ಕೊರೋನಾ ಹೆಚ್ಚಳ: ಉ.ಕ.,ದ.ಕ. ಗಳಲ್ಲಿ ಪರಿಷ್ಕೃತ ಆದೇಶ ಜಾರಿ

ಕೊರೋನಾ ಹೆಚ್ಚಳ: ದಕ್ಷಿಣ ಕನ್ನಡದಲ್ಲಿ ಹೊಸ ನಿರ್ಬಂಧಗಳು, ವಾರಾಂತ್ಯದಲ್ಲಿ ದೇವಾಲಯಗಳು ಬಂದ್

ಕೋವಿಡ್ -19 ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಆಗಸ್ಟ್ 15 ರವರೆಗೆ ಜಿಲ್ಲೆಯ ದೇವಸ್ಥಾನಗಳಿಗೆ ಹೊಸ ನಿರ್ಬಂಧಗಳನ್ನು ಜಾರಿ ಮಾಡಿದೆ.

ಕರೋನಾ ಹೆಚ್ಚಳ, ಸರ್ಕಾರದ ನಿರ್ಧೇಶನಗಳ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ಕೋವಿಡ್ ಮಾರ್ಗಸೂಚಿ ಬದಲಾಗಿದೆ. ಕೋವಿಡ್ ನಿಯಮ ಪಾಲನೆ ಜೊತೆಗೆ ಕೆಲವು ನಿರ್ಬಂಧಗಳನ್ನು ಹೆಚ್ಚಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಇಂದು ಹೊಸ ಆದೇಶ ಮಾಡಿದ್ದಾರೆ.

kukke

ಮಂಗಳೂರು: ಕೋವಿಡ್ -19 ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಆಗಸ್ಟ್ 15 ರವರೆಗೆ ಜಿಲ್ಲೆಯ ದೇವಸ್ಥಾನಗಳಿಗೆ ಹೊಸ ನಿರ್ಬಂಧಗಳನ್ನು ಜಾರಿ ಮಾಡಿದೆ.

ಕಟೀಲು, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು  ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ತೆರೆದಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು ಬುಧವಾರ ತಮ್ಮ ಆದೇಶ ಹೊರಡಿಸಿದ್ದಾರೆ.

“ಭಕ್ತರು ಸಾಮಾಜಿಕ ಅಂತರ ಮತ್ತು ಇತರ ಮಾರ್ಗಸೂಚಿಗಳನ್ನು ಅನುಸರಿಸಬೇಕು. ತೀರ್ಥ, ಪ್ರಸಾದ ಮತ್ತು ಅನ್ನಸಂತರ್ಪಣ ಭಕ್ತರಿಗೆ ಲಭ್ಯವಿರುವುದಿಲ್ಲ. 

ಏತನ್ಮಧ್ಯೆ, ದೇವಸ್ಥಾನಗಳು ಶನಿವಾರ ಮತ್ತು ಭಾನುವಾರದಂದು ಸಂಪೂರ್ಣ ಬಂದ್ ಆಗಿರುತ್ತವೆ. ಅಲ್ಲದೆ, ವಾರಾಂತ್ಯದಲ್ಲಿ, ಭಕ್ತರು ಅತಿಥಿಗೃಹಗಳಲ್ಲಿ ಉಳಿಯಲು ಅಥವಾ ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ.

ಶನಿವಾರ ಮತ್ತು ಭಾನುವಾರ, ದೇವಾಲಯದ ಅರ್ಚಕರಿಗೆ ಮಾತ್ರ ದೈನಂದಿನ ಪೂಜೆ ಸಲ್ಲಿಸಲು ಅವಕಾಶವಿದೆ. “ವಾರಾಂತ್ಯಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಅತಿಥಿಗೃಹಗಳಲ್ಲಿ ಉಳಿಯಲು ಬಯಸುವ ಭಕ್ತರು 72 ಗಂಟೆಗೂ ಮುಂಚೆ ಪಡೆದ ನೆಗಟಿವ್ ಆರ್ ಟಿಪಿಸಿಆರ್ ವರದಿಯನ್ನು ಕಡ್ಡಾಯವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

ಅಂತರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಕಂಚು ಪಡೆದ ಶ್ಯಾಮಸುಂದರ ಜಿ.

ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ...

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್...

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

Latest Posts

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ. ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸುವ ಸ್ವಯಂಸೇವಕರು ನಿರಂತರ ತರಬೇತಿ ಪಡೆದು, ವಿಪತ್ತಿನ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಿದ್ದಾಪುರ ತಾಲೂಕಿನ ತಹಸೀಲ್ದಾರ್ ಶ್ರೀಮತಿ ಮಂಜುಳ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...

Recommended For You

About the Author: Kanneshwar Naik

Leave a Reply

Your email address will not be published. Required fields are marked *