ಭಟ್ಕಳ : ರಾಷ್ಟ್ರೀ ಯ ತರಬೇತುದಾರ ಕಾಶೀನಾಥ ನಾಯ್ಕರಿಗೆ ಸನ್ಮಾನ

ಕಾರವಾರ : ರಾಷ್ಟ್ರೀಯ ತರಬೇತುದಾರ ಹಾಗೂ ೨೦೦೪ ರ ಕಾಮನ್‌ವೆಲ್ತ್ ಗೇಮ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಕಾಶೀನಾಥ ನಾಯ್ಕ ಇಂದು ಭಟ್ಕಳ ತಾಲೂಕಿನ ಸಾರದಹೊಳೆಯ ಹಳೆಕೋಟೆ ವೀರಾಂಜನೇಯ ದೇವಸ್ಥಾನ ಮತ್ತು ಭಟ್ಕಳದ ಗೋಪಾಲಕೃಷ್ಣ ರಸ್ತೆಯಲ್ಲಿರುವ ಶ್ರೀಧರ ಪದ್ಮಾವತಿ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು.ಸಾರದಹೊಳೆಯ ನೂತನ ಶಿಲಾಮಯ ದೇವಸ್ಥಾನವನ್ನು ವೀಕ್ಷಿಸಿದ ನಂತರ ಕಾಶೀನಾಥ ಮಾತನಾಡಿ,ನಾನು ಮೂಲತಃ ಮುರುಡೇಶ್ವರದವನಾಗಿದ್ದು,ನಾನು ಬಾಲ್ಯದಿಂದಲೂ ಈ ದೇವಸ್ಥಾನಕ್ಕೆ ನಡೆದುಕೊಂಡಿದ್ದು,ಆಂಜನೇಯನ ಅನುಗ್ರಹದಿಂದ ನಾನು ಈ ಸ್ಥಾನಕ್ಕೆ ಏರಿದ್ದೇನೆ. ಎಂದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಕಾಶೀನಾಥ ನಾಯ್ಕರವರನ್ನು ಸನ್ಮಾನಿಸಿ ಗೌರವಿಸಲಾಯಿತು.ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸುಬ್ರಾಯ ನಾಯ್ಕ,ಕೃಷ್ಣಾ ನಾಯ್ಕ,ಪೃಥ್ವಿ,ಮುಕುಂದ ನಾಯ್ಕ,ಸುಬ್ರಾಯ ನಾಯ್ಕ ಇದ್ದರು.

ಭಟ್ಕಳದ ಗದ್ದುಗೆ ಶ್ರೀಧರ ಪದ್ಮಾವತಿ ದೇವಸ್ಥಾನಕ್ಕೆ ಭೇಟಿ

ಕಾಶೀನಾಥ ನಾಯ್ಕ ಅವರು ಇಲ್ಲಿನ ಗದ್ದುಗೆಯ ಶ್ರೀ ಶ್ರೀಧರ ಪದ್ಮಾವತಿ ದೇವಸ್ಥಾನಕ್ಕೂ ಭೇಟಿ ನೀಡಿ ಶ್ರೀದೇವರಿಗೆ ಪೂಜೆ ಸಲ್ಲಿಸಿದರು.ದೇವಸ್ಥಾನದ ಆಡಳಿತ ಮಂಡಳಿಯ ಧರ್ಮದರ್ಶಿಗಳಾದ ರಾಮಾ ನಾಯ್ಕ ದಂಪತಿಗಳು ದೇವಸ್ಥಾನದ ಪರವಾಗಿ ಕಾಶೀನಾಥರವರಿಗೆ ಸಾಲು ಹೊದಿಸಿ,ಫಲಪುಷ್ಪ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಆಸರಕೇರಿ ನಾಮಧಾರಿ ಗುರುಮಠದ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ,ಸ್ಪಂದನ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾಯ್ಕ, ಗಂಗಾಧರ ನಾಯ್ಕ,ಶಿವಾನಂದ ನಾಯ್ಕ,ಪಾಂಡುರಂಗ ನಾಯ್ಕ,ವೆಂಕಟೇಶ ನಾಯ್ಕ,ರಾಮಾ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

,

ಯಲ್ಲಾಪುರ : ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ, ಹಳ್ಳಕ್ಕೆ ಹೊತ್ತಿಕೊಂಡ ಬೆಂಕಿ!

ಕಾರವಾರ : ರಾಸಾಯನಿಕ ತುಂಬಿದ ಟ್ಯಾಂಕರ್ ಒಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಕ್ರಾಸ್ ಬಳಿ ಇಂದು ಮುಂಜಾನೆ ಮುಗುಚಿ ಬಿದ್ದಿದೆ.ಇದರಿಂದ ಸೋರಿದ ಕೆಮಿಕಲ್ ಹಳ್ಳದಲ್ಲಿ ಹರಿದು ಅಲ್ಲಿರುವ ರೈತರ ಗದ್ದೆ ಮತ್ತು ತೋಟಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ.

ಪೇಂಟ್ ಗೆ ಬಳಸುವ “ಪೆಂಜಾನ್”ಮಂಗಳೂರಿನಿಂದ ಮುಂಬಯಿಗೆ ಟ್ಯಾಂಕರ್ ಮೂಲಕ ಕಳುಹಿಸಲಾಗುತ್ತಿತ್ತು.ಕಡಿದಾದ ತಿರುವಿನಲ್ಲಿ ಟ್ಯಾಂಕರ್ ಪಲ್ಟಿಯಾಗಿ ಸೋರಿದ ರಾಸಾಯನಿಕವು ಪಕ್ಕದ ಹಳ್ಳ ಹಾಗೂ ಕಾಲುವೆಗಳಲ್ಲಿ ಹರಿದಿದೆ.ಇದಕ್ಕೆ ಬೆಂಕಿ ತಗುಲಿದ್ದು,ಹಳ್ಳ ಹೊತ್ತಿ ಉರಿದಿದೆ.ಬೆಂಕಿ ಟ್ಯಾಂಕರ್ ಗೂ ತಗುಲಿದೆ.ಹಳ್ಳದ ಭತ್ತದ ಗದ್ದೆ, ಪಂಪ್ ಸೆಟ್ ಸುಟ್ಟು ಕರಕಲಾಗಿದೆ.ತೋಟದಲ್ಲಿದ್ದ ಗಿಡಗಳಿಗೆ ಬೆಂಕಿ ತಗುಲಿ ಹಾನಿಯಾಗಿದೆ.ಟ್ಯಾಂಕರ್ ಚಾಲಕ ಮತ್ತು ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವಾಗಿದ್ಧಾರೆ.

ಟ್ಯಾಂಕರ್ ಅಪಘಾತವಾಗುತ್ತಿದ್ದಂತೆ ಸೋರಿದ ರಾಸಾಯನಿಕಕ್ಕೂ ಬೆಂಕಿ ತಗುಲಿದ್ದು,ಸದ್ದು ಎರಡು ಕಿ.ಮೀ.ವರೆಗೂ ಕೇಳಿಸಿದೆ. ಮನೆಗಳಲ್ಲಿದ್ದ ಜನರು ಗಾಬರಿಯಿಂದ ಹೊರಗಡೆ ಓಡಿ ಬಂದಿದ್ದಾರೆ.ಆಗ ಹಳ್ಳ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡುಬಂದಿದೆ.

ಬಾಳೆಗದ್ದೆ ದೇಗುಲದ ಪಕ್ಕದಲ್ಲಿರುವ ನಿವಾಸಿ ಎಸ್.ಎಸ್.ಭಟ್ಟ ಅವರ ಐದು ಗುಂಟೆ ಭತ್ತದ ಗದ್ದೆ ಯಾವುದೇ ಅವಶೇಷ ಇಲ್ಲದಂತೆ ಸುಟ್ಟು ಹೋಗಿದೆ.ಬಾವಿಗೆ ಹಾಕಿದ ಪಂಪ್ ಸೆಟ್ ಸುಟ್ಟು ಕರಕಲಾಗಿದೆ.ತೋಟದಲ್ಲಿದ್ದ ಅಡಿಕೆ ಮರ,ತೆಂಗಿಮರ, ಮಾವಿನ ಮರ,ಹಲಸಿನ ಮರ ಸೇರಿದಂತೆ ಮುಂತಾದ ಮರಗಳಿಗೆ ಬೆಂಕಿ ತಗುಲಿದೆ. ಮನೆಯ ಒಂದು ಪಾರ್ಶ್ವಕ್ಕೂ ಬೆಂಕಿ ತಗುಲಿದೆ.

ಇದೇ ರೀತಿ ಮಂಜುನಾಥ ಗೌಡ, ನಾರಾಯಣ ಭಟ್ಟ,ವಿಶ್ವನಾಥ ಭಟ್ಟ ಮುಂತಾದವರ ತೋಟ,ಗದ್ದೆಗಳಿಗೂ ಹಾನಿಯಾಗಿದೆ.ಕಾಲುವೆಯಲ್ಲಿ ಸುಮಾರು 20 ಅಡಿ ಹಳ್ಳದಲ್ಲಿ 50 ಅಡಿ ಎತ್ತರಕ್ಕೂ ಬೆಂಕಿ ಕೆನ್ನಾಲಿಗೆ ಹೊತ್ತಿ ಉರಿಯುವ ದೃಶ್ಯ ಕಂಡುಬಂದಿದೆ.ಅಪಘಾತವಾದ ಕಾರಣಕ್ಕೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮೂರು ಗಂಟೆಗೂ ಅಧಿಕ ಕಾಲ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿತ್ತು.ಯಲ್ಲಾಪುರ, ಮುಂಡಗೋಡ,ಶಿರಸಿಯಿಂದ ಬಂದ ಅಗ್ನಿಶಾಮಕದಳ ಹರಸಾಹಸಪಟ್ಟು ಬೆಂಕಿ ನಂದಿಸಿದರು.ಅಪಘಾತ ಸ್ಥಳಕ್ಕೆ ಶಿರಸಿ ಡಿ.ವೈ.ಎಸ್.ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *