ವಿದ್ಯುತ್ ಕ್ಷೇತ್ರ ಖಾಸಗೀಕರಣ: ಆ.10 ರಂದು ರೈತಸಂಘದ ನೇತೃತ್ವದಲ್ಲಿ ಪ್ರತಿಭಟನೆ

ದೇಶದ  ಒಕ್ಕೂಟ ಸರ್ಕಾರದ ಖಾಸಗೀಕರಣ ನೀತಿಗೆ ವಿರೋಧ ಹೆಚ್ಚುತ್ತಿದೆ. ಹಲವು ಸಾರ್ವಜನಿಕ ಕ್ಷೇತ್ರಗಳನ್ನು ಖಾಸಗಿ ವ್ಯವಸ್ಥೆಗೆ ಒಪ್ಪಿಸಿದ ಕೇಂದ್ರ ಸರ್ಕಾರದ ನಡೆಯನ್ನು ಹಲವು ಸಂಘಟನೆಗಳು ವಿರೋಧಿಸಿವೆ. ದೇಶದ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಖಾಸಗಿ ಕ್ಷೇತ್ರಕ್ಕೆ ನೀಡುವ ಕೇಂದ್ರ ಸರ್ಕಾರದ ಮಸೂದೆಗೆ ಆಗಷ್ಟ್ 10 ರಂದು ಅನುಮೋದನೆಯ ಒಪ್ಪಿಗೆ ಮುದ್ರೆ ಬೀಳಲಿದೆ.

ಮಳೆ, ಪ್ರವಾಹದಿಂದ ತಾಲೂಕಿನಾದ್ಯಂತ ವ್ಯಾಪಕ ಹಾನಿಯಾಗಿದ್ದು ಅದರ ಸಮೀಕ್ಷೆ ಕಾರ್ಯ ನಡೆದಿಲ್ಲ. ಸ್ಥಳಿಯ ಶಾಸಕರು ಸಂಸದರು ಜನಪ್ರತಿನಿಧಿಗಳು ಈ ಬಗ್ಗೆ ಕಾಳಜಿ ತೋರಿಲ್ಲ, ತಾಲೂಕಿನ ರೈತರಿಗೆ ಸಾಮೂಹಿಕವಾಗಿ, ಸಮಗ್ರವಾಗಿ ಬೆಳೆಹಾನಿ ಪರಿಹಾರ ನೀಡಬೇಕು. ಜೀವ, ಬೆಳೆ, ಸಾರ್ವಜನಿಕ ಸ್ವತ್ತಿನ ಹಾನಿಗೆ ಸೂಕ್ತ ಪರಿಹಾರ ನ್ಯಾಯ ಒದಗಿಸಬೇಕು. ಜಿಲ್ಲೆಗೆ ಪ್ರವಾಹ ಪರಿಹಾರಕ್ಕೆ ಬಂದ 210 ಕೋಟಿ ಅನುದಾನದಲ್ಲಿ ರೈತರು, ಬೆಳೆಹಾನಿ ಪರಿಹಾರದ ಪ್ರಮಾಣ ಬಹಿರಂಗಪಡಿಸಬೇಕು.- ವೀರಭದ್ರ ನಾಯ್ಕ, ರೈತ ಸಂಘದ ಅಧ್ಯಕ್ಷ

ಈ ವರೆಗೆ ಆಡಳಿತಾರೂಢ ಕೇಂದ್ರ ಸರ್ಕಾರ ಹಲವು ಸಾರ್ವಜನಿಕ ಉದ್ದಿಮೆ ಸೇವಾಕ್ಷೇತ್ರಗಳನ್ನು ಖಾಸಗಿಯವರಿಗೆ ಒಪ್ಪಿಸಿದೆ. ಈಗ ವಿದ್ಯುತ್ ಕ್ಷೇತ್ರ ಖಾಸಗೀಕರಣ ಮಾಡುವ ಉದ್ದೇಶದಿಂದ ಮಸೂದೆ ಪಾಸು ಮಾಡಲು ಕೇಂದ್ರ ಮುಂದಾಗಿದೆ.


ಈ ಪ್ರಕ್ರೀಯೆಯನ್ನು ಜನವಿರೋಧಿ ತೀರ್ಮಾನ  ಎಂದು ಕರೆದಿರುವ ರಾಜ್ಯ ರೈತ ಸಂಘ ಆಗಷ್ಟ್ 10 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಲು ಕರೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ರಾಜ್ಯ ರೈತ ಸಂಘದ ಈ ವಿರೋಧಕ್ಕೆ ಬೆಂಬಲ ವ್ಯಕ್ತವಾಗಿದ್ದು ಆಗಸ್ಟ್ 10 ರಂದು ಜಿಲ್ಲೆಯ ಕೆಲವು ತಾಲೂಕುಗಳ ತಹಸಿಲ್ಧಾರ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.

ವಿದ್ಯುತ್ ಕ್ಷೇತ್ರ ಖಾಸಗಿಕರಣದಿಂದ ಜನಸಾಮಾನ್ಯರು, ವಿದ್ಯುತ್ ಶಕ್ತಿ ಉತ್ಪಾದನೆ ಮತ್ತು ವಿತರಣೆ ನಿಗಮದ ನೌಕರರಿಗೆ  ತೊಂದರೆಯಾಗಲಿದ್ದು ವಿದ್ಯುತ್ ಗ್ರಾಹಕರು ಮತ್ತು ನಿಗಮದ ನೌಕರರ ಪರವಾಗಿ ಹೋರಾಟ ಮಾಡುವುದಾಗಿ ರೈತಸಂಘ ಹೇಳಿದೆ. ಈ ಬಗ್ಗೆ ಇಂದು ಕರೆದ ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕಾಧ್ಯಕ್ಷ ವೀರಭದ್ರ ನಾಯ್ಕ ಮಳಲವಳ್ಳಿ ಕೇಂದ್ರ ವಿದ್ಯುತ್ ಖಾಸಗೀಕರಣ ಮಸೂದೆಗೆ ಅನುಮತಿ ನೀಡುವ ಆಗಷ್ಟ್ ಹತ್ತರಂದು ರೈತ ಸಂಘದ ಕರೆಯ ಮೇರೆಗೆ ಸಿದ್ಧಾಪುರದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಈ ಪ್ರತಿಭಟನೆಗೆ ಪಕ್ಷಾತೀತವಾಗಿ ಎಲ್ಲಾ ರೈತರು,ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *