ಕರಾವಳಿ-ಮಲೆನಾಡುಗಳಲ್ಲಿ ಮತ್ತೆ ಜಲಕ್ರೀಡೆ!

water sports

ಉತ್ತರಕನ್ನಡ: ಬಂದ್​ ಆಗಿದ್ದ ಜಲ ಸಾಹಸ ಕ್ರೀಡೆ ಆರಂಭಿಸಲು ಜಿಲ್ಲಾಡಳಿತದ ಗ್ರೀನ್ ಸಿಗ್ನಲ್

ಕೊರೊನಾ ಸೋಂಕಿನ ಹಿನ್ನೆಲೆ ಉತ್ತರ ಕನ್ನಡಕ್ಕೆ ಬರುವ ಪ್ರವಾಸಿಗರ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿತ್ತು. ಸದ್ಯ ಜಿಲ್ಲೆಯಲ್ಲಿ ಕೊವಿಡ್ ಪಾಸಿಟಿವಿಟಿ ದರ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಹಲವು ಸಾರ್ವಜನಿಕ ಚಟುವಟಿಕೆಗಳ ಮೇಲಿನ ನಿರ್ಬಂಧ ತೆರವು ಮಾಡಲಾಗಿದ್ದು, ಜಲಸಾಹಸ ಕ್ರೀಡೆ ಆರಂಭಿಸಲು ಅನುಮತಿ ನೀಡಲಾಗಿದೆ.

ಕಾರವಾರ: ಜಿಲ್ಲೆಯ ಪ್ರವಾಸಿ ಸ್ಥಳಗಳು ಮತ್ತೆ ತೆರೆದುಕೊಳ್ಳುತ್ತಿದ್ದು, ಕಾರವಾರ ಕಡಲತೀರ ಸೇರಿದಂತೆ ಜಲಸಾಹಸ ಕ್ರೀಡೆ ಆರಂಭಿಸಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ನೀಡಿದೆ. ಕೋವಿಡ್​ ಅನ್‌ಲಾಕ್ ಬಳಿಕ ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ತೆರೆದುಕೊಂಡಿದ್ದರೂ ಜಲಸಾಹಸ ಕ್ರೀಡೆಯಂತಹ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಿರಲಿಲ್ಲ. ಆದರೆ, ಇದೀಗ ಜಿಲ್ಲಾಡಳಿತ ಪ್ರವಾಸಿತಾಣಗಳಲ್ಲಿ ಜಲ ಕ್ರೀಡೆ ನಡೆಸಲು ಅನುಮತಿ ನೀಡಿದ್ದು, ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮತ್ತೆ ಕಳೆ ಬಂದಂತಾಗಿದೆ.

ರಾಜ್ಯದಲ್ಲೇ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಜಿಲ್ಲೆಗಳಲ್ಲಿ ಉತ್ತರಕನ್ನಡ ಸಹ ಒಂದು. ಪ್ರವಾಸಿಗರ ಫೇವರೇಟ್​ ಆಗಿರುವ ಜಿಲ್ಲೆಯ ಕಡಲ ತೀರಕ್ಕೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ.

ಆದರೆ, ಕೋವಿಡ್​ ಅನ್‌ಲಾಕ್ ಬಳಿಕ ಸಹ ಯಾವುದೇ ರೀತಿಯ ಜಲಸಾಹಸ ಕ್ರೀಡೆಗಳಿಗೆ ಅವಕಾಶ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರವಾಸಿಗರು ಬಾರದೇ ಪ್ರವಾಸೋದ್ಯಮ ಮಂಕಾಗಿತ್ತು. ಆದರೆ ಇದೀಗ ಜಿಲ್ಲಾಡಳಿತ ಇಂದಿನಿಂದ ನದಿ ಹಾಗೂ ಸಮುದ್ರ ತೀರಗಳಲ್ಲಿ ಕೊರೊನಾ ಮಾರ್ಗಸೂಚಿಗಳ ಪಾಲನೆಯೊಂದಿಗೆ ವಾಟರ್ ಸ್ಪೋರ್ಟ್ಸ್ ನಡೆಸಲು ಅವಕಾಶ ನೀಡಿದೆ.ಜಲ ಸಾಹಸ ಕ್ರೀಡೆ ಆರಂಭಿಸಲು ಅನುಮತಿ ನೀಡಿದೆ.

ಜಿಲ್ಲೆಯಲ್ಲಿ ಕಾರವಾರ, ಗೋಕರ್ಣ, ಹೊನ್ನಾವರ ಹಾಗೂ ಮುರುಡೇಶ್ವರ ಸೇರಿದಂತೆ ಹತ್ತಾರು ಕಡಲ ತೀರಗಳಿವೆ. ಇಲ್ಲಿನ ಬೀಚ್‌ಗಳಲ್ಲಿ ಎಂಜಾಯ್ ಮಾಡೋದಕ್ಕೆ ಅಂತಾನೇ ರಾಜ್ಯ, ಹೊರರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಅಲ್ಲದೇ ಬೋಟ್ ರೈಡ್, ಜೆಟ್ ಸ್ಕೀ ಸೇರಿದಂತೆ ದಾಂಡೇಲಿ, ಜೋಯಿಡಾ ಭಾಗಗಳಿಗೆ ಕಾಳಿ ನದಿಯಲ್ಲಿ ವಿವಿಧ ಜಲಸಾಹಸ ಕ್ರೀಡೆಗಳನ್ನ ಆಯೋಜಿಸಲಾಗುತ್ತದೆ.

ಜೊತೆಗೆ ಕಾರವಾರ ರವೀಂದ್ರನಾಥ ಠಾಗೋರ್ ಕಡಲತೀರ, ಗೋಕರ್ಣದ ಓಂ ಬೀಚ್, ಕುಡ್ಲೇ ಬೀಚ್ ಹಾಗೂ ಮುರುಡೇಶ್ವರ ಕಡಲತೀರಗಳಲ್ಲಿ ಹಿಂದಿನಿಂದಲೂ ಜಲಸಾಹಸ ಕ್ರೀಡೆಗಳನ್ನ ನಡೆಸಲಾಗುತ್ತಿತ್ತು. ಇದೀಗ ಮತ್ತೆ ಜಲ ಕ್ರೀಡೆಗೆ ಅನುಮತಿ ನೀಡಿರುವುದಕ್ಕೆ ಆಯೋಜಕರು ಸಂತಸಗೊಂಡಿದ್ದು, ಈಗಾಗಲೇ ಕ್ರೀಡೆಗಳನ್ನು ಪ್ರಾರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *