ಉ.ಕ. ಕ್ಯಾಸಿನೋಕ್ಕೆ ವಿರೋಧ..ಎ.ರವೀಂದ್ರ ಅಭಿಪ್ರಾಯ

ಗೋವಾ ಸೇರಿದಂತೆ ದೇಶದ ಕೆಲವು ರಾಜ್ಯಗಳ ಪ್ರವಾಸೋದ್ಯಮದ ಪ್ರಮುಖ ಮೂಲ ಕ್ಯಾಸಿನೋ ಪ್ರಾರಂಭ ದ ಬಗ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿದೆ. ಪರಿಸರ ಪ್ರವಾಸೋದ್ಯಮಕ್ಕೆ ಹೆಸರಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕ್ಯಾಸಿನೋ ಪ್ರಾರಂಭಿಸುವ ಹೊಸ ಚಿಂತನೆ ಬಗ್ಗೆ ಸೋಮುವಾರ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್‌ ಹೆಬ್ಬಾರ್‌ ಕಾರವಾರದಲ್ಲಿ ಪ್ರಕಟಿಸಿದ್ದರು. ಶಿವರಾಮ ಹೆಬ್ಬಾರರ ರಾಜ್ಯೋತ್ಸವ ಭಾಷಣದ ಪ್ರಮುಖ ಅಂಶವಾಗಿದ್ದ ಕ್ಯಾಸಿನೋ ಪ್ರಾರಂಭದ ಬಗ್ಗೆ ಜಿಲ್ಲೆಯಾದ್ಯಂತ ವಿರೋಧದ ಅಲೆ ಎದ್ದಿದೆ.ಇದು ಜಿಲ್ಲೆಗೆ ಕಳಂಕ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.


     ಉತ್ತರ ಕನ್ನಡ ಜಿಲ್ಲೆ ಅರಣ್ಯ, ಪರಿಸರ ಪ್ರವಾಸೋದ್ಯಮದ ಪ್ರಮುಖ ಜಿಲ್ಲೆ. ಈ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ನೆಪದಲ್ಲಿ ಕ್ಯಾಸಿನೋ ಪ್ರಾರಂಭ ಗೋವಾ ಸಂಸ್ಕೃತಿಗೆ ಆಹ್ವಾನ ಕೊಟ್ಟಂತೆ ಜಿಲ್ಲೆಯಲ್ಲಿ ಜನಸಾಮಾನ್ಯರ ಅನೇಕ ಸಮಸ್ಯೆಗಳಿವೆ ಅಂಥ ಸಮಸ್ಯೆ, ಸವಾಲು ಸ್ವೀಕರಿಸದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ ತಮ್ಮ ವೈಯಕ್ತಿಕ ಅಭಿಪ್ರಾಯ, ಯೋಜನೆ ಹೇಳಿದ್ದಾರೋ ಇದು ಬಿ.ಜೆ.ಪಿ.ಯ ಯೋಚನೆ, ಯೋಜನೆಯೋ ಎನ್ನುವ ಪ್ರಶ್ನೆ ಎದ್ದಿದೆ.


ಗೋವಾ ಮಾದರಿಯ ಕ್ಯಾಸಿನೋ ಪ್ರಾರಂಭದ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಜಿಲ್ಲಾಅರಣ್ಯ ಭೂಮಿ ಹೋರಾಟಗಾರರ ವೇದಿಕೆ    ಅರಣ್ಯ ಭೂಮಿ ಸಾಗುವಳಿದಾರರು ಮತ್ತು ಇತರ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸದ ಜಿಲ್ಲಾಡಳಿತ ಕ್ಯಾಸಿನೋ ಪ್ರಾರಂಭಕ್ಕೆ ಮುಂದಾಗಿದೆ. ಇದು ಉತ್ತರ ಕನ್ನಡ ಜಿಲ್ಲೆಯ ಜನರ ಮನೋಭಾವ, ಅಭಿಪ್ರಾಯಕ್ಕೆ ವಿರೋಧ ಎಂದಿದೆ.
ಈ ಬಗ್ಗೆ ಮಾತನಾಡಿದ ಅರಣ್ಯಭೂಮಿ ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರನಾಥ ಕ್ಯಾಸಿನೋ ಪ್ರಾರಂಭದಿಂದ ಉತ್ತರ ಕನ್ನಡ ಜಿಲ್ಲೆಯ ಭಾಗ್ಯದ ಬಾಗಿಲು ತೆರೆಯಲ್ಲ ಬದಲಾಗಿ ಗೋವಾದ ಮೋಜಿನ ಸಂಸ್ಕೃತಿಗೆ ಇಲ್ಲಿ ಅವಕಾ ಶ ಮಾಡಿದಂತಾಗುತ್ತದೆ. ಕ್ಯಾಸಿನೋ ಕ್ಕೆ ಅವಕಾಶ ಮಾಡುವ ಜಿಲ್ಲಾಡಳಿತದ ನಿರ್ಧಾರ ಜನವಿರೋಧಿಯಾಗಿದೆ ಎಂದು ತಿಳಿಸಿದ್ದಾರೆ  ಜನರ ಅಗತ್ಯ ಬೇಡಿಕೆಗಳಿಗೆ ಸ್ಫಂದಿಸದ ಸರ್ಕಾರ ಕ್ಯಾಸಿನೋ ಮೂಲಕ ಜಿಲ್ಲೆಯ ಸಂಸ್ಕೃತಿ-ಸಂಸ್ಕಾರಕ್ಕೆ ಅಪಚಾರ ಎಂದಿದ್ದಾರೆ.  .ಉತ್ತರ ಕನ್ನಡ ಜಿಲ್ಲೆಯ ಜನ ಕ್ಯಾಸಿನೋ ಮೋಜಿಗಾಗಿ ಜಿಲ್ಲೆಯಿಂದ ಗೋವಾಕ್ಕೆ ಹೋಗಿ ಬರುತ್ತಿರುವ ವಿದ್ಯಮಾನದ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರರ ರಾಜ್ಯೋತ್ಸವ ದಿಕ್ಸೂಚಿಗೆ ತೀವೃ ವಿರೋಧ ವ್ಯಕ್ತವಾಗಿರುವುದು ವಿಶೇಶವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *