ಸಿದ್ದಾಪುರದ ಯುವಕ ಶಿರಸಿಯಲ್ಲಿ ಶವವಾಗಿ ಪತ್ತೆ

ಸೆ.22 ರ ಸಂಜೆ ಕಾಣಿಯಾದ ಬಗ್ಗೆ ಸಿದ್ಧಾಪುರದ ಪೊಲೀಸ್ ಠಾಣೆಯಲ್ಲಿ ಸ್ವತ: ತಂದೆ ರಾಮ ಅಂಬಿಗ ಸೆ 24 ರಂದು ದೂರು ನೀಡಿದ್ದ ಪ್ರಕರಣದ ಕಾಣೆಯಾದ ವ್ಯಕ್ತಿ ಸಿದ್ಧಾಪುರ ರವೀಂದ್ರ ನಗರದ ಪುಂಡಲೀಕ ರಾಮಾ ಅಂಬಿಗ ಇಂದು ಶಿರಸಿಯ ಬಾವಿ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಶಿರಸಿ ಭೂತೇಶ್ವರ ನಗರದ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾದ ಪುಂಡಲೀಕ ಅಂಬಿಗ ಸಾವಿನ ಬಗ್ಗೆ ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.24 ರ ಸಂಜೆ ಮೊಬೈಲ್ ಕರೆನ್ಸಿ ಹಾಕಿಸಿಕೊಂಡು ಬರುತ್ತೇನೆಂದು ಮನೆ ಬಿಟ್ಟವನು ಮರಳಿರಲಿಲ್ಲ. ಮನೆ ಬಿಟ್ಟು ಹೋಗಿ ನಾಲ್ಕು ದಿವಸಗಳ ನಂತರ ಈತನ ಶವ ಶಿರಸಿಯಲ್ಲಿ ಪತ್ತೆಯಾಗಿದೆ. ಅವಿವಾಹಿತ ಪುಂಡಲೀಕ ಗೆ 32 ವರ್ಷ ವಯಸ್ಸಾಗಿತ್ತು.

ಸೆ . 27ರ ‘ಭಾರತ್ ಬಂದ್’ ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ: ಬೆಂಗಳೂರಿನಲ್ಲಿ ಖಾಕಿ ಸರ್ಪಕಾವಲು

ದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ (ಸೆ.27) ನಡೆಯುತ್ತಿರುವ ‘ಭಾರತ್ ಬಂದ್’ ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ‘ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ  ಪಕ್ಷದ ಬೆಂಬಲವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Bharat Bandh

ಬೆಂಗಳೂರು: ದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ (ಸೆ.27) ನಡೆಯುತ್ತಿರುವ ‘ಭಾರತ್ ಬಂದ್’ ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ‘ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ  ಪಕ್ಷದ ಬೆಂಬಲವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ರೈತ ವಿರೋಧಿ ಧೋರಣೆಯಿಂದಾಗಿ ದೇಶದ ಬಹುಸಂಖ್ಯಾತ ಅನ್ನದಾತ ಸಮುದಾಯ ತೀವ್ರ ವಿಷಮ ಪರಿಸ್ಥಿತಿ ಎದುರಿಸುತ್ತಿದೆ. ಕೆಲವೇ ಮಂದಿ ಉದ್ಯಮಿಗಳ ಬೆಂಬಲಕ್ಕೆ ನಿಂತಿರುವ ಬಿಜೆಪಿ ಇಡೀ ಶ್ರಮಿಕ ಜನಸಮುದಾಯವನ್ನು ವಂಚಿಸುತ್ತಿದೆ ಎಂದು ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಸರ್ಕಾರದ ಕರಾಳ ಶಾಸನ, ನೀತಿ ಹಾಗೂ ಧೋರಣೆ ವಿರುದ್ಧ ರೈತರು ದಿಲ್ಲಿಯ ರಸ್ತೆಗಳಲ್ಲಿ ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ರೈತರ ಹೋರಾಟವನ್ನು ಹತ್ತಿಕ್ಕುವ ನಿರಂತರ ಪ್ರಯತ್ನ ನಡೆಸಿದ ಬಿಜೆಪಿ ಸರ್ಕಾರಕ್ಕೆ, ಅವರ ನ್ಯಾಯಯುತ ಬೇಡಿಕೆಗಳನ್ನು ಕೇಳುವ ಕನಿಷ್ಟ ಸೌಜನ್ಯ ತೋರಿಲ್ಲ. ಇದು ಬಿಜೆಪಿಯ ಅಮಾನವೀಯ ಮನಃಸ್ಥಿತಿಗೆ ನಿದರ್ಶನ ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ರೈತರ ಹಿತರಕ್ಷಣೆಗಾಗಿ ದಶಕದ ಹಿಂದೆಯೇ ಭೂಸ್ವಾಧೀನ ಕಾಯ್ದೆಯನ್ನು ಕಾಂಗ್ರೆಸ್ ನೇತ್ರತ್ವದ ಯುಪಿಎ ಸರ್ಕಾರ ಜಾರಿ ಮಾಡಿತ್ತು. ಆದರೆ, ಅದಕ್ಕೆ ವಿರುದ್ದವಾದ ದಿಕ್ಕಿನಲ್ಲಿ ಸಾಗಿದ ಮೋದಿ ಸರ್ಕಾರವು, ಕಳೆದ 7 ವರ್ಷಗಳಲ್ಲಿ ದೇಶದ ರೈತರ ಬದುಕನ್ನು ಅಸಹನೀಯಗೊಳಿಸಿದೆ. ಇದರ ವಿರುದ್ದ ರೈತರು ನಡೆಸುತ್ತಿರುವ ಹೋರಾಟವನ್ನು ಒಬ್ಬ ರೈತನ ಮಗನಾಗಿ  ಬೆಂಬಲಿಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷದ ನೈತಿಕ ಬೆಂಬಲವೂ ಇದೆ. ಹೋರಾಟ ಶಾಂತಿಯುತವಾಗಿರಲಿ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ

ಸೆ.27 ಭಾರತ್ ಬಂದ್‌ಗೆ ಕರೆ: ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಾವಲು
ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ, ಬೆಲೆ ಏರಿಕೆ ವಿರೋಧಿಸಿ ರೈತಪರ ಸಂಘಟನೆಗಳು ಸೋಮವಾರ ಭಾರತ್ ಬಂದ್​ಗೆ ಕರೆ ನೀಡಿವೆ. ಹೀಗಾಗಿ ಈ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದೆಲ್ಲೆಡೆ  ಬಿಗಿ ಭದ್ರತೆ ಕಲ್ಪಿಸಿಲು ಖಾಕಿ ಸಿದ್ಧತೆಗೊಂಡಿದೆ. ನಗರದಲ್ಲಿ ವಿವಿಧ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಹೀಗಾಗಿ ಬೆಂಗಳೂರಿಗೆ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸುವ  ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ  ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತಿದೆ. ಟೌನ್​ಹಾಲ್‌ನಿಂದ ಮೈಸೂರು ಬ್ಯಾಂಕ್​ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *