ನಮ್ಮಮ್ಮ ಸೂಪರ್ಸ್ಟಾರ್‌ ಸಮನ್ವಿ ಇನ್ನಿಲ್ಲ..

ರಸ್ತೆ ಅಪಘಾತದಲ್ಲಿ ಬಾಲಕಿ ಸಮನ್ವಿ ಸಾವು: ರಿಯಾಲಿಟಿ ಶೋ ತೀರ್ಪುಗಾರರಾದ ತಾರಾ ಅನುರಾಧ, ಸೃಜನ್ ಲೋಕೇಶ್ ಕಂಬನಿ

ನಗರದ ಕೋಣನಕುಂಟೆ ಬಳಿ ಟಿಪ್ಪರ್ ಡಿಕ್ಕಿ ಹೊಡೆದು ಮೃತಪಟ್ಟ ಕನ್ನಡ ಮನರಂಜನಾ ವಾಹಿನಿಯ ರಿಯಾಲಿಟಿ ಶೋದ ಸ್ಪರ್ಧಿಯಾಗಿದ್ದ ಆರು ವರ್ಷದ ಬಾಲಕಿ ಸಮನ್ವಿಯ ಸಾವು ಎಲ್ಲರನ್ನೂ ಶೋಕಸಾಗರದಲ್ಲಿ ಮುಳುಗಿಸಿದೆ. 

Samanvi with Amrutha Naidu

ಬೆಂಗಳೂರು: ನಗರದ ಕೋಣನಕುಂಟೆ ಬಳಿ ಟಿಪ್ಪರ್ ಡಿಕ್ಕಿ ಹೊಡೆದು ಮೃತಪಟ್ಟ ಕನ್ನಡ ಮನರಂಜನಾ ವಾಹಿನಿಯ ರಿಯಾಲಿಟಿ ಶೋದ ಸ್ಪರ್ಧಿಯಾಗಿದ್ದ ಆರು ವರ್ಷದ ಬಾಲಕಿ ಸಮನ್ವಿಯ ಸಾವು ಎಲ್ಲರನ್ನೂ ಶೋಕಸಾಗರದಲ್ಲಿ ಮುಳುಗಿಸಿದೆ. 

ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನ ಸ್ಪರ್ಧಿಯಾಗಿದ್ದ ಹರಿಕಥಾ ಕಲಾವಿದ ಗುರುರಾಜ್ ನಾಯ್ಡು ಮಗಳು ಅಮೃತಾ ನಾಯ್ಡು ಮತ್ತು ಮೊಮ್ಮಗಳು ಸಮನ್ವಿ ನಿನ್ನೆ ಸಾಯಂಕಾಲ ಶಾಪಿಂಗ್ ಮುಗಿಸಿ ಸ್ಕೂಟರ್ ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಸಮನ್ವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ತಾಯಿ ಅಮೃತಾ ನಾಯ್ಡು ಸಣ್ಣಪುಟ್ಟ ಗಾಯಗೊಂಡು ಚಿಕಿತ್ಸೆ ಪಡೆದು ಇಂದು ಮನೆಗೆ ವಾಪಸ್ಸಾಗಿದ್ದಾರೆ.

ಘಟನೆಯ ಸುದ್ದಿ ಕೇಳಿದ ಹಿರಿಯ ನಟಿ ರಿಯಾಲಿಟಿ ಶೋ ತೀರ್ಪುಗಾರ್ತಿ ತಾರಾ ಅನುರಾಧ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.ವಿಧಿ ಕ್ರೂರ ಎಂದು ಒಂದೊಂದು ಅನಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ಬರೀ ಸಾವು-ನೋವು, ಕಷ್ಟಗಳನ್ನೇ ಅನುಭವಿಸುತ್ತಿದ್ದೇವೆ, ಕೇಳುತ್ತಿದ್ದೇವೆ. ನನಗೆ ನಂಬಲೂ ಆಗುತ್ತಿಲ್ಲ, ಅಮೃತಾನನ್ನು ನೋಡಿ ಸಮಾಧಾನ ಹೇಳಬೇಕಿದೆ. ಗುರುರಾಜ್ ನಾಯ್ಡು ಅವರ ಮಗಳು ಅಮೃತಾ ಅವರು ನಮ್ಮ ರಿಯಾಲಿಟಿ ಶೋಗೆ ಬಂದಾಗ ನಿಜಕ್ಕೂ ಖುಷಿಯಾಗಿತ್ತು. ಹಿರಿಯ ಹರಿಕಥಾ ವಿದ್ವಾಂಸರ ಮಗಳು ಹರಿಕಥೆ ಮಾಡುವುದನ್ನು ನಾನು ಸಾಕಷ್ಟು ಬಾರಿ ನೋಡಿದ್ದೆ. ಇಂದು ಅವರಿಗೆ ಹಾಗಾಗಿದ್ದು ನಿಜಕ್ಕೂ ನೋವಾಗುತ್ತಿದೆ, ಯಾವ ತಂದೆ-ತಾಯಿಗೂ ಈ ಪರಿಸ್ಥಿತಿ ಬರಬಾರದು ಎಂದು ಪ್ರತಿಕ್ರಿಯಿಸಿದ್ದಾರೆ.

‘ದೇವರು ನಿಜವಾಗಿಯೂ ದೇವರಾ? ಅಥವಾ ದೇವರು ಇದ್ದಾನಾ? ಇಲ್ಲ, ದೇವರನ್ನ ನಂಬಲೇಬೇಕಾ? ಈ ಪ್ರಶ್ನೆಗಳು ಆಗಾಗ ಮೂಡಿ ಬರುತ್ತಿವೆ. ಇವತ್ತು ಈ ಘಟನೆಯ ನಂತರ ನಿಜವಾಗಲೂ ದೇವರು ಇದ್ದಾನೋ ಇಲ್ಲವೋ ಅನ್ನೋ ಪ್ರಶ್ನೆ ಮನಸ್ಸಿಗೆ ತುಂಬಾ ಗಾಢವಾಗಿ ಕಾಡುತ್ತಿದೆ. ಅಪ್ಪು ಅವರ ನಿಧನ ಬಳಿಕ ದೇವರು ಇದ್ದಾರೆಯೇ ಇಲ್ಲವೇ ಎಂದು ಸಂಶಯ ಬಂದಿತ್ತು. ಇಂದು ಮತ್ತೆ ಅದೇ ಭಾವ ಕಾಡುತ್ತಿದೆ. ಪುಟ್ಟ ಕಂದ ಸಮನ್ವಿ ಮಿಸ್ ಯೂ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಸೃಜನ್​ ಲೋಕೇಶ್​ ಪೋಸ್ಟ್​ ಮಾಡಿದ್ದಾರೆ.

ನನಗೆ ಮೊದಲೇ ಹೆಣ್ಣು ಮಗುವಿಲ್ಲ ಎಂಬ ಕೊರಗು ಇದೆ, ಇಂತಹ ಮುದ್ದು ಮುದ್ದಾದ ಪುಟ್ಟ ಹೆಣ್ಣು ಮಕ್ಕಳನ್ನು ನೋಡಿದಾಗ ನಿಜಕ್ಕೂ ಖುಷಿಯಾಗುತ್ತಿತ್ತು, ಜಗತ್ತನ್ನು ಇನ್ನೂ ನೋಡದ ಈ ಮಗು ಇಂದು ಇಲ್ಲ ಎಂದು ಹೇಳಲು ನಿಜಕ್ಕೂ ನೋವಾಗುತ್ತಿದೆ ಎಂದು ಸೃಜನ್ ಲೋಕೇಶ್ ಪ್ರತಿಕ್ರಿಯಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *