ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ ವಿಧಿವಶ

ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್​ನ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ ಹೃದಯಾಘಾತದಿಂದ ಇಂದು ನಿಧನರಾದರು.

ಭಟ್ಕಳ: ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್​ನ ಕಬಡ್ಡಿ ಆಟಗಾರನಾಗಿ ಸಾಕಷ್ಟು ಹೆಸರು ಸಂಪಾದಿಸಿದ್ದ ಮನೋಜ ನಾಯ್ಕ ಹೃದಯಾಘಾತದಿಂದ ನಿಧನರಾದರು.

National-level kabaddi player Manoj Naik passes away

(ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ)

ಜಿಲ್ಲೆಯ ಅತ್ಯುತ್ತಮ ಕಬಡ್ಡಿ ತಂಡಗಳಲ್ಲೊಂದಾಗಿರುವ ಪರಶುರಾಮ ಭಟ್ಕಳದ ಕೀ ಪ್ಲೇಯರ್ ಆಗಿದ್ದ ಮನೋಜ ನಾಯ್ಕ ತಂಡ ಹತ್ತು ಹಲವಾರು ಟೂರ್ನಿಗಳಲ್ಲಿ ಟ್ರೋಫಿ ಗೆಲ್ಲಲು ನೆರವಾಗಿದ್ದರು.

ಕಬಡ್ಡಿ ಆಟಗಾರನ ಆಕಸ್ಮಿಕ ಅಗಲಿಕೆಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ, ಮಾಜಿ ಶಾಸಕ ಮಂಕಾಳ ವೈದ್ಯ ಸೇರಿದಂತೆ ಹಲವು ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಆಟದ ಜೊತೆ ಎದುರಾಳಿಯನ್ನು ಮಣಿಸುವ ತಂತ್ರಗಾರಿಕೆಯಲ್ಲಿಯೂ ಮನೋಜ ನಾಯ್ಕ ಮುಂಚೂಣಿಯಲ್ಲಿದ್ದರು. ತನ್ನ ಆಕ್ರಮಣಕಾರಿ ಆಟದ ಜೊತೆ ತಂಡವನ್ನೂ ಆಕ್ರಮಣಕಾರಿಯಾಗಿ ಮುನ್ನಡೆಸುತ್ತಿದ್ದ ನಾಯ್ಕ ಅಕಾಲಿಕ ಅಗಲಿಕೆ ಕಬಡ್ಡಿ ಆಟಗಾರರಲ್ಲಿ ಮರುಕ ಉಂಟುಮಾಡಿದೆ.

b-k-hariprasadh

ರಾಷ್ಟ್ರೀಯ ಶಿಕ್ಷಣ ನೀತಿಯು ಕುತಂತ್ರದಿಂದ ಕೂಡಿದೆ : ಎನ್‌ಇಪಿ ವಿರುದ್ಧ ಬಿ ಕೆ ಹರಿಪ್ರಸಾದ್‌ ಕಿಡಿ

ಇಡೀ ರಾಷ್ಟ್ರದಲ್ಲಿಯೇ ಶಿಕ್ಷಣಕ್ಕೆ ಮಾದರಿ ಆಗಿದ್ದ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೊಳಿಸುತ್ತಿರುವುದು ಕುತಂತ್ರದಿಂದ ಕೂಡಿದೆ ಅನಿಸುತ್ತಿದೆ. ಕಸ್ತೂರಿರಂಗನ್​ ಅವರು ಹೆಸರಿಗಷ್ಟೇ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅಧ್ಯಕ್ಷ ಸ್ಥಾನದಲ್ಲಿದ್ದಾರೆ. ಉಳಿದವರೆಲ್ಲರೂ ಸಂಘ ಪರಿವಾರದವರಿದ್ದಾರೆ. ಸಂಘ ಪರಿವಾರದ ಗುಪ್ತ ಕಾರ್ಯಸೂಚಿ ಅನುಷ್ಠಾನಕ್ಕೆ ತರುವ ಷಡ್ಯಂತ್ರ ರಾಷ್ಟ್ರದಲ್ಲಿ ನಡೆಯುತ್ತಿದೆ. ಅದರ ವಿರುದ್ಧ ಧ್ವನಿ ಎತ್ತಬೇಕೆಂದು ಘಟಪ್ರಭಾದಲ್ಲಿ ನಡೆಯುತ್ತಿರುವ ತರಬೇತಿ ಶಿಬಿರದಲ್ಲಿ ಚರ್ಚೆ ಮಾಡಲಿದ್ದೇವೆ..

ಬೆಳಗಾವಿ : ಕೇಂದ್ರ ಬಿಜೆಪಿ ಸರ್ಕಾರ ಚರ್ಚೆಯನ್ನು ಸಹ ಮಾಡದೆ ಕೊರೊನಾ ಸಂದರ್ಭದಲ್ಲಿ ಅನುಷ್ಠಾನ ಮಾಡಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಕುತಂತ್ರ ನೀತಿಯಿಂದ ಕೂಡಿದೆ ಎಂದು ವಿಧಾನಪರಿಷತ್ ಸದಸ್ಯ, ಎಐಸಿಸಿ ಮಾಜಿ ಕಾರ್ಯದರ್ಶಿ ಬಿ ಕೆ ಹರಿಪ್ರಸಾದ್ ಕಿಡಿಕಾರಿದರು.ಎನ್‌ಇಪಿ ಕುರಿತಂತೆ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಕಿಡಿ..

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೋವಿಡ್ ‌ಸಂದರ್ಭದಲ್ಲಿ ಚರ್ಚೆ ನಡೆಸದೇ ಜುಲೈ 29ರಂದು ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು ಏಕಾಏಕಿ ಇಡೀ ರಾಷ್ಟ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ‌. ಆದ್ರೆ, ಭಾರತೀಯ ಜನತಾ ಪಾರ್ಟಿಯ ಆಡಳಿತ ಬೇರೆ ರಾಜ್ಯಗಳಲ್ಲಿ ಇದ್ದರೂ ಯಾವುದೇ ರಾಜ್ಯಗಳಲ್ಲಿ ಶಿಕ್ಷಣ ನೀತಿ ಅನುಷ್ಠಾನ ಮಾಡಿಲ್ಲ.

ಆದರೆ, ಇಡೀ ರಾಷ್ಟ್ರದಲ್ಲಿಯೇ ಶಿಕ್ಷಣಕ್ಕೆ ಮಾದರಿ ಆಗಿದ್ದ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೊಳಿಸುತ್ತಿರುವುದು ಕುತಂತ್ರದಿಂದ ಕೂಡಿದೆ ಅನಿಸುತ್ತಿದೆ. ಕಸ್ತೂರಿರಂಗನ್​ ಅವರು ಹೆಸರಿಗಷ್ಟೇ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅಧ್ಯಕ್ಷ ಸ್ಥಾನದಲ್ಲಿದ್ದಾರೆ.

ಉಳಿದವರೆಲ್ಲರೂ ಸಂಘ ಪರಿವಾರದವರಿದ್ದಾರೆ. ಸಂಘ ಪರಿವಾರದ ಗುಪ್ತ ಕಾರ್ಯಸೂಚಿ ಅನುಷ್ಠಾನಕ್ಕೆ ತರುವ ಷಡ್ಯಂತ್ರ ರಾಷ್ಟ್ರದಲ್ಲಿ ನಡೆಯುತ್ತಿದೆ. ಅದರ ವಿರುದ್ಧ ಧ್ವನಿ ಎತ್ತಬೇಕೆಂದು ಘಟಪ್ರಭಾದಲ್ಲಿ ನಡೆಯುತ್ತಿರುವ ತರಬೇತಿ ಶಿಬಿರದಲ್ಲಿ ಚರ್ಚೆ ಮಾಡಲಿದ್ದೇವೆ ಎಂದರು.

ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ನೀಡುವ ಆಹಾರದ ಕಿಟ್​ಗಳನ್ನು ಬಿಜೆಪಿಯವರು ಅಕ್ರಮವಾಗಿ ಏಕೆ ಇಟ್ಟುಕೊಂಡಿದ್ದರು ಎಂಬುವುದು ಯಕ್ಷಪ್ರಶ್ನೆಯಾಗಿದೆ‌. ಜನ ಸಾಮಾನ್ಯರ ಹಣದಿಂದ ಜನರಿಗೆ ಸೇರಬೇಕಿದ್ದ ಸರ್ಕಾರದ ಪುಡ್ ಕಿಟ್​ ಅನ್ನು ಖರೀದಿಸಿ ಮನೆಯಲ್ಲಿ ಇಟ್ಟುಕೊಳ್ಳಲು ಬರೋದಿಲ್ಲ. ಇತ್ತ ಸಾಕಷ್ಟು ಕಿಟ್‌ಗಳ ಅವಧಿ ಮುಗಿದು ಹೋಗಿವೆ. ಅಕ್ಕಿಗೆ ಹುಳುಗಳು ಬಿದ್ದಿದ್ದು, ಸದ್ಯ ರಾಜಕೀಯ ಲಾಭಕ್ಕಾಗಿ ಕಿಟ್‌ಗಳನ್ನು ಹಂಚಿಕೆ ಮಾಡುತ್ತಿದ್ದಾರೆ ಇದು ಸರಿಯಲ್ಲ ಎಂದರು.

ಬಿಜೆಪಿ ಸರ್ಕಾರದ ಗೂಂಡಾಗಿರಿ ಹೊಸದೇನು ಅಲ್ಲ. ನಿರಂತರ ಗೂಂಡಾಗಿರಿ ನಡೆಯುತ್ತಲೇ ಇದೆ. ಇದೇ ಕಾರಣದಿಂದ ಕಾರವಾರದಲ್ಲಿ ಪೊಲೀಸ್ ಠಾಣೆಯಲ್ಲಿ ಪತ್ರಿಭಟನೆ ನಡೆಸಿದ್ದೇನೆ. ಇನ್ನು, ಮುಂದೆ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ ಮುಂದುವರೆದ್ರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. (etvb)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *