ಉತ್ತರ ಕನ್ನಡ ಬಿ.ಜೆ.ಪಿ.ಗೆ ಗೆಲುವು ಭೀಮಣ್ಣರಿಗೆ ಸೋಲು

ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಕೊಡಗಿನಲ್ಲಿ ಬಿಜೆಪಿಗೆ, ಹಾಸನಲ್ಲಿ ಸೂರಜ್ ರೇವಣ್ಣಗೆ, ಬೀದರ್ ನಲ್ಲಿ ಕಾಂಗ್ರೆಸ್ ಗೆ ಗೆಲುವು

ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಕೊಡಗು ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 105 ಮತಗಳ ಮುನ್ನೆಡೆಯಿಂದ ಗೆಲುವು ಸಾಧಿಸಿದ್ದಾರೆ. 

Suja Kushalappa wins in Kodagu

ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನಪರಿಷತ್‌ ಗೆ ನಡೆದ ಚುನಾವಣೆಯಲ್ಲಿ ಬಿ.ಜೆ.ಪಿ. ಯ ಗಣಪತಿ ಉಳ್ವೇಕರ್‌ ಜಯ ಗಳಿಸಿದ್ದಾರೆ. ಸಮೀಪದ ಪ್ರತಿಸ್ಫರ್ಧಿ ಕಾಂಗ್ರೆಸ್‌ ನ ಭೀಮಣ್ಣ ನಾಯ್ಕರಿಗಿಂತ 180 ಹೆಚ್ಚು ಮತಗಳನ್ನು ಪಡೆದಿರುವ ಗಣಪತಿ ಉಳ್ವೇಕರ್‌ ಮೊದಲ ಬಾರಿ ವಿಧಾನಪರಿಷತ್‌ ಪ್ರವೇಶಿಸಿದ್ದಾರೆ.

ಬಿ.ಜೆ.ಪಿ.ಯ ಒಳಜಗಳ, ಕಾಂಗ್ರೆಸ್‌ ನ ನಾಯಕರ ಪ್ರತಿಷ್ಠೆಯ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ ತಂತ್ರ ಜಯಗಳಿಸಿದೆ.

ಮಾಜಿ ಶಾಸಕ ಮಧು ಬಂಗಾರಪ್ಪ, ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಪ್ರಯತ್ನದ ನಡುವೆ ಮಾಜಿ ಸಚಿವ ಆರ್.‌ ವಿ. ದೇಶಪಾಂಡೆ ಬಣ ಸ್ಥಳಿಯ ಸಂಸ್ಥೆಗಳ ಸದಸ್ಯರ ಮತ ಸೆಳೆಯುವಲ್ಲಿ ವಿಫಲರಾಗಿದ್ದಾರೆ. ಕಾರವಾರ ನಗರಸಭೆ ಸದಸ್ಯರಾಗಿ, ಮಾಜಿ ಶಾಸಕ ದಿ. ವಸಂತ ಅಸ್ನೋಟಿಕರ್‌ ಬೆಂಬಲಿಗರಾಗಿ ರಾಜಕೀಯ ಜೀವನ ಪ್ರಾರಂಭಿಸಿದ್ದ ಗಣಪತಿ ಉಳ್ವೇಕರ್‌ ಅನೇಕ ಸ್ಫರ್ಧಿಗಳ ನಡುವೆ ಬಿ.ಜೆ.ಪಿ. ಟಿಕೇಟ್‌ ಪಡೆದು ಜಯ ಗಳಿಸಿರುವುದು ವಿಶೇಶವಾಗಿದೆ.

ಕೊಡಗು/ಹಾಸನ: ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಕೊಡಗು ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 105 ಮತಗಳ ಮುನ್ನೆಡೆಯಿಂದ ಗೆಲುವು ಸಾಧಿಸಿದ್ದಾರೆ

ಕೊಡಗು ಕ್ಷೇತ್ರದಲ್ಲಿ 1299 ಮತಗಳು ಚಲಾವಣೆಯಾಗಿದ್ದವು. ಕಾಂಗ್ರೆಸ್ ಅಭ್ಯರ್ಥಿ ಮಂತರ್ ಗೌಡ ವಿರುದ್ಧ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಸ್ಪರ್ಧಿಸಿದ್ದರು. ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಮೊದಲ ಪ್ರಾಶಸ್ತ್ಯದಲ್ಲಿಯೇ ಗೆದ್ದಿದ್ದಾರೆ. ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿ ಜೆಡಿಎಸ್ ನಿಂದ ಸ್ಪರ್ಧಿಸಿ ಡಾ ಸೂರಜ್ ರೇವಣ್ಣ ಗೆಲುವು ಕಂಡಿದ್ದು ದೇವೇಗೌಡರ ಕುಟುಂಬದಿಂದ ಮತ್ತೊಬ್ಬರು ರಾಜಕೀಯ ಪ್ರವೇಶಿಸಿದ್ದಾರೆ. ಡಾ ಸೂರಜ್ ರೇವಣ್ಣ ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿದ್ದು ಈ ಮೂಲಕ ವಿಧಾನಸೌಧಕ್ಕೆ ಕಾಲಿಡುತ್ತಿದ್ದು, ದೇವೇಗೌಡರ ಕುಟುಂಬದ ಕುಡಿ ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸುತ್ತಿದ್ದಾರೆ. 

ಕಲಬುರಗಿಯ ಸ್ಥಳೀಯ ಸಂಸ್ಥೆಗಳ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗಾಗಿ ಮತಪೆಟ್ಟಿಗೆಗಳನ್ನು ಎಣಿಕೆ ಸಭಾಂಗಣಕ್ಕೆ ತರುತ್ತಿರುವುದನ್ನು ನೋಡಬಹುದು. ರಾಜ್ಯದ ಬಳ್ಳಾರಿ, ಕೋಲಾರ, ಹುಬ್ಬಳ್ಳಿ-ಧಾರವಾಡ, ಚಿತ್ರದುರ್ಗ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ಮುಂದುವರಿದಿದೆ. 

ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಬಿ ಪಾಟೀಲ್ ಗೆಲುವು ಸಾಧಿಸಿದ್ದು ಈ ಮೂಲಕ ಇದುವರೆಗೆ ಮೂರೂ ಪಕ್ಷಗಳಿಗೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು ಸಿಕ್ಕಿದಂತಾಗಿದೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *