ಮಕ್ಕಳಿಗೆ ಕೋವಿಡ್ ಲಸಿಕೆ: ಉತ್ತರ ಕನ್ನಡ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಕೇಂದ್ರ ಸರ್ಕಾರ ಜ.3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಹಾಗೂ ಆದ್ಯತಾ ವಲಯದವರಿಗೆ ಬೂಸ್ಟರ್ ಡೋಸ್ ನೀಡಲು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ವಿತರಣೆಗಾಗಿ ಉತ್ತರ ಕನ್ನಡ ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಏಕಾಏಕಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಅದರಲ್ಲಿಯೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ವಸತಿ ಶಾಲೆಗಳು ಕೊರೊನಾ ಕ್ಲಸ್ಟರ್‌ಗಳಾಗುವ ಆತಂಕ ಎದುರಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

ಜಿಲ್ಲೆಯಲ್ಲಿ ಶೇ.0.28ಕ್ಕೆ ತಲುಪಿದ್ದ ಕೋವಿಡ್​​ ಪಾಸಿಟಿವಿಟಿ ದರ ಕಳೆದ ಒಂದು ವಾರದಲ್ಲೇ ಏರಿಕೆಯಾಗಿ 0.75ಕ್ಕೆ ತಲುಪಿದೆ. ಸದ್ಯ 121 ಸಕ್ರಿಯ ಪ್ರಕರಣಗಳಿದ್ದು, ನಿತ್ಯ 20ಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ.

ಜಿಲ್ಲೆಯ ಸಿದ್ದಾಪುರದ ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಬಳಿಕ, ಜೊಯಿಡಾ ತಾಲೂಕಿನ ರಾಮನಗರದ ರಾಣಿ ಚೆನ್ನಮ್ಮ ವಸತಿ ಶಾಲೆಯ 60 ವಿದ್ಯಾರ್ಥಿನಿಯರ ಪೈಕಿ 19 ವಿದ್ಯಾರ್ಥಿನಿಯರಲ್ಲಿ ಸೋಂಕು ಪತ್ತೆಯಾಗಿತ್ತು. ಈಗ 30 ವಿದ್ಯಾರ್ಥಿಗಳಿಗೆ ವ್ಯಾಪಿಸಿದೆ. ಈ ನಿಟ್ಟಿನಲ್ಲಿ ವಸತಿ ಶಾಲೆಯನ್ನ ಕೊರೊನಾ ಕ್ಲಸ್ಟರ್ ಎಂದು ಘೋಷಣೆ ಮಾಡಿದ್ದು, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.

ಇನ್ನುಳಿದಂತೆ ಶಾಲೆ, ಕಾಲೇಜು ಹಾಗೂ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಮುಂಜಾಗ್ರತೆ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಈಗಾಗಲೇ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಕೊರೊನಾ ಮುಂಜಾಗ್ರತಾ ಕ್ರಮ ಪಾಲಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಕೇಂದ್ರ ಸರ್ಕಾರ ಜ.3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಹಾಗೂ ಆದ್ಯತಾ ವಲಯದವರಿಗೆ ಬೂಸ್ಟರ್ ಡೋಸ್ ನೀಡಲು ಘೋಷಿಸಿದೆ. ಈ ಹಿನ್ನೆಲೆ ಲಸಿಕೆ ವಿತರಣೆಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಜಿಲ್ಲೆಯಲ್ಲಿ 15 ರಿಂದ 18 ವರ್ಷದ 70 ಸಾವಿರದಿಂದ 75 ಸಾವಿರ ಮಕ್ಕಳಿದ್ದಾರೆ ಎಂದು ಅಂದಾಜಿಸಲಾಗಿದೆ.

ಸಿದ್ದಾಪುರ: ಕ್ರೀಡೆಯಿಂದ ಮಾನಸಿಕ ನೆಮ್ಮದಿಯ ಜೊತೆಗೆ ಆರೋಗ್ಯಕರ ಜೀವನಕ್ಕೆ ಸಹಕಾರಿಯಾಗಲಿದೆ. ಯುವಕರು ಮೊಬೈಲ್ ನಿಂದ ದೂರ ಬರಬೇಕಾದರೆ ಕ್ರೀಡೆ, ಸಾಂಸ್ಕೃತಿಕ ಮುಂತಾದ ಚಟುವಟಿಕೆ ಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬೇಡ್ಕಣಿ ಗ್ರಾಮ ಪಂಚಾಯತಿ ಸದಸ್ಯ ಕೃಷ್ಣ ಮೂರ್ತಿ ಮಡಿವಾಳ ಕಡಕೇರಿ ಹೇಳಿದರು. ಅವರು ಕಡಕೇರಿ ಗಾಂಧಿ ಮೈದಾನ ಹಾಗೂ ಸುಭಾಷ್ ಚಂದ್ರ ಬೋಸ್ ಮೈದಾನ ದಲ್ಲಿ ಪ್ರೇಂಡ್ಸ ಕ್ರಿಕೆಟರ್ಸ್ ಕಡಕೆರಿ ಹಾಗೂ ನಾಗರಿಕರ ಸಂಯೋಜನೆಯಲ್ಲಿ ಆಯೋಜನೆಗೊಂಡಿದ್ದ ಟೆನಿಸ್ ಹಾರ್ಡ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಉದ್ಘಾಟಿಸಿ ಮಾತನಾಡಿದರು.
ಸಂಘಟನೆ ಸುಲಭವಾಗಿರುವುದಿಲ್ಲ ಎಲ್ಲರೂ ಒಗ್ಗಟ್ಟಾಗಿ ಕೆಲಸಗಳನ್ನು ಮಾಡಿದಾಗ ಮಾತ್ರ ಕಾರ್ಯಗಳು ಯಶಸ್ವಿಯಾಗಿ ಕೈಗೂಡುತ್ತದೆ. ಹಾಗೆ ಕಡಕೇರಿ ಹಿರಿಯರು ಕ್ರೀಡಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಊರಿನ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ . ಇಂದಿನ ಯುವಕರು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಿರುವುದು ಉತ್ತಮವಾದ ಬೆಳವಣಿಗೆ. ಸಂಘಟನೆ ಕೇವಲ ಕ್ರೀಡೆಗೆ ಮಾತ್ರ ಸೀಮಿತವಾಗಿರಬಾರದು ಊರಿನ ಅಭಿವೃದ್ಧಿ ಕಾರ್ಯಗಳಿಗೆ ಯುವಕರು ತಮ್ಮನ್ನು ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ಬಂದ ಹಣದಲ್ಲಿ ಉಳಿಕೆಯ ಹಣವನ್ನು ಪ್ರಗತಿಪರ ಚಟುವಟಿಕೆಗಳಿಗೆ ಉಪಯೋಗ ಮಾಡಬೇಕು ಎಂದು ಹೇಳಿದರು.
ಆನಂದ ನಾಯ್ಕ, ಮಾರುತಿ ಮಡಿವಾಳ ದಯಾನಂದ ಜಿ ನಾಯ್ಕ, ಗಣಪತಿ ನಾಯ್ಕ, ಶಿವಕುಮಾರ ನಾಯ್ಕ ವೇದಿಕೆ ಯಲ್ಲಿದ್ದರು.
ಸುರೇಶ ಮಡಿವಾಳ ಸ್ವಾಗತಿಸಿ, ವಂದಿಸಿದರು.
ಕ್ರಿಕೆಟ್ ಪಂದ್ಯಾವಳಿಯಲ್ಲಿ 26 ತಂಡಗಳು ಭಾಗವಹಿಸಿ ಭಾಗವಹಿಸಿದ್ದವು. ಹರಕನಹಳ್ಳಿ ತಂಡವು ಪ್ರಥಮ ಬಹುಮಾನವನ್ನು ಹಾಗೂ ಹಾಳದಕಟ್ಟಾ ತಂಡವು ದ್ವಿತೀಯ ಬಹುಮಾನವನ್ನು ಪಡೆದುಕೊಂಡವು.

ಆದ್ಯತಾ ವಲಯದಲ್ಲಿರುವ 77,302 ಮಂದಿಗೆ ಲಸಿಕೆ ನೀಡಲಾಗುತ್ತದೆ. ಇವರಲ್ಲಿ 15,284 ಆರೋಗ್ಯ ಕಾರ್ಯಕರ್ತರು, 10,997 ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲಿನ, ವಿವಿಧ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 51,021 ಮಂದಿ ಸೇರಿದ್ದಾರೆ.‌

ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ, 60 ವರ್ಷಕ್ಕಿಂತ ಮೇಲಿನವರಿಗೆ ಜ.10 ರಿಂದ ಬೂಸ್ಟರ್ ಡೋಸ್ ಕೊಡಲಾಗುವುದು. ಅದೇ ರೀತಿ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಮುಂಚೂಣಿ ಕಾರ್ಯಕರ್ತರಿಗೂ ಲಸಿಕೆ ನೀಡಲಾಗುತ್ತದೆ ಎಂದು ಆರ್​​ಸಿಹೆಚ್​​ಒ ಡಾ.ರಮೇಶ ರಾವ್ ತಿಳಿಸಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *