ವಿದ್ಯಾರ್ಥಿಗಳಿಗಾಗಿ ಪ್ರಶಸ್ತಿ-ಪ್ರವೇಶ ಇತ್ಯಾದಿ……

ಶಹಾಪುರದ ಮಕ್ಕಳ ಸಾಹಿತ್ಯಾಸಕ್ತಿಯ ಸಂಧ್ಯಾ ಸಾಹಿತ್ಯ ವೇದಿಕೆಯು ಕಳೆದ ೨೨ ವರುಷಗಳಿಂದ ಪ್ರತಿವರ್ಷ ೧೬ ವರ್ಷ ದೊಳಗಿನ ಬಾಲ ಬರಹಗಾರರಿಗೆ ಕೊಡಮಾಡುವ ಪ್ರತಿಷ್ಠಿತ ‘ವಿದ್ಯಾಸಾಗರ ಬಾಲ ಪುರಸ್ಕಾರ’ ಕ್ಕೆ ಅರ್ಜಿ ಆಹ್ವಾನಿಸಿದೆ.
ಎಳೆಯ ವಯಸ್ಸಿನಲ್ಲಿ ಅಪಾರ ಪ್ರತಿಭೆ ತೋರಿ ಕಣ್ಮರೆಯಾದ ಬಾಲ ಕವಿ ‘ವಿದ್ಯಾಸಾಗರ ಕುಕ್ಕುಂದಾ’ ಅವರ ನೆನಪಿನಲ್ಲಿ ಪ್ರತಿವರ್ಷ ಬಾಲ ಬರಹಗಾರರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಪುರಸ್ಕಾರವು ೫೦೦೦ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಬಾಲ ಬರಹಗಾರರು ಕಳೆದ ಅಕ್ಟೋಬರ್ ತಿಂಗಳಿನಿಂದ ಇಲ್ಲಿಯ ತನಕ ಬರೆದಿರುವ ಒಂದು ಸಂಕಲನಕ್ಕಾಗುವಷ್ಟು ಪ್ರಕಟಿತ ಅಥವಾ ಅಪ್ರಕಟಿತ ಕನ್ನಡ ಬರಹಗಳನ್ನು ಕಳುಹಿಸಬಹುದಾಗಿದೆ. ಕತೆ, ಕವಿತೆ, ಲಲಿತ ಬರಹ, ಪ್ರವಾಸ ಕಥನ, ನಾಟಕ ಹೀಗೆ ಯಾವುದೇ ಪ್ರಕಾರದಲ್ಲೂ ಬರವಣಿಗೆ ಇರಬಹುದಾಗಿದೆ.
ಜನ್ಮದಿನಾಂಕ ದೃಢೀಕರಣ ಮತ್ತು ಫೋಟೋ ಜೊತೆಗೆ ಬರಹಗಳನ್ನು ಈ ವಿಳಾಸಕ್ಕೆ ತಲುಪಿಸತಕ್ಕದ್ದು. ರವಿ ಹಿರೇಮಠ, ಅಧ್ಯಕ್ಷರು, ಸಂಧ್ಯಾ ಸಾಹಿತ್ಯ ವೇದಿಕೆ, ಅಮೃತ ನಿವಾಸ, ಸಿ.ಬಿ.ಕಮಾನಿನ ಹತ್ತಿರ, ಶಹಾಪುರ -೫೮೫ ೨೨೩ (ಯಾದಗಿರಿ ಜಿಲ್ಲೆ). ಬರಹಗಳನ್ನು ಕಳುಹಿಸುವ ಕೊನೆಯ ದಿನಾಂಕ ೨೦೨೧ರ ಅಕ್ಟೋಬರ್ ೧೦. ಹೆಚ್ಚಿನ ಮಾಹಿತಿಗಾಗಿ ೯೪೪೮೬೫೧೫೨೦/೯೯೮೬೫೯೦೮೯೪ ಸಂಪರ‍್ಕಿಸಿ ಎಂದು ವೇದಿಕೆಯ ಸಂಚಾಲಕ ರಾಜಶೇಖರ ಕುಕ್ಕುಂದಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

೨೦೨೧-೨೨ ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿಎ, ಬಿಕಾಂ ಹಾಗೂ ಬಿಬಿಎ ಕೋರ್ಸ್ ಗ ಳ ಪ್ರವೇಶ ಪ್ರಾರಂಭ
ಸಿದ್ದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೧-೨೨ ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿಎ, ಬಿಕಾಂ ಹಾಗೂ ಬಿಬಿಎ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಪ್ರಾರಂಭಗೊಂಡಿದೆ. ದಿ.೨೫/೦೮/೨೦೨೧ ರಿಂದ ಕಾಲೇಜಿನ ಕಛೇರಿಯಲ್ಲಿ ಪ್ರವೇಶ ಅರ್ಜಿಯನ್ನು ಉಚಿತವಾಗಿ ವಿತರಿಸಲಾಗುವುದು. ಪಿಯುಸಿ ಪಾಸಾದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಪ್ರವೇಶ ಅರ್ಜಿಯನ್ನು ತುಂಬಿ ಜೂತೆಗೆ ಅಗತ್ಯ ದಾಖಲಾತಿಗಳೊಂದಿಗೆ ದಿ. ೦೪-೦೯-೨೦೨೧ ರೊಳಗೆ ಪ್ರವೇಶ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕಛೇರಿಯನ್ನು ಸಂಪರ್ಕಿಸಿರಿ. ದೂ: ೦೮೩೮೯-೨೯೮೦೨೭


ನಾಣಿಕಟ್ಟಾ ಸರಕಾರಿ ಪದವಿ ಪೂರ್ವಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾತಿ ಪ್ರಾರಂಭ :


ಪಿ.ಯು. ಪ್ರವೇಶ- ಸರಕಾರಿ ಪದವಿ ಪೂರ್ವಕಾಲೇಜು ನಾಣಿಕಟ್ಟಾದಲ್ಲಿ ಪ್ರಥಮ ಪಿಯುಸಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಈ ಕಾಲೇಜಿಗೆ ಕಳೆದ ೧೦ ವರ್ಷಗಳಿಂದ ದ್ವಿತೀಯ ಪಿಯುಸಿಯಲ್ಲಿ ನಿರಂತರ ೯೦% ಗಿಂತಲೂಅಧಿಕ ಫಲಿತಾಂಶ ಬಂದಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿಅನುಭವಿ ಉಪನ್ಯಾಸಕ ವೃಂದ ಹಾಗೂ ಪ್ರಾಚಾರ್ಯರ ಮಾರ್ಗದರ್ಶನದಲ್ಲಿ ಶಿಸ್ತು ಮತ್ತು ಶೈಕ್ಷಣಿಕ ಸಾಧನೆಗಳಿಗೆೆ ಹೆಚ್ಚಿನಒತ್ತುಕೊಡುತ್ತಿದ್ದು, ವಿದ್ಯಾರ್ಥಿಗಳ ಬಗ್ಗೆ ವೈಯಕ್ತಿಕ ಕಾಳಜಿ ತೋರಿಸುತ್ತಿರುವುದು ಶ್ಲಾಘನೀಯವಾಗಿದೆ.ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೂ ಸಾಕಷ್ಟು ಅವಕಾಶವಿದ್ದು ಸರಕಾರದಿಂದದೊರೆಯುವಎಲ್ಲಾಆರ್ಥಿಕ ಮತ್ತುಇತರೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಒತ್ತುಕೊಡುತ್ತಿದ್ದು, ಆನ್‌ಲೈನ್ ತರಗತಿಗಳು ನಿರಂತರವಾಗಿ ನಡೆಯುತ್ತಿವೆ. ಕಾಲೇಜಿಗೆ ಸುಸಜ್ಜಿತವಾದಕಟ್ಟಡವಿದ್ದು ವಿಜ್ಞಾನ ಪ್ರಯೋಗಾಲಯ ಹಾಗೂ ಗ್ರಂಥಾಲಯ ಸೌಲಭ್ಯವಿದ್ದು, ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಕಳೆದ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ನೂರು ಫಲಿತಾಂಶ ಪಡೆದಿದ್ದು, ಇಲ್ಲಿನ ಹರ್ಷಿತಾ ಎಂ.ಮೇಸ್ತಾ (೫೩೪/೬೦೦) –ಕಲಾ ವಿಭಾಗ ಮೋಹಿನಿ ಎಚ್‌ಗೊಂಡ (೫೪೬/೬೦೦) -ವಾಣಿಜ್ಯ ವಿಭಾಗ, ಎಂ. ಮೇಘನಾ (೫೫೨/೬೦೦)–ವಿಜ್ಞಾನ ವಿಭಾಗದಲ್ಲಿಗರಿಷ್ಠ ಅಂಕಗಳನ್ನು ಪಡೆದು ಈ ಸಾಲಿನ ಹೆಮ್ಮೆಯ ಸಾಧಕರಾಗಿದ್ದಾರೆ.ಅವರನ್ನು ಪ್ರಾಚಾರ್ಯರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *