ಉತ್ತರ ಕನ್ನಡದಲ್ಲಿ 30,000 ಸಸ್ಯಗಳನ್ನು ನೆಟ್ಟಿರುವ ತುಳಸಿ ಗೌಡ

ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ,  ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು. 

Tulasi Gowda receiving Padmashri Award from President of India Ram Nath Kovind in New Delhi on Monday

ಹುಬ್ಬಳ್ಳಿ: ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ,  ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು. 

“ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದೆ. ಮರ ಕಡಿಯುವುದನ್ನು ನಿಷೇಧಿಸುವಂತೆ ಮನವಿ ಮಾಡಿದೆ ಎಂದಿದ್ದಾರೆ ಮಾಧ್ಯಮಗಳೊಂದಿಗೆ ಮಾತನಾಡಿರುವ ತುಳಸಿ ಗೌಡ. 

ಗಿಡಗಳನ್ನು ನೆಡುವುದು ಶ್ರೇಷ್ಠ ಕೆಲಸ ಹಾಗೂ ನಾವು ಅದನ್ನು ಮುಂದುವರೆಸಬೇಕು, ನನ್ನ ಆರೋಗ್ಯ ಬೆಂಬಲಿಸದೇ ಇದ್ದರೂ ನಾನು ಇನ್ನೂ ಹೆಚ್ಚು ಮರಗಳನ್ನು ನೆಡಲು ಇಚ್ಛಿಸುತ್ತೇನೆ ಎನ್ನುತ್ತಾರೆ ತುಳಸಿ ಗೌಡ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ 30,000 ಮರಗಳನ್ನು ತುಳಸಿ ಗೌಡ ನೆಟ್ಟಿರುವ ಸಾಧನೆ ಮಾಡಿದ್ದಾರೆ. ಅರಣ್ಯದ ನರ್ಸರಿಯಲ್ಲಿ ದೈನದಿಂದ ವೇತನಕ್ಕಾಗಿ ಉದ್ಯೋಗಕ್ಕೆ ಸೇರಿದ ತುಳಸಿ ಗೌಡ ಗಿಡಗಳನ್ನು ಬೆಳೆಸುವುದರೆಡೆಗೆ ತಮಗಿದ್ದ ಆಸಕ್ತಿ, ಪ್ರೀತಿಯ ಪರಿಣಾಮ ಖಾಯಂ ಉದ್ಯೋಗಿಯಾದರು.  

ಪಶ್ಚಿಮ ಘಟ್ಟಗಳ ಸ್ಥಳೀಯ ಸಸ್ಯ ಪ್ರಭೇದಗಳನ್ನು ಪತ್ತೆ ಮಾಡುವುದಕ್ಕೆ ಅರಣ್ಯ ಇಲಾಖೆಗೆ ತುಳಸಿ ಗೌಡ ಸಹಾಯ ಮಾಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ಬೆಳೆಯುವುದಕ್ಕೆ ರೈತರು ಹಾಗೂ ಜನತೆಗೆ ತುಳಸಿ ಗೌಡ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದಾರೆ. 

ಅರಣ್ಯ ಇಲಾಖೆ ವರ್ಷದ ನಿರ್ದಿಷ್ಟ ಕಾಲದಲ್ಲಿ ನರ್ಸರಿಗಳನ್ನು ಮುಚ್ಚಿ ನೌಕರರಿಗೆ ಕೆಲಸ ಇಲ್ಲದೇ ಇದ್ದಾಗಲೂ ನರ್ಸರಿಯಲ್ಲಿ ತುಳಸಿ ಗೌಡ ಮಾತ್ರ ಸಕ್ರಿಯರಾಗಿರುತ್ತಿದ್ದರು. ಅವರ ಈ ಬದ್ಧತೆಯನ್ನು ಗಮನಿಸಿದ ಅರಣ್ಯ ಇಲಾಖೆ ಆಕೆಯನ್ನು ಖಾಯಂ ಉದ್ಯೋಗಿಯನ್ನಾಗಿ ನೇಮಕ ಮಾಡಿತು. ನಿವೃತ್ತಿಯವರೆಗೂ ಕಾರ್ಯನಿರ್ವಹಣೆ ಮಾಡಿದ ತುಳಸಿ ಗೌಡ, ಇಂದಿಗೂ ತಮ್ಮ ಕಾಯಕವನ್ನು ಮುಂದುವರೆಸಿದ್ದು, ಸ್ಥಳೀಯ ಸಸ್ಯ ಜಾತಿಗಳ ಬಗ್ಗೆ ಜ್ಞಾನವನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ತುಳಸಿ ಗೌಡ ಅವರ ಮೊಮ್ಮಗ ಶೇಖರ್ ಗೌಡ ತಿಳಿಸಿದ್ದಾರೆ. 

ಅರಣ್ಯ ಇಲಾಖೆ ವಜ್ಯಜೀವಿಗಳಿಗೆ ಹಣ್ಣುಗಳನ್ನು ನೀಡುವಷ್ಟು ಸ್ಥಳೀಯ ಗಿಡಗಳು ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ತುಳಸಿ ಗೌಡ ಮನವಿ ಮಾಡಿದ್ದು, ಅಕೇಷಿಯಾ ಸೇರಿದಂತೆ ವಿಲಕ್ಷಣ ಮರಗಳನ್ನು ಬೆಳೆಯುವುದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. 

ಹಾಲಕ್ಕಿ ಸಮುದಾಯಕ್ಕೆ ಇದು ಎರಡನೇ ಪದ್ಮ ಪ್ರಶಸ್ತಿಯಾಗಿದ್ದು, ಹಾಡುಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಸುಕ್ರಿ ಬೊಮ್ಮಗೌಡ ಅವರನ್ನು ಈ ಹಿಂದೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.  (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *