ಖಂಡಗಾರನಲ್ಲಿ ಸರ್ಕಾರಿ ಭೂಮಿ ಅತಿಕ್ರಮಣ : ಕರವೇ ಸ್ವಾಭಿಮಾನಿ ಬಣ ಕ್ರಮಕ್ಕೆ ಆಗ್ರಹ

ಕಾರವಾರ : ಕುಮಟಾ ತಾಲೂಕಿನ ನಾಗೂರು ಗ್ರಾಮದಲ್ಲಿ ಸುಮಾರು 20 ಎಕರೆ ಸರ್ಕಾರಿ ಪಡಾ ಜಮೀನು ಅತಿಕ್ರಮಣ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರವೇ ಸ್ವಾಭಿಮಾನಿ ಬಣದ ನೇತೃತ್ವದಲ್ಲಿ ಮಿರ್ಜಾನ್‌ ಗ್ರಾ.ಪಂ.ಜನಪ್ರತಿನಿಧಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಮಿರ್ಜಾನ ಹೋಬಳಿಯ ಖಂಡಗಾರ ಮಜರೆಯಲ್ಲಿ ಸುಮಾರು 20 ಎಕರೆ
ಸರ್ಕಾರಿ ಪಡಾ ಜಮೀನು ಅತಿಕ್ರಮಣವಾಗಿದ್ದರೂ ಅರಣ್ಯ ಇಲಾಖೆ ಕಣ್ಮುಚ್ಚಿ ಕುಳಿತಿದೆ.ಅತಿಕ್ರಮಣ ಜಾಗದಲ್ಲಿದ್ದ ಸಾಗವಾನಿ,ಬೀಟೆ,ಮತ್ತಿ ಇತರೆ ಬೆಲೆ ಬಾಳುವ ಸುಮಾರು ಸಾವಿರಕ್ಕೂ ಅಧಿಕ ಮರಗಳನ್ನು ಕಡಿದು ಸಾಗಿಸಲಾಗಿದೆ.ಇಂದಿಗೂ ಆ ಜಾಗದಲ್ಲಿ ಕಡಿದ ಮರಗಳ ಬುಡಗಳು ಹಾಗೆಯೇ ಇದೆ.ಜನ ಸಾಮಾನ್ಯರು ಉರುವಲು ಕಟ್ಟಿಗೆಗಾಗಿ ಒಣಗಿದ ಸಣ್ಣ ಮರವನ್ನು ಕಡಿದರೂ ಅವರ ಮೇಲೆ ದರ್ಪ
ತೋರಿ,ಪ್ರಕರಣ ದಾಖಲಿಸುವ ಅರಣ್ಯ ಇಲಾಖೆಯ ಅಧಿಕಾರಿಗಳು ಈ ವಿಷಯದಲ್ಲಿ ಜಾಣ ಕುರುಡುತನ ಪ್ರದರ್ಶಿಸುತ್ತಿರುವುದನ್ನು ಗಮನಿಸಿದರೆ, ಇಲಾಖೆಯ ಅಧಿಕಾರಿಗಳ ಮೇಲೆ ಶಂಕೆ ಮೂಡುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಮಿರ್ಜಾನ್‌ ಕಂದಾಯ ಅಧಿಕಾರಿಯು ಸ್ಥಳ ಪರಿಶೀಲನೆ ಮಾಡಿ,
ಅತಿಕ್ರಮಣವನ್ನು ತೆರವು ಮಾಡಿ,ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.ಈ ಕಾರಣಕ್ಕೆ ಅವರನ್ನು ವರ್ಗಾವಣೆಗೊಳಿಸಲು ಕೆಲ ಕಾಣದ ಕೈಗಳು ಪ್ರಬಲ ಹುನ್ನಾರ ನಡೆಸಿರುವ ಮಾಹಿತಿ ಕೂಡ ಲಭಿಸಿದೆ.ಹೀಗಾಗಿ ದಕ್ಷ ಅಧಿಕಾರಿಯನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂದು ಮನವಿಯಲ್ಲಿ
ಒತ್ತಾಯಿಸಲಾಗಿದೆ.

ಮನವಿಯನ್ನು ಕುಮಟಾ ತಹಸೀಲ್ದಾರ್‌ ವಿವೇಕ ಶೇಣ್ವಿ ಅವರು ಸ್ವೀಕರಿಸಿ,ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಮನವಿ ಸಲ್ಲಿಕೆಯ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ರಾಜು ಮಾಸ್ತಿಹಳ್ಳ, ತಾಲೂಕು ಅಧ್ಯಕ್ಷ ಮಂಜುನಾಥ ಮರಾಠಿ,ಮಿರ್ಜಾನ್‌ ಗ್ರಾಪಂ.ಅಧ್ಯಕ್ಷ ಪರಮೇಶ್ವರ ಪಟಗಾರ,ಗ್ರಾ.ಪಂ.ಸದಸ್ಯರಾದ ಮಂಜುನಾಥ ಹರಿಕಾಂತ,ಪರಶು ಸಾವೇರಾ ಫರ್ನಾಂಡೀಸ್‌,ವಕೀಲ ನಾಗರಾಜ ಹೆಗಡೆ,ಕರವೇ ಸ್ವಾಭಿಮಾನಿ ಬಣದ ಈಶ್ವರ
ಉಪ್ಪಾರ,ರಿತೇಶ ಉಪ್ಪಾರ,ಮಾರುತಿ ಆನೆಗುಂದಿ,ಕೆ.ಎನ್‌. ಮಂಜು,ಶಿವಶಂಕರ ಮುಕ್ರಿ,ರಾಜೀವ ಗೌಡ,ಮೋಹನ ಪಟಗಾರ ಇತರರು ಇದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *