Ex -serviceman, s.. ಸಾರ್ಥಕ ಸೇವೆ: ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ

ಸಿದ್ದಾಪುರ: ಮಾಜಿ ಸೈನಿಕರಿಗೆ ಇಂದು ಗೌರವ ಕಮ್ಮಿಯಾಗುತ್ತಿದೆ ಮಾಜಿ ಸೈನಿಕರಿಗೆ ಸರ್ಕಾರದ ಸೌಲಭ್ಯಗಳು ಸರಿಯಾಗಿ ಮುಟ್ಟುತ್ತಿಲ್ಲ ನಮ್ಮಲ್ಲಿ ಒಗ್ಗಟ್ಟು ಕಮ್ಮಿ ಆಗುತ್ತಿರುವುದು ಇದಕ್ಕೆಲ್ಲ ಕಾರಣ ಸರಕಾರ ದಿಂದ ಸಿಗುವ ಸೌಲಭ್ಯ ದೊರಕಿಸಲು ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಗಳಲ್ಲಿ ಇಂತಹ ಸಂಘಗಳನ್ನು ಪ್ರಾರಂಭಿಸುತ್ತಿದ್ದೇವೆ ಎಂದು ರಾಜ್ಯ ಸಂಘಟನೆಯ ಸುಭಾಷ್ ಚಂದ್ರ ತೇಜಸ್ವಿ ತಿಳಿಸಿದರು
ಅವರು ಬಾಲ ಭವನದಲ್ಲಿ ಉದ್ಘಾ ಟನೆಗೊಂಡ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘ ದ ಕಾರ್ಯ ಕ್ರಮ ದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ನಮಗೆ ಸಮಾಜದಲ್ಲಿ ಸ್ಥಾನಮಾನ ಕಲ್ಪಿಸಿಕೊಳ್ಳುವುದು ಮುಖ್ಯವಾಗುತ್ತದೆ ನಾವುಗಳು ಒಗ್ಗಟ್ಟಿನಿಂದ ಸಮಾಜಮುಖಿ ಕೆಲಸ ಮಾಡಬೇಕಾಗಿದೆ ಇದರಿಂದ ನಮಗೆ ಸಮಾಜದಲ್ಲಿ ಗುರ್ತಿಸಿ ನಮಗೆ ಸಹಾಯ ಮಾಡುತ್ತಾರೆ ಎಂದರು
ಸೈನಿಕರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟಿಸಿದ ಮಾಜಿ ಲಯನ್ ಗವರ್ನರ್ ರವಿಹೆಗಡೆ ಹೂವಿನ ಮನೆ ಮಾತನಾಡಿ ಸೈನಿಕರ ಕ್ಷೇಮಾಭಿವೃದ್ಧಿ ಸಂಸ್ಥೆ ಮೂಲಕ ದೇಶಭಕ್ತಿ ನಡೆಯುವುದು ಮುಖ್ಯ ಸೈನಿಕರನ್ನು ಇತ್ತೀಚಿನ ದಿನಗಳಲ್ಲಿ ಬಿನ್ನವಾಗಿ ನೋಡುತ್ತಿದ್ದಾರೆ ಅವರನ್ನು ಗೌರವದಿಂದ ನೋಡುವ ಕಾರ್ಯವಾಗಬೇಕು ಸೈನಿಕರ ಅನುಭವ ಸಮಾಜಕ್ಕೆ ಸಿಗುವಂತಾಗಬೇಕು ಕವಲುದಾರಿಯಲ್ಲಿ ನಿಂತ ಸಮಾಜ ನಿಶ್ಚಿತ ದಾರಿಯಲ್ಲಿ ತೆಗೆದುಕೊಂಡು ಹೋಗಲು ಪೂರಕವಾಗಿ ಇಂತಹ ಸಂಘಗಳು ಕೆಲಸ ಮಾಡಬೇಕು ಎಂದರು.
ರಾಷ್ಟ್ರಪ್ರಶಸ್ತಿ ಪಡೆದ ಶಿಕ್ಷಕ ಜಿ ಜಿ ಹೆಗಡೆ ಬಾಳಗೋಡ ಮಾತನಾಡಿ ದೇಶ ಕಟ್ಟುವಲ್ಲಿ ಸೈನಿಕರ ಪಾತ್ರ ಮುಖ್ಯ ಅವರ ಅನುಭವವನ್ನು ವಿದ್ಯಾರ್ಥಿಗಳಿಗೆ ನೀಡಿದಾಗ ರಾಷ್ಟ್ರ
ಪ್ರೇಮದ ಕಲ್ಪನೆ ಮೂಡಿ ದೇಶ ಸೇವೆಗೆ ಪ್ರೇರಣೆ ಮೂಡುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿ ಬಿ. ಪಾಟೀಲ್ ವಹಿಸಿದ್ದರು
ನಿವೃತ್ತ ನೌಕರ ಸಂಘದ ಅಧ್ಯಕ್ಷ ಸಿ ಎಸ್ ಗೌಡರ, ಎಂ ಆರ್ ಪಾಟೀಲ್, ರಾಜೇಶ್ ನಾಯ್ಕ, ಉಪಸ್ಥಿತರಿದ್ದರು.
ದತ್ತಾತ್ರೇಯ ಭಟ್ ನಿರೂಪಣೆ ಮಾಡಿದರು ಕಾರ್ಯ ದರ್ಶಿ ಕುಮಾರ್ ಕೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.


ಸೇನೆಯಲ್ಲಿ 18 ವರ್ಷಗಳ ಸಾರ್ಥಕ ಸೇವೆ: ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ

ಭಾರತೀಯ ಸೇನೆಯಲ್ಲಿ 18 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ಹಿಂದಿರುಗಿದ ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ ಕೋರಲಾಗಿದೆ.

ಬೆಳಗಾವಿ: ಭಾರತೀಯ ಸೇನೆಯಲ್ಲಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧರೊಬ್ಬರಿಗೆ ಸ್ವಗ್ರಾಮದಲ್ಲಿ ಸಕಲ ವಾದ್ಯ ಮೇಳದೊಂದಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಗಿದೆ.

ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ

ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಅಜೀತ ಶಂಕರ ಮಗದುಮ್ಮ ಎಂಬುವವರು ಸೇನೆಯಲ್ಲಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ಅವರಿಗೆ ತೆರೆದ ವಾಹನದಲ್ಲಿ ಸಕಲ ವಾದ್ಯ ಮೇಳದೊಂದಿಗೆ ಪುಷ್ಪವೃಷ್ಟಿಯ ಮೂಲಕ ಗ್ರಾಮಸ್ಥರು ಭರ್ಜರಿ ಸ್ವಾಗತ ಕೋರಿದ್ರು.

ಗ್ರಾಮದ ಬೀರೇಶ್ವರ ಮಂದಿರದಿಂದ ಮೆರವಣಿಗೆ ಮುಖಾಂತರ ಬರಮಾಡಿಕೊಂಡರು. ಬಳಿಕ ಡೋಣವಾಡದ ದುರದುಂಡೇಶ್ವರಮಠದ ಶಿವಾನಂದ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಸ್ವಾಗತ ಕಾರ್ಯಕ್ರಮ ನಡೆಯಿತು. ಸೇವಾ ನಿವೃತ್ತಿ ಹೊಂದಿದ ಸೈನಿಕ ಅಜೀತ್​​​ ಮಗದುಮ್ಮ ಅವರಿಗೆ ಶಿವಾನಂದ ಮಹಾಸ್ವಾಮಿಗಳು ಸನ್ಮಾನಿಸುವ ಮೂಲಕ ಆಶೀರ್ವದಿಸಿದರು‌.

ಬಳಿಕ ಮಾತನಾಡಿದ ಸ್ವಾಮೀಜಿಗಳು, ದೇಶಕ್ಕೆ ಇಬ್ಬರು ಬೆನ್ನುಲುಬುಗಳಿದ್ದು, ಒಬ್ಬರು ದೇಶ ಕಾಯುವ ಸೈನಿಕರು ಮತ್ತು ದೇಶಕ್ಕೆ ಅನ್ನ ಕೊಡುವ ರೈತರು ಎಂದರು. ದೇಶ ಕಾಯುವ ಸೈನಿಕರು ಪ್ರತಿಯೊಂದು ಮನೆಯಲ್ಲಿಯೂ ಹುಟ್ಟಬೇಕು.

ಪ್ರತಿಯೊಬ್ಬ ತಂದೆ-ತಾಯಂದಿರು ಮಕ್ಕಳಲ್ಲಿ ದೇಶಾಭಿಮಾನ ಬೆಳೆಸುವ ಮುಖಾಂತರ ತಮ್ಮ ಮಕ್ಕಳನ್ನು ಸೈನಿಕರನ್ನಾಗಿಸಲು ಮುಂದಾಗಬೇಕು. ತಾಯಿ ಭಾರತಾಂಬೆಯ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ, ಅದಕ್ಕೂ ಯೋಗಬೇಕು. ಆ ಯೋಗ ಅಜೀತ್​ ಶಂಕರ ಮಗದುಮ್ಮ ಅವರಿಗೆ ದೊರಕಿರುವುದು ಹೆಮ್ಮಯ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.

ವೀರಯೋಧ ಅಜೀತಶಂಕರ ಮಗದುಮ್ಮ ಮಾತನಾಡಿ, ತಂದೆ – ತಾಯಿ, ಗ್ರಾಮದ ಗುರು ಹಿರಿಯರ ಆಶೀರ್ವಾದದಿಂದ ನಾನು 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸಿರುವ ತೃಪ್ತಿ ನನಗಿದೆ ಎಂದು ಹೇಳಿದರು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *