

ಪಕ್ಷದ ಸಂಘಟನೆ ಹಾಗೂ ಇನ್ನಿತರ ಹಲವಾರು ವಿಷಯದ ಕುರಿತು ಉತ್ತರಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಶನಿವಾರ ಕೆಪಿಸಿಸಿ ರಾಜ್ಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಮುಖರಾದ ಸುಷ್ಮಾ ರಾಜ್ ಗೋಪಾಲ, ಯುವ ಕಾಂಗ್ರೆಸ್ ನ ಸಂತೋಷ್ ಶೆಟ್ಟಿ, ಮಹೇಶ್ ಶೆಟ್ಟಿ ಸೂರಜ್ ನಾಯ್ಕ್, ಬೀರನಜಡ್ಡಿ, ಅರುಣ್ ಬಣಗಾರ್, ರಾಘ ಬೆಳಲೆ ಮುಂತಾದವರು ಉಪಸ್ಥಿತರಿದ್ದರು.



ಸಿದ್ದಾಪುರ ತಾಲೂಕಿನ ಬಿದ್ರಕಾನ ಗ್ರೂಪ್ ಸೇವಾ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಅಂಗವಾಗಿ ಹಿರಿಯ ಸದಸ್ಯ ಗೋವಿಂದ ಈಶ್ವರ ನಾಯ್ಕ ನರಮುಂಡಿಗೆ ದಂಪತಿಗಳನ್ನು ಅವರ ಸ್ವಗ್ರಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಸದಸ್ಯರು, ಸಿಬ್ಬಂದಿಗಳು,
ಗೋವಿಂದ ನಾಯ್ಕ ಕುಟುಂಬಸ್ಥರು ಉಪಸ್ಥಿತರಿದ್ದರು.
ಸಿದ್ದಾಪುರ, ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಯೋಜನೆಯಡಿ ಮಂಜೂರಾತಿ ಪಡೆದ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪ್ರತಿಯನ್ನು ತಹಸೀಲ್ದಾರ ಕಚೇರಿಯಲ್ಲಿ ನಡೆದ ಪಿಂಚಣಿ ಅದಾಲತ್ ನಲ್ಲಿ ನೀಡಲಾಯಿತು. ತಹಸೀಲ್ದಾರ ಪ್ರಸಾದ ಎಸ್. ಎ.
ಗ್ರೇಡ್ 2 ತಹಸೀಲ್ದಾರ ಉಷಾ ಪಾವಸ್ಕರ್, ಉಪತಹೀಲ್ದಾರ ಎನ್ ಐ ಗೌಡ, ಸಂಗೀತ ಭಟ್ ಸಿಬ್ಬಂದಿಗಳು ಇದ್ದರು.
ಅನ್ಯಧರ್ಮೀಯ ಯುವತಿ ಜೊತೆ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ: ಇಬ್ಬರ ಬಂಧನ
ಅನ್ಯ ಧರ್ಮದ ಯುವತಿ ಜೊತೆ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ತಕ್ಷಣ ಬಂಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಅನ್ಯ ಧರ್ಮದ ಯುವತಿ ಜೊತೆ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ತಕ್ಷಣ ಬಂಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಗಳೂರು ಪೊಲೀಸರು ಘಟನೆ ಬೆಳಕಿಗೆ ಬಂದ ಕೂಡಲೇ ತಕ್ಷಣ ಕಾರ್ಯಪ್ರವೃತ್ತವಾಗಿ ಇಬ್ಬರು ಬಂಧಿಸಿ ಅವರ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ.
ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆಗಳನ್ನು ತಮ್ಮ ಸರ್ಕಾರ ಎಂದಿಗೂ ಪ್ರೋತ್ಸಾಹಿಸುವುದಿಲ್ಲ. ಇಂತಹ ಕುಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಅನ್ಯ ಧರ್ಮದ ಯುವತಿ ಜೊತೆ ಪ್ರಯಾಣಿಸುತ್ತಿದ್ದ ನೆಪವೊಡ್ಡಿ ದುಷ್ಕರ್ಮಿಗಳ ಗುಂಪು ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿತ್ತು.
