‘ರೈತರ ತಲೆಯನ್ನು ಒಡೆಯಿರಿ’ ಪೊಲೀಸರಿಗೆ ಉಪವಿಭಾಗಾಧಿಕಾರಿ ನಿರ್ದೇಶನದ ವಿಡಿಯೋ ವೈರಲ್!

ಬಿಜೆಪಿ ಮುಖಂಡರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ತಲೆಗೆ ಒಡೆಯುವಂತೆ ಹರಿಯಾಣದ ಉಪ ವಿಭಾಗೀಯ ಅಧಿಕಾರಿಯೊಬ್ಬರು ಪೊಲೀಸರಿಗೆ ನಿರ್ದೇಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಹಲವರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. 

top_district_official_in_Haryana1

ಚಂಡಿಘಡ: ಬಿಜೆಪಿ ಮುಖಂಡರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ತಲೆಗೆ ಒಡೆಯುವಂತೆ ಹರಿಯಾಣದ ಜಿಲ್ಲಾ ಉಪವಿಭಾಗೀಯ ಅಧಿಕಾರಿಯೊಬ್ಬರು ಪೊಲೀಸರಿಗೆ ನಿರ್ದೇಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಹಲವರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. 

ಬಿಜೆಪಿ ಸಭೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಶನಿವಾರ ಹರಿಯಾಣ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಘಟನೆಯಲ್ಲಿ ಸುಮಾರು 10 ರೈತರು ಗಾಯಗೊಂಡಿದ್ದಾರೆ. ಈ ಮಧ್ಯೆ ಕರ್ನಾಲ್ ಉಪ ವಿಭಾಗಧಿಕಾರಿ ಆಯುಷ್ ಸಿನ್ಹಾ, ಯಾವುದೇ ಪ್ರತಿಭಟನಾಕಾರರು ಆ ಪ್ರದೇಶದಲ್ಲಿ ನಿರ್ದಿಷ್ಟ ಬ್ಯಾರಿಕೇಡ್‌ನಿಂದ ಆಚೆ ಹೋಗಬಾರದು ಎಂದು ಪೊಲೀಸರಿಗೆ ಸೂಚಿಸುವುದು ವಿಡಿಯೋದಲ್ಲಿದೆ.

ಇದು ಅತ್ಯಂತ ಸರಳ ಮತ್ತು ಸ್ಪಷ್ಟವಾಗಿದೆ. ಅವರು ಯಾರೇ ಆಗಿರಲಿ, ಎಲ್ಲಿಂದಲೇ ಬಂದವರಾಗಿರಿ, ಯಾರೊಬ್ಬರೂ ಅಲ್ಲಿಗೆ ತಲುಪಲು ಅವಕಾಶ ನೀಡುವಂತಿಲ್ಲ. ಯಾವುದೇ ಸಂದರ್ಭದಲ್ಲಿಯೂ ಈ ಲಕ್ಷ್ಮಣ ರೇಖೆಯನ್ನು ಉಲ್ಲಂಘಿಸಲು ನಾವು ಅವಕಾಶ ಕೊಡುವುದಿಲ್ಲ, ಹಾಗೇನಾದರೂ ಆದರೆ ನಿಮ್ಮ ಲಾಠಿಯಿಂದ ಅವರ ತೆಲೆಗೆ ಒಡೆಯಿರಿ. ಇದು ಅತ್ಯಂತ ಸ್ಪಷ್ಟವಾಗಿದೆ. ನಿಮಗೆ ಇನ್ಯಾವುದೇ ಸೂಚನೆಯ ಅಗತ್ಯವಿಲ್ಲ ಎಂದು ಸಿನ್ಹಾ ವಿಡಿಯೋದಲ್ಲಿ ಹೇಳಿದ್ದಾರೆ.

ಈ ವಿಡಿಯೋವನ್ನು ತಿರುಚಲಾಗಿದೆ ಮತ್ತು ಉಪ ವಿಭಾಗಾಧಿಕಾರಿ ಹಾಗೆ ಹೇಳಿರಲಿಲ್ಲ ಎಂದು ನಾನು ಆಶಿಸಿದ್ದೇನೆ. ಆದರೆ, ಅವರು ಹಾಗೆ ಹೇಳಿದ್ದೆ ಆದಲ್ಲಿ ನಮ್ಮ ಪ್ರಜೆಗಳೊಂದಿಗೆ ಹೀಗೆ ನಡೆದುಕೊಳ್ಳುವುದು ಪ್ರಜಾಸತ್ತಾತ್ಮಕ ಭಾರತಕ್ಕೆ ಸ್ವೀಕಾರರ್ಹವಲ್ಲ ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪೊಲೀಸರ ಕ್ರಮವನ್ನು ಬಲವಾಗಿ ಖಂಡಿಸಿರುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ರಣದೀಪ್ ಸರ್ಜೆವಾಲಾ, ಇಂದು ಹರ್ಯಾಣದ ಆತ್ಮದ ಮೇಲೆ ಲಾಠಿಯನ್ನೆತ್ತಿದ್ದೀರಿ. ಮುಂದಿನ ಪೀಳಿಗೆಗಳು ರಸ್ತೆಗಳ ಮೇಲೆ ಚೆಲ್ಲಿದ್ದ ರೈತರ ರಕ್ತವನ್ನು ನೆನಪಿಸಿಕೊಳ್ಳಲಿವೆ ಎಂದು ಟ್ವೀಟ್ ಮಾಡಿದ್ದಾರೆ. ಪೊಲೀಸರ ಕ್ರಮವು ಹರಿಯಾಣ ಪೊಲೀಸರ ನಿಜವಾದ ರೂಪವನ್ನು ಬಹಿರಂಗಗೊಳಿಸಿದೆ ಎಂದು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಹೇಳಿದ್ದಾರೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *