Id-75-1-ಜೊಲ್ಲೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ,ಕಾಂಗ್ರೆಸ್ ವಿರುದ್ಧದ ಅಪಪ್ರಚಾರಕ್ಕೆ ವಸಂತ್ ಕಿಡಿ

ಕಾಂಗ್ರೆಸ್ ಎಂದರೆ ಈ ದೇಶ ಕಟ್ಟಿದ ಶಕ್ತಿ, ಕಾಂಗ್ರೆಸ್ ಪಕ್ಷದಿಂದ ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಅಭಿವೃದ್ಧಿಯ ಶಕೆ ಪ್ರಾರಂಭವಾಗಿದ್ದು ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿರುವ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ರಾಜಕೀಯ ಲಾಭ, ತಮ್ಮ ಪ್ರಚಾರಕ್ಕಾಗಿ ಬಿ.ಜೆ.ಪಿ. ಅಥವಾ ಯಾರೇ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿದರೆ ಅವರಿಗೆ ಮಾನ್ಯತೆ ಸಿಗುವುದಿಲ್ಲ ಎಂದಿದ್ದಾರೆ. ತಾಲೂಕಾ ಕಾಂಗ್ರೆಸ್ ಕಛೇರಿಯಲ್ಲಿ ಸಾರ್ವಜನಿಕ ತುರ್ತು ವಾಹನ ಸಿಬ್ಬಂದಿಗಳನ್ನು ಸನ್ಮಾನಿಸಿ,ಕಿಟ್ ವಿತರಿಸುವ ಮೊದಲು ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆಯಿಂದ ಧ್ವಜಾರೋಹಣ ಬೇಡ: ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ

ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆ ಶಶಿಕಲಾ ಜೊಲ್ಲೆಯವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಬಾರದು ಎಂದು ಆಗ್ರಹಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು. 

shashikala jolle

ವಿಜಯಪುರ: ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆ ಶಶಿಕಲಾ ಜೊಲ್ಲೆಯವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಬಾರದು ಎಂದು ಆಗ್ರಹಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು. 

ಜಿಲ್ಲಾಡಳಿತ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಘಟನೆ ನಡೆದಿದೆ.

ಧ್ವಜಾರೋಹಣಕ್ಕೆ ಸಚಿವೆ ಜೊಲ್ಲೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯರು ಘೇರಾವ್ ಹಾಕಿ, ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವೆ ವಿಜಯಪುರ ಜಿಲ್ಲೆಗೆ ಬೇಡವೆಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಕ್ಕಳಿಗೆ ನೀಡುವ ಮೊಟ್ಟೆಯ ವಿಚಾರದಲ್ಲಿ ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಯಬೇಕು. ಇಂತಹ ಭ್ರಷ್ಟರಿಗೆ ಧ್ವಜಾರೋಹಣ ಮಾಡುವ ಯೋಗ್ಯತೆ ಇಲ್ಲ. ಇದು ಅವಮಾನಕರ ಎಂದು ಘೋಷಣೆಗಳನ್ನು ಕೂಗಿದರು. ಜೊಲ್ಲೆ ಅವರು ಧ್ವಜಾರೋಹಣ ನಡೆಸುವುದಕ್ಕೆ ಅಡ್ಡಿಪಡಿಸಲು ಮುಂದಾದರು.

ಈ ವೇಳೆ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ‌ ಪಡೆದು, ಬಂಧಿಸಿ ಠಾಣೆಗೆ ಕರೆದೊಯ್ದರು.

ಮೊಟ್ಟೆ ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿರುವ ಸಚಿವೆ ಶಶಿಕಲಾ‌ ಜೊಲ್ಲೆ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡುವುದನ್ನು ವಿರೋಧಿಸಿ‌ ಪ್ರತಿಭಟನೆಗೆ ಮುಂದಾದ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ‌ ಪದಾಧಿಕಾರಿಗಳನ್ನು ಪೊಲೀಸರು‌ ಬಂಧಿಸಿದ‌ ಘಟನೆ ವಿಜಯಪುರ ಅಕ್ಕಮಹಾದೇವಿ ವಿಶ್ವವಿದ್ಯಾಲದಲ್ಲಿ ಭಾನುವಾರ ಬೆಳಗ್ಗೆ‌ ನಡೆಯಿತು.

ಬಳಿಕ ಇತ್ತ ಬಿಗಿ‌ ಪೊಲೀಸ್ ಬಂದೋಬಸ್ತ್ ನಲ್ಲಿ ಶಶಿಕಲಾ‌ ಜೊಲ್ಲೆ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *