ksrtc news- ೧೩ ರಂದು ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ & ಪರಿಸರ ಪ್ರೇಮಿ ಮಹಾದೇವ ವೇಳಿಪ ನಿಧನ

ಸಿದ್ಧಾಪುರ ತಾಲೂಕಿನ ಕೆ.ಎಸ್.ಆರ್ .ಟಿ.ಸಿ. ನಾಮಧಾರಿ ನೌಕರರ ಸಂಘ ಪ್ರತಿವರ್ಷ ನಡೆಸುವ ವಾರ್ಷಿಕ ಸಮ್ಮೇಳನದ ೬ ನೇ ವರ್ಷದ ಕಾರ್ಯಕ್ರಮ ಫೆ.೧೩ ರ ರವಿವಾರ ನಗರದ ಲಯನ್ಸ್‌ ಬಾಲಭವನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ.

ಈ ಸ್ನೇಹ ಸಮ್ಮೇಳನದ ಅಂಗವಾಗಿ ನಡೆಯುವ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನದ ಸಭಾ ಕಾರ್ಯಕ್ರಮವನ್ನು ಪ.ಪಂ. ಮುಖ್ಯಾಧಿಕಾರಿ ಕುಮಾರ ನಾಯ್ಕ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಆರ್.ಟಿ. ನಾಯ್ಕ ಅವರಗುಪ್ಪಾ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಸಹಾಯಕ ಸಂಚಾರ ನಿರೀಕ್ಷಕ ಎನ್.‌ ಆರ್ .‌ ನಾಯ್ಕ‌ ನಿವೃತ್ತ ಸೈನಿಕ ಎಂ.ಆರ್.ನಾಯ್ಕ ಸನ್ಮಾನಕ್ಕೊಳಗಾಗಲಿದ್ದು ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪತ್ರಕರ್ತ ಕನ್ನೇಶ್‌ ಕೋಲಶಿರ್ಸಿ, ತಾ.ಕ.ಸಾ.ಪ. ಅಧ್ಯಕ್ಷ ಗೋಪಾಲ ನಾಯ್ಕ ಹಾಗೂವರ್ಕರ್ಸ್‌ ಫೆಡರೇಶನ್‌ ಮಾಜಿ ಪ್ರ.ಕಾರ್ಯದರ್ಶಿ ಶಾಂತರಾಮ ನಾಯ್ಕ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ಮಹಾದೇವ ವೇಳಿಪ ನಿಧನ

2021ರಲ್ಲಿ ಜಾನಪದ ರಾಜ್ಯ ಪ್ರಶಸ್ತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ಮಹಾದೇವ ವೇಳಿಪ ಅವರು ಇಂದು ನಿಧನರಾಗಿದ್ದಾರೆ.

ಕಾರವಾರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ (90) ಇಂದು ಮುಂಜಾನೆ ನಿಧನ ಹೊಂದಿದ್ದಾರೆ.

ಜೋಯಿಡಾ ತಾಲೂಕಿನ ನಾಗೋಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಟೋಳಿ ಗ್ರಾಮದ ಮಹಾದೇವ ವೇಳಿಪ ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಜನಪದ ಕಲೆ ಹಾಗೂ ಪರಿಸರ ರಕ್ಷಣೆಗೆ ಜಾನಪದ ರಾಜ್ಯ ಪ್ರಶಸ್ತಿ ಹಾಗೂ 2021ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೇಳಿಪ, ನೂರಾರು ಬಗೆಯ ಗೆಡ್ಡೆ-ಗೆಣಸುಗಳನ್ನು ಉಳಿಸಿ ಬೆಳೆಸುವ ಜೊತೆಗೆ ಅರಣ್ಯ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಬುಡಕಟ್ಟು ಕುಣುಬಿ ಸಂಸ್ಕೃತಿ ಕಲೆಯನ್ನು ಉಳಿಸಿ ಬೆಳೆಸುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದ ಅವರು ಈ ಬಗ್ಗೆ ಸಾವಿರಾರು ಜನಪದ ಹಾಡುಗಳನ್ನು ರಚಿಸಿ ಹಾಡುತ್ತಿದ್ದರು.

ಪರಿಸರ ಸಮತೋಲನೆಯಲ್ಲಿ ಒಣಗು ಹಾಗೂ ಉಂಬಳಗಳ ಪಾತ್ರ ಮಹತ್ವದ್ದಾಗಿದೆ ಎಂದು ನಂಬಿದ್ದ ವೇಳಿಪ ಅವರು ಕಾಡುಗಳಿಂದ ತರಗೆಲೆಗಳನ್ನು ತರುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದರು. ಜೇನುನೊಣಗಳ ರಕ್ಷಣೆ ಮಾಡುತ್ತಿದ್ದು, ಹಕ್ಕಿಗಳ ಕೂಗು ಕೇಳಿಯೇ ನಿಖರ ಸಮಯ ಹೇಳುವ ಕಲೆಯೂ ಇವರಿಗೆ ಕರಗತವಾಗಿತ್ತು. (ಈಟಿಬಿ.ಕೆ.)

ವಜಾಗೊಂಡಿದ್ದ ಸಾರಿಗೆ ಚಾಲಕರು- ಕಂಡಕ್ಟರ್ ಗಳ ಮರು ನೇಮಕಾತಿಗೆ ಬಿ.ಶ್ರೀರಾಮುಲು ಆದೇಶ

ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕೋರಿ ಮುಷ್ಕರದಲ್ಲಿ  ಭಾಗಿಯಾಗಿದ್ದ ಸಾರಿಗೆ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

B.Sriramulu

ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕೋರಿ ಮುಷ್ಕರದಲ್ಲಿ  ಭಾಗಿಯಾಗಿದ್ದ ಸಾರಿಗೆ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಪ್ರತಿಭಟನೆ ವೇಳೆ ಭಾಗಿಯಾಗಿದ್ದ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇಂದು 100 ನೌಕರರು, ನಾಳೆ 200 ನೌಕರರ ಮರು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

https://imasdk.googleapis.com/js/core/bridge3.496.0_en.html#goog_1299370285

ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕೋರಿ ಮುಷ್ಕರ ನಡೆಸಿದ್ದ ನೌಕರರಲ್ಲಿ ಈಗಾಗಲೇ 1500 ಜನರನ್ನು ಅಮಾನತುಗೊಂಡವರನ್ನು ವಾಪಸ್ ಪಡೆಯಲಾಗಿದೆ. 1353 ಜನರು ವಜಾಗೊಂಡಿದ್ದಾರೆ, ವಜಾಗೊಂಡವರನ್ನು ವಾಪಸ್ ನೇಮಕ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ಮಾನವೀಯತೆಯ ದೃಷ್ಟಿಯಿಂದ. ಮರು ನೇಮಕ ಆದೇಶ ನೀಡಲಾಗುತ್ತಿದೆ, ಮೊದಲ ಹಂತದಲ್ಲಿ 100 ಜನರಿಗೆ ನೇಮಕ ಮಾಡಲಾಗುತ್ತಿದೆ ಉಳಿದವರಿಗೆ ಹಂತ ಹಂತವಾಗಿ ಮರು ನೇಮಕ ಮಾಡಲಾಗುತ್ತಿದೆ. ಈ ತಿಂಗಳ ಒಳಗೆ 700 ಮಂದಿಗೆ ನೇಮಕಾತಿ ನೀಡಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದರು.

ಸರ್ಕಾರದ ವಿರುದ್ಧ ಪ್ರತಿಭಟನೆ ಮುಷ್ಕರ ಮಾಡಿದರೆ ನಿಮ್ಮನ್ನು ರಕ್ಷಣೆ ಮಾಡುವುದು ಕಷ್ಟ. ಸರ್ಕಾರದ ಬಗ್ಗೆ ನಿಮಗೆ ಗೌರವ ಇರಬೇಕು. ಇನ್ನು ಮುಂದೆ ಪ್ರತಿ ತಿಂಗಳು ಸಂಬಳ ದೊರೆಯುವಂತೆ ನೋಡಿಕೊಳ್ಳಲಾಗುವುದು. ಈಗ ನೇಮಕಗೊಂಡವರು ಇನ್ನುಮುಂದೆ ಮುಷ್ಕರಕ್ಕೆ ಹೋಗಬಾರದು ಎಂದು ಷರತ್ತು ವಿಧಿಸಲಾಗಿದೆ. ನೌಕರರು  ಮುಷ್ಕರಕ್ಕೆ ಹೋದರೆ ನೌಕರಿ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

ಸಾರಿಗೆ ನೌಕರರು ಈ ಹಿಂದೆ ತಮ್ಮ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಠಾವಧಿ ಮುಷ್ಕರವನ್ನ ನಡೆಸಿದ್ದರು. ಈ ಸಂದರ್ಭದಲ್ಲಿ ನೌಕರರು ಕೆಲಸಕ್ಕೆ ಹಾಜರಾಗದೇ ಬಸ್‍ಗಳು ರಸ್ತೆಗಿಳಿದಿರಲಿಲ್ಲ, ನೌಕರರು ಮುಷ್ಕರ ಕೈಗೊಂಡ ಸಂದರ್ಭದಲ್ಲಿ ಸರ್ಕಾರ ಮುಷ್ಕರ ನಿರತರಿಗೆ ಎಚ್ಚರಿಕೆಯನ್ನ ನೀಡಿತ್ತು, ಸರ್ಕಾರದ ಎಚ್ಚರಿಕೆಗೆ ಜಗ್ಗದೆ ಮುಷ್ಕರ ಮುಂದುವರೆಸಿದ ಕಾರಣ ಅಂದಿನ ಸರ್ಕಾರ ಶಿಸ್ತುಕ್ರಮ ಕೈಗೊಂಡಿತ್ತು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *