ವಸಂತ ಪ್ರಶ್ನೆ ನಂ೧- ಸಿದ್ಧಾಪುರದಲ್ಲಿ ಅಣಲೇಬೈಲ್‌ ಕ್ಷೇತ್ರಕ್ಕೇಕೆ ಸಿಂಹಪಾಲು?

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿನಿಧಿಸುವ ಶಿರಸಿ-ಸಿದ್ಧಾಪುರ ಕ್ಷೇತ್ರದಾದ್ಯಂತ ಅಸಮತೋಲನ,ಅಸಮರ್ಪಕ ಅನುದಾನ ಹಂಚಿಕೆ ನಡೆಯುತ್ತಿದೆ ಎಂದು ತಕರಾರು ಎತ್ತಿರುವ ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಈ ಬಗ್ಗೆ ಜನಾಂದೋಲನಕ್ಕೆ ಸಿದ್ಧವಾಗುತ್ತಿದೆ. ದೇಶದ ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರ ನಡೆಸುತ್ತಿರುವ ಬಿ.ಜೆ.ಪಿ. ಪಕ್ಷ ತಾನು ನಂಬುವ ಅಸಮಾನತೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದೆ. ಬಿ.ಜೆ.ಪಿ. ಆಡಳಿತದ ಸರ್ಕಾರಗಳ ವಿಫಲತೆ, ಸ್ವಜನಪಕ್ಷಪಾತ ಸೇರಿದ ಅಂಧಾ ದರ್ಬಾರಿಗೆ ನಮ್ಮ ಬಳಿ ನೂರಾರು ದಾಖಲೆ, ಪ್ರಶ್ನೆಗಳಿವೆ. ಅವುಗಳಲ್ಲಿ ಕೆಲವನ್ನಾದರೂ ನಾವು ಸಾರ್ವಜನಿಕ ಹಿತಾಸಕ್ತಿಯಿಂದ ಕೇಳಲೇಬೇಕಾಗುತ್ತದೆ. ರಾಜ್ಯ, ದೇಶದ ವಿದ್ಯಮಾನಗಳಿಗಿಂತ ಮುಂಚಿತವಾಗಿ ಸಿದ್ಧಾಪುರ ತಾಲೂಕಿನ ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆಗಳತ್ತ ಬೆಳಕು ತೋರುತಿದ್ದದೇವೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರ ಪರವಾಗಿ ಕಾಂಗ್ರೆಸ್‌ ನಿಂದ ಶಾಸಕರಿಗೆ ಹತ್ತು ಪ್ರಶ್ನೆಗಳು ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಮಳಲವಳ್ಳಿ ತಕರಾರು ಎತ್ತಿದ್ದಾರೆ. ಅವರು ಹತ್ತು ಪ್ರಶ್ನೆಗಳು ಕೆಲವು ಕಂತುಗಳಲ್ಲಿ ಪ್ರಕಟವಾಗುತ್ತಿವೆ.

ಶಾಸಕರು, ಸಂಸದರು ತಮ್ಮ ಕ್ಷೇತ್ರವನ್ನು ಸಮಾನತೆಯ ಭಾವದಲ್ಲಿ ನೋಡಬೇಕು. ಈ ಸಾಮಾಜಿಕ, ಸಾರ್ವಜನಿಕ ಶಿಸ್ತು ಶಾಸಕ, ಸಂಸದರಿಗಿಂತ ಮುಖ್ಯಮಂತ್ರಿಗಳು,ವಿಧಾನಸಭಾ ಅಧ್ಯಕ್ಷರಿಗೆ ಅನ್ವಯಿಸುತ್ತದೆ. ರಾಜ್ಯ ವಿಧಾನಸಭಾ ಅಧ್ಯಕ್ಷರೂ, ಸ್ಥಳಿಯ ಶಾಸಕರೂ ಆದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಪ್ರವಾಹ ಪರಿಹಾರ ಅನುದಾನದ ನಿಧಿಯ ೧೦ ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಅಣಲೇಬೈಲ್‌ ಜಿ.ಪಂ. ಕ್ಷೇತ್ರಕ್ಕೆ ಮಾತ್ರ ಬಹುತೇಕ ಹಂಚಿರುವುದ್ಯಾಕೆ?

ತಾಲೂಕಿನಲ್ಲಿ ನೀರಾವರಿ ಇಲಾಖೆಯ ಕಾಮಗಾರಿಗಳಿಂದ ನೀರಾವರಿ,ಕೃಷಿ ಅನುಕೂಲದ ಕೆಲಸಗಳನ್ನು ಮಾಡಬೇಕು ಆದರೆ ಶಾಸಕರು ೨-೩ ಮನೆಗಳಿರುವ ಕಡೆ ಬಾಂದಾರಗಳನ್ನು ನಿರ್ಮಿಸಿ,ಅವಶ್ಯವಿರುವ ಕಡೆ ಪ್ರಜ್ಞಾಪೂರ್ವಕ ಕುರುಡು ಪ್ರದರ್ಶಿಸುವುದೇಕೆ ಎಂದು ಪ್ರಶ್ನಿಸಿ, ಮಳೆಅನಾಹುತಗಳಾಗಲಿ,ನೀರಿನ ಅವಶ್ಯಕತೆಗಳಿರಲಿ ಈ ತೊಂದರೆಗಳು ಅಣಲೇಬೈಲ್‌ ಕ್ಷೇತ್ರಕ್ಕಿಂತ ದೊಡ್ಮನೆ ಮತ್ತು ಹಲಗೇರಿ ಕ್ಷೇತ್ರಗಳಲ್ಲಿ ಹೆಚ್ಚಿವೆ. ಹೆಚ್ಚು ಅನಿವಾರ್ಯವಿರುವ, ಗರಿಷ್ಠ ಜನರಿಗೆ ಅನುಕೂಲವಾಗುವ ದೊಡ್ಮನೆ, ಹಲಗೇರಿ ಜಿ.ಪಂ. ಕ್ಷೇತ್ರಗಳನ್ನು ಕಡೆಗಣಿಸಿ ಅಣಲೇಬೈಲ್‌ ಕ್ಷೇತ್ರಕ್ಕೆ ಮಾತ್ರ ಸಿಂಹಪಾಲು ನೀಡುವ ನಿಮ್ಮ ಪಕ್ಷಪಾತದಿಂದ ತಾಲೂಕಿನ ಜನರಿಗೆ ಅನ್ಯಾಯವಾಗುವುದಿಲ್ಲವೆ? ಎಂದು ಪ್ರಶ್ನಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *