗೇಶ್ – ತಿಪಟೂರು ಮತ್ತು ಬಿ.ಶ್ರೀ ರಾಮುಲು- ಮೊಳಕಾಲ್ಮೂರು, ಬಿ.ಸಿ. ಪಾಟೀಲ್- ಹಿರೇಕೆರೂರು ಕ್ಷೇತ್ರದವರಾಗಿದ್ದು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 

ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿಪಿ ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್ ರನ್ನು ಸಂಪುಟದಿಂದ ಕೈಬಿಡಲಾಗಿದೆ. 

13 ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯವಿಲ್ಲ – ಮೈಸೂರು, ಕಲ್ಬುರ್ಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ, ಬಳ್ಳಾರಿ, ದಾವಣಗೆರೆ, ಕೋಲಾರ, ಯಾದಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಈ ಬಾರಿ ಮಂತ್ರಿ ಮಂಡಲದಲ್ಲಿ ಪ್ರಾತಿನಿಧ್ಯವಿಲ್ಲ, ಬೆಂಗಳೂರು ನಗರಕ್ಕೆ 7 ಸಚಿವ ಭಾಗ್ಯ ಸಿಕ್ಕಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *