ಸೇನಾ ಹೆಲಿಕಾಪ್ಟರ್ ಪತನ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಸೇರಿ 13 ಮಂದಿ ಸಾವು

ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು,…

Bipin rawat

ಕೊಯಮತ್ತೂರು: ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು, ಘಟನೆಯಲ್ಲಿ ಬಿಪಿನ್ ರಾವತ್ ಹಾಗೂ ಅವರ ಮಧುಲಿಕಾ ರಾವತ್ ಅವರು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಇತರ 11 ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಿಪಿನ್ ರಾವತ್ ಅವರನ್ನು ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸೇನಾ ಹೆಲಿಕಾಪ್ಟರ್ ನಲ್ಲಿ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು(ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು.

ತನಿಖೆಗೆ ಆದೇಶ: ತಮಿಳು ನಾಡಿನ ಕೂನೂರು ಬಳಿ ಎಂಐ-17ವಿ5 ಹೆಲಿಕಾಪ್ಟರ್( Mi-17V5 helicopter) ಪತನಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……

ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ....

ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……‌

ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್‌ ಎಂಬ ಹಳ್ಳಿಯ ಒಕ್ಕಲಿಗ...

ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ

ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...

ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...

ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *