ಅದ್ಧೂರಿ ವಿವಾಹ ನೆರವೇರಿಸಿದ ಕಾರವಾರ ಶಾಸಕಿ ರೂಪಾಲಿ

Thumbnail image

ಶಾಸಕಿ ರೂಪಾಲಿ ನಾಯ್ಕ್‌ ಪುತ್ರನ ಅದ್ಧೂರಿ ಕಲ್ಯಾಣ : ಪರ್ಭತ್ ಕೈ ಹಿಡಿದ ಮೈಸೂರಿನ ರೇಖಾ

ಸುಮಾರು ಐದು ಎಕರೆ ವಿಶಾಲ ಪ್ರದೇಶದಲ್ಲಿ ಸಿದ್ಧಪಡಿಸಲಾಗಿದ್ದ ವಿವಾಹ ಮಹೋತ್ಸವದ ಮಂಟಪ ಮದುವೆಗೆ ಆಗಮಿಸಿದ್ದವರ ಕಣ್ಮನ ಸೆಳೆಯಿತು. ಸುಮಾರು 30ಕ್ಕೂ ಅಧಿಕ ತರಹೇವಾರಿ ಖಾದ್ಯಗಳ ಭೂರಿಭೋಜನವನ್ನ ಅತಿಥಿಗಳಿಗಾಗಿ ಉಣಬಡಿಸಲಾಯಿತು..

ಕಾರವಾರ : ಮದುವೆ ಎನ್ನುವುದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎನ್ನುತ್ತಾರೆ. ಆದರೆ, ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ತಮ್ಮ ಮಗನ ಮದುವೆಗಾಗಿ ಸ್ವರ್ಗವನ್ನೇ ಧರೆಗಿಳಿಸಿದ್ದರು.

ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್‌ರ ಮುದ್ದಿನ ಮಗ, ಪರ್ಭತ್ ನಾಯ್ಕ್ ಇಂದು ಕಾರವಾರ ತಾಲೂಕಿನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಗ್ರಾಮೀಣ ಪ್ರದೇಶವಾದ ನಿವಳಿಯಲ್ಲಿ ನಡೆದ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಮೈಸೂರಿನ ಬೆಡಗಿ ರೇಖಾಳ ಕೈ ಹಿಡಿದರು.

ಶಾಸಕಿ ರೂಪಾಲಿ ನಾಯ್ಕ್‌ ಪುತ್ರನ ಅದ್ಧೂರಿ ಕಲ್ಯಾಣೋತ್ಸವ..

ವಿವಿಧ ಬಗೆಯ ಹೂವುಗಳಿಂದ ಅಲಂಕೃತಗೊಂಡಿದ್ದ ಅದ್ಧೂರಿ ಮಂಟಪದಲ್ಲಿ, ಮೂವರು ವೈದಿಕರ ನೇತೃತ್ವದಲ್ಲಿ ನಡೆದ ಮದುವೆಯ ವಿಧಿ- ವಿಧಾನದಲ್ಲಿ ರೇಖಾಳೊಂದಿಗೆ ಪರ್ಭತ್ ಸಪ್ತಪದಿ ತುಳಿದರು.

ಮಂಗಳವಾದ್ಯ, ಮೈಸೂರಿನ ಇಂಗ್ಲಿಷ್ ಬ್ಯಾಂಡ್, ಹೊನ್ನಾವರ ಹಡಿನಬಾಳದ ಬ್ಯಾಂಡ್ ಸೆಟ್​​ಗಳ ಜೊತೆಗೆ ಖ್ಯಾತ ಬಹುಭಾಷಾ ಗಾಯಕ ವಿಜಯ ಪ್ರಕಾಶ್-ಅನುರಾಧಾ ಭಟ್ ಅವರ ಆರ್ಕೆಸ್ಟ್ರಾ ವಿವಾಹ ಮಹೋತ್ಸವದಲ್ಲಿ ಮೆರುಗು ನೀಡಿದವು.

ಈ ಅದ್ಧೂರಿ ವಿವಾಹಕ್ಕೆ ಹತ್ತಾರು ಸಚಿವ, ಶಾಸಕರು, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅತಿಥಿ, ಗಣ್ಯರು, ಕುಟುಂಬಸ್ಥರು, ಬಂಧು- ಬಾಂಧವರು, ಗ್ರಾಮಸ್ಥರು ಸಾಕ್ಷಿಯಾದರು.

ಪ್ರಮುಖವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಶಿವರಾಮ ಹೆಬ್ಬಾರ್, ಜಗದೀಶ್ ಶೆಟ್ಟರ್, ಕೋಟ ಶ್ರೀನಿವಾಸ್ ಪೂಜಾರಿ, ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ವಿಧಾನ ಪರಿಷತ್ ಸದಸ್ಯರಾದ ಗಣಪತಿ ಉಳ್ವೇಕರ್, ಶಾಂತರಾಮ ಸಿದ್ದಿ, ಚಿತ್ರನಟಿ, ಬಿಜೆಪಿ ಮಹಿಳಾ ಮುಖಂಡೆ ತಾರಾ ಅನುರಾಧಾ, ಶಾಸಕ ಸುನೀಲ್ ನಾಯ್ಕ ಸೇರಿದಂತೆ ಅನೇಕರು ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡರು.

ಸುಮಾರು ಐದು ಎಕರೆ ವಿಶಾಲ ಪ್ರದೇಶದಲ್ಲಿ ಸಿದ್ಧಪಡಿಸಲಾಗಿದ್ದ ವಿವಾಹ ಮಹೋತ್ಸವದ ಮಂಟಪ ಮದುವೆಗೆ ಆಗಮಿಸಿದ್ದವರ ಕಣ್ಮನ ಸೆಳೆಯಿತು. ಸುಮಾರು 30ಕ್ಕೂ ಅಧಿಕ ತರಹೇವಾರಿ ಖಾದ್ಯಗಳ ಭೂರಿಭೋಜನವನ್ನ ಅತಿಥಿಗಳಿಗಾಗಿ ಉಣಬಡಿಸಲಾಯಿತು.

ಅಂಕೋಲಾ ಮತ್ತು ಕಾರವಾರದಿಂದ ಸಾರಿಗೆ ಬಸ್, ಖಾಸಗಿ ಬಸ್​​ಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು. ವಾಹನಗಳ ಪಾರ್ಕಿಂಗ್​​ಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಬಿಜೆಪಿಯ ಕಾರ್ಯಕರ್ತರು, ಸ್ಥಳೀಯ ಯುವಕರು ಸ್ವಯಂಸೇವಕರಾಗಿ ಅತಿಥಿ ಗಣ್ಯರನ್ನು ಸ್ವಾಗತಿಸಿ, ಬೀಳ್ಕೊಟ್ಟರು. ಕಾರವಾರ ನಗರದಿಂದ ರಸ್ತೆಯುದ್ದಕ್ಕೂ, ವಿವಾಹ ಮಹೋತ್ಸವದ ಮಂಟದಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *