ಬನವಾಸಿ ವ್ಯಾಪಾರಿಯ ಚಿನ್ನದ ಚೀಲವನ್ನು ವಾರಸುದಾರರಿಗೆ ಕೊಟ್ಟು ಪ್ರಾಮಾಣಿಕತೆ ಮೆರೆದ ಸಿದ್ದಾಪುರದ ತರಕಾರಿ ವ್ಯಾಪಾರಿ!

ಸಿದ್ಧಾಪುರ, ನಗರದಲ್ಲಿ ಕಳೆದುಹೋಗಿದ್ದ ಎರಡು ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ಚೀಲವೊಂದನ್ನು ಪೊಲೀಸರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಇಲ್ಲಿಯ ತರಕಾರಿ ವ್ಯಾಪಾರಿಗೆ ಸಾರ್ವಜನಿಕ ಪ್ರಶಂಸೆ ದೊರೆತಿದೆ.

ಬನವಾಸಿ ಮೂಲದ ವ್ಯಾಪಾರಿ ವಿದ್ಯಾಧರ್‌ ಕೊಚೇರಿ ಈಗ ಇಲ್ಲಿಯ ಹಾಳದಕಟ್ಟಾ ನಿವಾಸಿಯಾಗಿದ್ದು ಸಿದ್ಧಾಪುರ ಸಂತೆ ಮಾರುಕಟ್ಟೆಯಲ್ಲಿ ತಮ್ಮ ಆಭರಣಗಳ ಚೀಲ ಕಳೆದುಕೊಂಡಿದ್ದರು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಹುಡುಕುತಿದ್ದಾಗ ಇಲ್ಲಿಯ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಮಾರುವ ಅವರಗುಪ್ಪಾದ ಗಣಪತಿ ಬಾಳಾ ನಾಯ್ಕ ತಮಗೆ ದೊರೆತ ಈ ಆಭರಣಗಳ ಚೀಲವನ್ನು ಪೊಲೀಸರಿಗೆ ನೀಡಿ ಸನ್ಮತಿ ವಿದ್ಯಾಧರ್‌ ಕೊಚೇರಿಯವರಿಗೆ ಹಸ್ತಾಂತರಿಸಿದರು.

ತರಕಾರಿ ವ್ಯಾಪಾರಿಯ ಪ್ರಾಮಾಣಿಕತೆಗೆ ಪೊಲೀಸರು ಮತ್ತು ಸಾರ್ವಜನಿಕರು ಪ್ರಶಂಸಿಸಿದ್ದಾರೆ.

ಕಾಂಗ್ರೆಸ್‌ ನಲ್ಲಿ ಗುರುತಿಸಿಕೊಂಡಿದ್ದ ಸಿದ್ಧಾಪುರ ತ್ಯಾರಸಿಯ ಕೃಷಿಕ ಮಂಜುನಾಥ ನಾಯ್ಕ ಸದ್ಯ ನರಸಂಬಂಧಿ ಭೀಕರ ಕಾಯಿಲೆಯಿಂದ ಬಳಲುತಿದ್ದು ಅವರನ್ನು ಮಂಗಳೂರು ಆಸ್ಫತ್ರೆಗೆ ದಾಖಲಿಸಲಾಗಿದೆ. ಇವರ ಚಿಕಿತ್ಸೆಗೆ ಹತ್ತು ಲಕ್ಷರೂಪಾಯಿಗಳಿಗೂ ಅಧಿಕ ಹಣದ ಅವಶ್ಯಕತೆ ಇದ್ದು ದಾನಿಗಳು, ಇವರ ಹಿತೈಶಿಗಳು ಇವರ ಕುಟುಂಬಸ್ಥರಿಗೆ ಅಗತ್ಯವಿರುವ ಹಣಕಾಸಿನ ನೆರವು ನೀಡಲು ಕೋರಲಾಗಿದೆ. ಸಹಾಯಮಾಡಲಿಚ್ಛಿ ಸುವವರು ಮಂಜುನಾಥ ನಾಯ್ಕರ ಪತ್ನಿ ಅಥವಾ ಅವರ ರಕ್ತಸಂಬಂಧಿಗಳ ಮೂಲಕ ಹಣಕಾಸಿನ ನೆರವು ಒದಗಿಸಬಹುದು.

ಕೃಷಿ ಕಾನೂನುಗಳ ವರದಿಯನ್ನು ನ್ಯಾಯಾಲಯ ಬಿಡುಗಡೆ ಮಾಡದಿದ್ದರೆ ನಾವೇ ಬಿಡುಗಡೆ ಮಾಡುತ್ತೇವೆ: ಸುಪ್ರೀಂ ಕೋರ್ಟ್ ಸಮಿತಿ ಸದಸ್ಯ!

ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸುತ್ತಿದ್ದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ತಂಡದ ಸದಸ್ಯರೊಬ್ಬರು ವರದಿಯನ್ನು ಸಾರ್ವಜನಿಕರ ಮುಂದೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

Shetkari Sanghatana President said the panel's report was in 'favour of farmers' and will decide next week on releasing the report

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸುತ್ತಿದ್ದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ತಂಡದ ಸದಸ್ಯರೊಬ್ಬರು ವರದಿಯನ್ನು ಸಾರ್ವಜನಿಕರ ಮುಂದೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿ ಈಗಾಗಲೇ ಕಾಯ್ದೆಗೆ ಸಂಬಂಧಿಸಿದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.ಇದೀಗ ಕೇಂದ್ರ ಸರ್ಕಾರವೇ ಕಾಯ್ದೆಯನ್ನು ಹಿಂಪಡೆಯುವುದರಿಂದ ಈ ವರದಿಯ ಉದ್ದೇಶವೇನೂ ಇಲ್ಲದಾಗಿದೆ, ಸುಪ್ರೀಂ ಕೋರ್ಟ್ ವರದಿ ಬಿಡುಗಡೆ ಮಾಡದಿದ್ದರೆ ನಾವೇ ಸಾರ್ವಜನಿಕರ ಮುಂದಿಡುತ್ತೇವೆ ಎಂದಿದ್ದಾರೆ.

ಸಮಿತಿಯ ವರದಿ ರೈತರ ಪರವಾಗಿದ್ದಿತ್ತು. ಮುಂದಿನ ವಾರ ವರದಿಯನ್ನು ಬಿಡುಗಡೆ ಮಾಡುವುದಾಗಿ ಶೆಟ್ಕರಿ ಸಂಘಟನೆ ಅಧ್ಯಕ್ಷ ಅನಿಲ್ ಜೆ ಘನ್ವಾಟ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ಸಾಧಕ-ಬಾಧಕಗಳ ಬಗ್ಗೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿ ಅಧ್ಯಯನ ಮಾಡಿ ಮೂವರು ಸದಸ್ಯರನ್ನೊಳಗೊಂಡ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಮಿತಿ ಕಳೆದ ಮಾರ್ಚ್ 19ರಂದು ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿತ್ತು.

ಸಮಿತಿಯ ವರದಿಯನ್ನು ಬಿಡುಗಡೆ ಮಾಡಿದರೆ ರೈತರಿಗೆ ಮನದಟ್ಟಾಗುತ್ತದೆ, ಸರ್ಕಾರ ವಿರುದ್ಧ ಮಾಡುತ್ತಿರುವ ಪ್ರತಿಭಟನೆ ನಿಲ್ಲುತ್ತದೆ ಎಂದು ಘನವಟ್ ಕಳೆದ ಸೆಪ್ಟೆಂಬರ್ 1 ರಂದು ಭಾರತದ ಮುಖ್ಯ ನ್ಯಾಯಾಧೀಶರಿಗೆ ಪತ್ರದ ಮೂಲಕ ವಿನಂತಿ ಮಾಡಿಕೊಂಡಿದ್ದರು. ಆದರೆ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ಈ ಬಗ್ಗೆ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಘನವಟ್, ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದರೆ ನಾವು ಸಲ್ಲಿಸಿರುವ ವರದಿಗೆ ಯಾವುದೇ ಅರ್ಥವಿಲ್ಲ. ಸುಪ್ರೀಂ ಕೋರ್ಟ್ ಜನರಿಗೆ ನಮ್ಮ ವರದಿಯನ್ನು ಬಿಡುಗಡೆ ಮಾಡದಿದ್ದರೆ ನಾನು ಬಹಿರಂಗಪಡಿಸುತ್ತೇನೆ ಎಂದಿರುವ ಅವರು ವರದಿ ತಯಾರಿಸಲು ಮೂರು ತಿಂಗಳು ತೆಗೆದುಕೊಂಡಿದ್ದೆವು ಎನ್ನುತ್ತಾರೆ. 

ರೈತರ ಹಿತದೃಷ್ಟಿಯಿಂದ ಸಮಿತಿಗಳ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಮುಂದಾಗುತ್ತೇನೆ. ಸಮಿತಿ ಮಾಡಿರುವ ಶಿಫಾರಸ್ಸುಗಳನ್ನು ರೈತರು, ಪತ್ರಿಕೆಗಳು ಮತ್ತು ಸರಕಾರ ಅರಿಯಬೇಕು,’’ ಎಂದು ಹೇಳಿದ ಅವರು, ವರದಿಯು ರೈತರ ಪರವಾಗಿದೆ. ಕೃಷಿಗೆ ಸಂಬಂಧಿಸಿದ ಭವಿಷ್ಯದ ಕಾನೂನುಗಳನ್ನು ರೂಪಿಸಲು ವರದಿಯು ಉತ್ತಮ ಉಲ್ಲೇಖವಾಗಲಿದೆ ಎಂದು ಹೇಳಿದ್ದಾರೆ.  (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *