ಎಣ್ಣೆ ಏಟಲ್ಲಿ ಅಪ್ಪನನ್ನೇ ಹತ್ಯೆ ಮಾಡಿದ ಪಾಪಿ ಪುತ್ರ! ಮೊಸಳೆ ಎಳೆದೊಯ್ದಿದ್ದ ಬಾಲಕನ ಮೃತದೇಹ ಪತ್ತೆ

ಕಾರವಾರ: ಎಣ್ಣೆ ಏಟಲ್ಲಿ ಅಪ್ಪನನ್ನೇ ಹತ್ಯೆ ಮಾಡಿದ ಪಾಪಿ ಪುತ್ರ

ಮದ್ಯಪಾನ ಮಾಡಿ ಮನೆಯಲ್ಲಿ ಜಗಳ ತೆಗೆಯುತ್ತಿದ್ದ ಮಗ ಈಗ ತಂದೆಯನ್ನೇ ಕೊಂದು ಪೊಲೀಸರ ಅತಿಥಿಯಾಗಿದ್ದಾನೆ. ಕುಡಿದ ಮತ್ತಲ್ಲಿ ಜಗಳ ತೆಗೆದು ತಂದೆಯನ್ನೇ ಹತ್ಯೆ ಮಾಡಿದ್ದಾನೆ.

ಕಾರವಾರ (ಉ.ಕ): ಕ್ಷುಲ್ಲಕ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಜಗಳ ತೆಗೆದ ಮಗ ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುಮಟಾ ತಾಲೂಕಿನ ಸಂತೆಗುಳಿ ವ್ಯಾಪ್ತಿಯ ಕಲವೆ ಗ್ರಾಮದಲ್ಲಿ ನಡೆದಿದೆ.

ರಾಮಚಂದ್ರ ಕುಪ್ಪು ಗೌಡ (55) ಮೃತ ದುರ್ದೈವಿ.‌ ನಿತ್ಯ ಕುಡಿದು ಬರುತ್ತಿದ್ದ ಮಗ ಶ್ರೀಕಾಂತ್ ಮನೆಯಲ್ಲಿ ಜಗಳವಾಡುತ್ತಿದ್ದ. ಸೋಮವಾರ ಸಂಜೆ ಕೂಡ ಮನೆಯಲ್ಲಿ ಜಗಳವಾಡಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ನಂತದ ಸಿಟ್ಟಿಗೆದ್ದ ಮಗ ಕತ್ತಿಯಿಂದ ತಂದೆ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡ ತಂದೆ ನರಳಿ ಪ್ರಾಣಬಿಟ್ಟಿದ್ದಾರೆ.

Drunken Son Killed his Father after exchanging words

ಅಪ್ಪನನ್ನೇ ಹತ್ಯೆಗೈದ ಪಾಪಿ ಪುತ್ರ

ಘಟನೆ ಕುರಿತು ಮೃತರ ಪತ್ನಿ ಸಾವಿತ್ರಿ ಕುಮಟಾ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ಪಿಎಸ್​​​ಐ ಆನಂದ ಮೂರ್ತಿ, ರವಿ.ಗುಡ್ಡೆ, ಎಎಸ್​​​ಐ ನಾಗಾರಜಾಪ್ಪ ಆರೋಪಿಯನ್ನ ಬಂಧಿಸಿದ್ದಾರೆ.

Thumbnail image

ದಾಂಡೇಲಿಯಲ್ಲಿ ಮೊಸಳೆ ಎಳೆದೊಯ್ದಿದ್ದ ಬಾಲಕನ ಮೃತದೇಹ ಪತ್ತೆ

ದಾಂಡೇಲಿ ನಗರದ ಹಳಿಯಾಳ ರಸ್ತೆಯ ವಿನಾಯಕ ನಗರದಲ್ಲಿರುವ ಕಾಳಿ ನದಿಯ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನೋರ್ವನನ್ನು ಮೊಸಳೆಯೊಂದು ಎಳೆದೊಯ್ದಿತ್ತು. ಇಂದು ಬಾಲಕನ ಶವ ಪತ್ತೆಯಾಗಿದೆ.

ಕಾರವಾರ: ಮೀನು ಹಿಡಿಯಲು ತೆರಳಿದಾಗ ಮೊಸಳೆ ಪಾಲಾಗಿದ್ದ ಬಾಲಕನ ಶವ ಎರಡು ದಿನಗಳ ಬಳಿಕ ಇಂದು ಪತ್ತೆಯಾಗಿದೆ.

ಮೊಹಿನ್ ಮೆಹಬೂಬ್ ಅಲಿ(15) ಮೃತ ಬಾಲಕ. ವಿನಾಯಕನಗರದ ಬಳಿಯ ಕಾಳಿ ನದಿ ದಂಡೆಯಲ್ಲಿ ಮೀನು ಹಿಡಿಯುತ್ತಿರುವಾಗ ದಾಳಿ ಮಾಡಿದ ಮೊಸಳೆ ಬಾಲಕನನ್ನು ಎಳೆದೊಯ್ದಿದಿತ್ತು. ಒಂದೆರಡು ಬಾರಿ ನದಿಯಲ್ಲಿ ಮೊಸಳೆಯು ಬಾಲಕನನ್ನು ಮೇಲಕ್ಕೆ ಎತ್ತಿ ಮುಳುಗಿಸಿದ್ದ ಬಳಿಕ ಬಾಲಕನ ಸುಳಿವು ಪತ್ತೆಯಾಗಿರಲಿಲ್ಲ. ಬಾಲಕನಿಗಾಗಿ ಸ್ಥಳೀಯರು ತೆಪ್ಪದ ಮೂಲಕ ಮತ್ತು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೋಟ್​ಗಳ ಮೂಲಕ ಹುಡುಕಾಟ ನಡೆಸಿದ್ದರೂ ಬಾಲಕ ಪತ್ತೆಯಾಗಿರಲಿಲ್ಲ.

dead body of boy found in dandeli who dragged by crocodile

ದಾಂಡೇಲಿಯಲ್ಲಿ ಮೊಸಳೆ ಎಳೆದೊಯ್ದಿದ್ದ ಬಾಲಕನ ಮೃತದೇಹ ಪತ್ತೆ!

ಇಂದು ಮತ್ತೆ ಕಾರ್ಯಾಚರಣೆ ನಡೆಸಿದಾಗ ಬಾಲಕನ ಶವ ಪತ್ತೆಯಾಗಿದೆ. ಬಾಲಕನ ಒಂದು ಕೈ ಅನ್ನು ಮೊಸಳೆ ತಿಂದು ಹಾಕಿದೆ. ಈ ಬಗ್ಗೆ ದಾಂಡೇಲಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *