ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ (ಚಂಪಾ) ಅಸ್ತಂಗತ

ಕಳಚಿದ ಸಾಹಿತ್ಯ ಲೋಕದ ಕೊಂಡಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ (ಚಂಪಾ) ಅಸ್ತಂಗತ

ಚಂಪಾ ಎಂದೇ ಪ್ರಖ್ಯಾತರಾಗಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

Chandrashekhar Patil

ಬೆಂಗಳೂರು: ಚಂಪಾ ಎಂದೇ ಪ್ರಖ್ಯಾತರಾಗಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ಕೋಣನಕುಂಟೆ ಆಸ್ಟ್ರಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿವಾಸ ಎಲಚೇನಹಳ್ಳಿ ಮೆಟ್ರೋ ಸ್ಟೇಷನ್ ಪಕ್ಕದಲ್ಲೇ ಇರುವ ಜ್ಯೋತಿ ಶಾಲೆಯ ಬಳಿಯಿದೆ. ಕೆಲಹೊತ್ತಿನಲ್ಲೇ ಅಲ್ಲಿಗೆ ಪಾರ್ಥಿವ ಶರೀರವನ್ನು ತರಲಾಗುತ್ತದೆ ಎಂದು ಅಪ್ತ ವಲಯ ತಿಳಿಸಿದೆ

https://imasdk.googleapis.com/js/core/bridge3.494.0_en.html#goog_295735001

ಧಾರವಾಡದವರಾದ ಚಂಪಾ ಅವರು ಕೆಲವಾರು ವರ್ಷಗಳಿಂದ ಬೆಂಗಳೂರು ನಿವಾಸಿಯಾಗಿದ್ದರು. ಮೂಲತಃ ಇಂಗ್ಲಿಷ್ ಪ್ರಾಧ್ಯಾಪಕರು. ಕನ್ನಡ ವಿಮರ್ಶಾ ಕ್ಷೇತ್ರ, ನಾಟಕ ರಚನೆಯಲ್ಲಿ ಪ್ರಸಿದ್ಧರು. ಅವರು ರಚಿಸಿದ ನಾಟಕಗಳು ನಾಡಿನಲ್ಲಿ – ಹೊರನಾಡು – ವಿದೇಶಗಳಲ್ಲಿಯೂ ಪ್ರದರ್ಶಿತವಾಗಿವೆ. ಅವರ ವಿಮರ್ಶೆಯೆಂದರೆ ಬಹು ಹರಿತ ಎಂದೇ ಖ್ಯಾತವಾಗಿತ್ತು.

gn mohan with champa

ಸುದೀರ್ಘ ಅವಧಿ ಅವರು “ಸಂಕ್ರಮಣ” ಹೆಸರಿನ ಸಾಹಿತ್ಯ ಪತ್ರಿಕೆಯ ಸಂಪಾದಕರು- ಪ್ರಕಾಶಕರೂ ಆಗಿದ್ದರು. ಕನ್ನಡದ ಹಲವು ಸಾಹಿತಿಗಳನ್ನು ಗುರುತಿಸಿದ ಹೆಗ್ಗಳಿಕೆಯನ್ನು ಈ ಪತ್ರಿಕೆ ಹೊಂದಿದೆ. ಇವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮೌಲಿಕ ಕೆಲಸಗಳನ್ನು ಮಾಡಿರುವ ಹೆಗ್ಗಳಿಕೆಯನ್ನೂ ಹೊಂದಿದ್ದಾರೆ.

ಗೋಕಾಕ್ ಚಳವಳಿಯಲ್ಲಿಯೂ ಮುಂಚೂಣಿಯಲ್ಲಿ ಕೆಲಸ ಮಾಡಿದ್ದ ಚಂಪಾ ಅವರು ಕನ್ನಡಕ್ಕೆ ಎಲ್ಲಿಯೇ ಅನ್ಯಾಯವಾದರೂ ಧ್ವನಿ ಎತ್ತುತ್ತಿದ್ದರು. ನಾಡು – ನುಡಿಯನ್ನು ಅಪಾರವಾಗಿ ಪ್ರೀತಿಸುತ್ತಿದ್ದ ಇವರ ಭೌತಿಕ ಅಗಲಿಕೆಗೆ ಗಣ್ಯರನೇಕರು ಕಂಬನಿ ಮಿಡಿದಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *