ಉಪ ಚುನಾವಣೆ : ಎಲ್ಲೆಡೆ ಬಿ.ಜೆ.ಪಿ.ಗೆ ಮುಖಭಂಗ, ಜೆ.ಡಿ.ಎಸ್.‌ ಗೆ ಹೀನಾಯ ಸೋಲು

ಹಿಮಾಚಲ ಉಪ ಚುನಾವಣೆ ಫಲಿತಾಂಶ: ಎಲ್ಲಾ 4 ಸ್ಥಾನಗಳಲ್ಲೂ ಕಾಂಗ್ರೆಸ್‌ ಗೆಲುವು, ಆಡಳಿತರೂಢ ಬಿಜೆಪಿಗೆ ತೀವ್ರ ಮುಖಭಂಗ

ಹಿಮಾಚಲ ಪ್ರದೇಶದ ಒಂದು ಲೋಕಸಭಾ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

congress

ಶಿಮ್ಲಾ: ಹಿಮಾಚಲ ಪ್ರದೇಶದ ಒಂದು ಲೋಕಸಭಾ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

ಮಂಡಿ ಲೋಕಸಭಾ ಕ್ಷೇತ್ರ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಾದ ಅರ್ಕಿ, ಫತೇಪುರ್ ಮತ್ತು ಜುಬ್ಬಲ್-ಕೋಟ್‌ಖಾಯ್ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರಿಗೆ ಪ್ರತಿಷ್ಠೆಯಾಗಿದ್ದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಗೇಡಿಯರ್ ಖುಶಾಲ್ ಠಾಕೂರ್ (ನಿವೃತ್ತ) ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪ್ರತಿಭಾ ಸಿಂಗ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 

2019 ರಲ್ಲಿ 3.98 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದ ಎರಡು ಬಾರಿ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಅವರ ನಿಧನದಿಂದ ತೆರವಾಗಿದ್ದ ಮಂಡಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು.

ಆರ್ಕಿ, ಜುಬ್ಬಲ್-ಕೋಟ್‌ಖೈ ಮತ್ತು ಫತೇಪುರ್ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. (kpc)

ಆಂಧ್ರ ಉಪ ಚುನಾವಣೆ: ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರ ಮತಗಳ ಅಂತರದಿಂದ ಗೆಲುವು; ಕಾಂಗ್ರೆಸ್, ಬಿಜೆಪಿಗೆ ಠೇವಣಿ ನಷ್ಟ

ಆಂಧ್ರ ಪ್ರದೇಶದ ಬದ್ವೇಲ್ (ಎಸ್‌ಸಿ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ…

sudha

ಕಡಪ: ಆಂಧ್ರ ಪ್ರದೇಶದ ಬದ್ವೇಲ್ (ಎಸ್‌ಸಿ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರವನ್ನು ಉಳಿಸಿಕೊಂಡಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಠೇವಣಿ ಕಳೆದುಕೊಂಡಿವೆ.

ವೈಎಸ್‌ಆರ್‌ ಕಾಂಗ್ರೆಸ್ ಅಭ್ಯರ್ಥಿ ಡಾ ಜಿ ಸುಧಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಪಿ ಸುರೇಶ್ ವಿರುದ್ಧ ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡರು. ಪ್ರಮುಖ ಪ್ರತಿಪಕ್ಷವಾದ ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಉಪಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ಈ ವರ್ಷದ ಮಾರ್ಚ್‌ನಲ್ಲಿ ವೈಎಸ್‌ಆರ್‌ಸಿ ಶಾಸಕ ಡಾ ಜಿ ವೆಂಕಟಸುಬ್ಬಯ್ಯ ಅವರ ನಿಧನದಿಂದ ತೆರವಾಗಿದ್ದ ಬದ್ವೇಲ್ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು, ವೆಂಕಟಸುಬ್ಬಯ್ಯ ಅವರ ಪತ್ನಿ ಡಾ.ಸುಧಾ ಅವರು ಉಪಚುನಾವಣೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರು. ಬಿಜೆಪಿ ಯುವ ಮುಖಂಡ ಪಿ.ಸುರೇಶ್ ಅವರನ್ನು ಕಣಕ್ಕಿಳಿಸಿತ್ತು. (ಕ.ಪ್ರ.ಡಾ.)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *