ಡಯಾಲಿಸ್ ತೊಂದರೆಗೆ ಶೀಘ್ರ ಪರಿಹಾರ -ಕಾಗೇರಿ


ಶೀಘ್ರದಲ್ಲಿ ರಾಜ್ಯದ ಸರ್ಕಾರಿ ಆಸ್ಫತ್ರೆಗಳ ಡಯಾಲಿಸಿಸ್ ಸ್ಥಿತಿ ಸುಧಾರಣೆಯಾಗಲಿದೆ ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ತಿಳಿಸಿದ್ದಾರೆ.

ಕೋವಿಡ್ ಅವಧಿಯಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮುತುವರ್ಜಿ ವಹಿಸಿದ್ದರೂ ರಾಜ್ಯದ ಸರ್ಕಾರಿ ಆಸ್ಫತ್ರೆಗಳ ಸ್ಥಿತಿ ಸುಧಾರಿಸಿಲ್ಲ. ಜನಸಾಮಾನ್ಯರಿಗೆ ಅವಶ್ಯವಿರುವ ಡಯಾಲಿಸಿಸ್ ವ್ಯವಸ್ಥೆ ಈಗ ಸಮರ್ಪಕವಾಗಿ ನಡೆಯುತ್ತಿಲ್ಲ. ಕೆಲವು ತಾಲೂಕುಗಳಲ್ಲಿ ತಾಲೂಕಾ ಆರೋಗ್ಯ ಸಮೀತಿ ಡಯಾಲಿಸಿಸ್ ವ್ಯವಸ್ಥೆಯ ಜವಾಬ್ಧಾರಿ ನಿರ್ವಹಿಸುತ್ತಿದೆಯಾದರೂ ಡಯಾಲಿಸಿಸ್ ಅವಲಂಬಿಸಿರುವವರ ಅಗತ್ಯಕ್ಕೆ ತಕ್ಕಂತೆ ಅನುಕೂಲ ದೊರೆಯುತ್ತಿಲ್ಲ. ಡಯಾಲಿಸಿಸ್ ವ್ಯವಸ್ಥೆ ನಿರ್ವಹಿಸುತ್ತಿರುವ ಎರಡು ಸಂಸ್ಥೆಗಳಲ್ಲಿ ಒಂದು ಸಂಸ್ಥೆ ಹಾನಿಯಲ್ಲಿದ್ದು ಅದು ನಿರ್ವಹಿಸುತಿದ್ದ ರಾಜ್ಯದ ಬಹುತೇಕ ಆಸ್ಫತ್ರೆಗಳಲ್ಲಿ ಈಗ ಡಯಾಲಿಸಿಸ್ ಸಿಬ್ಬಂದಿಗಳಿಗೆ ವೇತನ ಕೂಡಾ ದೊರೆಯುತ್ತಿಲ್ಲ.


ಡಯಾಲಿಸಿಸ್ ನಿರ್ವಹಣೆಯ ಬಿ.ಆರ್.ಎಸ್. ಸಂಸ್ಥೆಯ ಸಿಬ್ಬಂದಿಗಳಿಗೆ ವೇತನ ದೊರೆಯದಿರುವುದರಿಂದ ಕೆಲವೆಡೆ ಡಯಾಲಿಸಿಸ್ ಗೂ ತೊಂದರೆಯಾಗಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದು ಶೀಘ್ರ ಈ ತೊಂದರೆ ಬಗೆಹರಿಸಲು ಸರ್ಕಾರ ಭರವಸೆ ನೀಡಿದೆ. ಈ ಬಗ್ಗೆ ಇಂದು ಸಿದ್ಧಾಪುರ ಆಸ್ಫತ್ರೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಡಯಾಲಿಸಿಸ್ ನಂಥ ಅನಿವಾರ್ಯ ವ್ಯವಸ್ಥೆಗೆ ತೊಂದರೆಯಾಗದಂತೆ ಸರ್ಕಾರಕ್ಕೆ ತಿಳಿಸಲಾಗಿದೆ. ಆರೋಗ್ಯ ಸಚಿವ ಡಾ. ಸುಧಾಕರ್ ಈ ತೊಂದರೆ ಬಗೆಹರಿಸುವ ಭರವಸೆ ನೀಡಿದ್ದಾರೆ ರಾಜ್ಯದಾದ್ಯಂತ ಈ ಸಮಸ್ಯೆ ಶೀಘ್ರದಲ್ಲಿ ಬಗೆಹರಿಯಲಿದೆ ಎಂದರು. ಇದರಿಂದಾಗಿ ರಾಜ್ಯಾದ್ಯಂತ  ಬಿ.ಆರ್.ಎಸ್. ಸಂಸ್ಥೆ ನಿರ್ವಹಿಸುತ್ತಿರುವ ಆಸ್ಫತ್ರೆಗಳ ಡಯಾಲಿಸಿಸ್ ವ್ಯವಸ್ಥೆ ಸುಧಾರಿಸುವ ಭರವಸೆ ಮೂಡಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *