ಆರ್‌ಎಸ್‌ಎಸ್, ಬಿಜೆಪಿಯಿಂದ ದೇಶದ ಸಾಮರಸ್ಯ, ವೈವಿಧ್ಯತೆ, ಏಕತೆಗೆ ಅಪಾಯ: ಬೃಂದಾ ಕಾರಟ್

ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಿದ್ಧಾಂತಗಳಿಂದ ಭಾರತದ ಸೌಹಾರ್ದತೆ, ಏಕತೆ, ವೈವಿಧ್ಯತೆ ಮತ್ತು ಸಂವಿಧಾನಕ್ಕೆ ಬಾಹ್ಯ ಶತ್ರುಗಳಿಗಿಂತಲೂ ಹೆಚ್ಚಿನ ಅಪಾಯ ಇದೆ ಎಂದು ಸಿಪಿಐ(ಎಂ) ಪಾಲಿಟ್‌ ಬ್ಯುರೊ ಸದಸ್ಯೆ, ರಾಜ್ಯಸಭಾ ಸದಸ್ಯೆ ಬೃಂದಾ…

karat1

ಮಂಗಳೂರು: ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಿದ್ಧಾಂತಗಳಿಂದ ಭಾರತದ ಸೌಹಾರ್ದತೆ, ಏಕತೆ, ವೈವಿಧ್ಯತೆ ಮತ್ತು ಸಂವಿಧಾನಕ್ಕೆ ಬಾಹ್ಯ ಶತ್ರುಗಳಿಗಿಂತಲೂ ಹೆಚ್ಚಿನ ಅಪಾಯ ಇದೆ ಎಂದು ಸಿಪಿಐ(ಎಂ) ಪಾಲಿಟ್‌ ಬ್ಯುರೊ ಸದಸ್ಯೆ, ರಾಜ್ಯಸಭಾ ಸದಸ್ಯೆ ಬೃಂದಾ ಕಾರಟ್ ಅವರು ಸೋಮವಾರ ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಘಟನೆಗಳ ಹಿನ್ನೆಲೆಯಲ್ಲಿ ಸಿಪಿಐ(ಎಂ) ದಕ್ಷಿಣ ಕನ್ನಡ ಘಟಕ ಆಯೋಜಿಸಿದ್ದ ಸೌಹಾರ್ದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕಾರಟ್, ಆರ್‌ಎಸ್‌ಎಸ್ ಮತ್ತು ಬಿಜೆಪಿ ದೇಶಕ್ಕೆ ಹೆಚ್ಚು ಅಪಾಯಕಾರಿ ಎಂದು ಜನತೆಗೆ ಎಚ್ಚರಿಕೆ ನೀಡಿದರು.

ಆರ್ ಎಸ್ಎಸ್ ಮತ್ತು ಅದರ ಅಂಗಸಂಸ್ಥೆಗಳು ದೇಶದ ದೊಡ್ಡ ಶತ್ರುಗಳು. ಅವರ ಕೋಮುವಾದಿ ಸಿದ್ಧಾಂತ ಕೇವಲ ಅಲ್ಪಸಂಖ್ಯಾತರು ಮಾತ್ರವಲ್ಲ, ಪ್ರತಿಯೊಬ್ಬರ ಮೇಲೂ ಪರಿಣಾಮ ಬೀರುತ್ತದೆ. ಇದು ದೇಶವನ್ನು ಕೋಮುವಾದಿ ಮತ್ತು ಸರ್ವಾಧಿಕಾರಿ ಆಡಳಿತಕ್ಕೆ ಕೊಂಡೊಯ್ಯುವ ಮೂಲಕ ಭಾರತೀಯ ಗಣರಾಜ್ಯದ ಪ್ರತಿಯೊಂದು ಸ್ವರೂಪವನ್ನು ಬದಲಾಯಿಸುತ್ತದೆ” ಎಂದು ಹೇಳಿದರು.

ಇದೇ ವೇಳೆ ಹಿಜಾಬ್ ನಿಷೇಧದ ಬಗ್ಗೆ ಮಾತನಾಡಿದ ಅವರು, ಬಾಲಕಿಯರು ಹಲವು ಅಡೆತಡೆಗಳನ್ನು ಮುರಿದು ಶಿಕ್ಷಣ ಪಡೆಯಲು ಯತ್ನಿಸುತ್ತಿದ್ದಾರೆ. ಅವರಿಗೆ ಹಿಜಾಬ್ ತೆಗೆಯುವಂತೆ ಸೂಚಿಸುವುದು ನಾಚಿಕೆಗೇಡಿತನ. ಹಿಜಾಬ್ ಅನ್ನು ನಿಷೇಧಿಸುವ ಹೈಕೋರ್ಟ್ ತೀರ್ಪು ‘ದುರದೃಷ್ಟಕರ’ ಎಂದ ಕಾರಟ್, ಸುಪ್ರೀಂ ಕೋರ್ಟ್ ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಹೇಳಿದರು.

ಆಡಳಿತಾರೂಢ ಬಿಜೆಪಿ ತನ್ನ ‘ವೈಫಲ್ಯ’ಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಹಿಜಾಬ್‌ ವಿವಾದ ಸೃಷ್ಟಿಸಿತು ಎಂದು ಬೃಂದಾ ಕಾರಟ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನೂ ಕಾಶ್ಮೀರ್ ಫೈಲ್ ಚಿತ್ರದಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದ ಸಿಪಿಐ ನಾಯಕಿ, ಈ ಚಿತ್ರ ಹಿಂಸೆಯ ಪ್ರದರ್ಶನವಾಗಿದ್ದು, ಒಂದು ಸಮುದಾಯದ ಮೇಲೆ ದ್ವೇಷ ಸಾಧನೆಗಾಗಿ ಮಾಡಿದ ಕ್ರೌರ್ಯದ ವಿಜೃಂಭಣೆಯಂತಿದೆ. ಕಾಶ್ಮೀರಿ ಜನರ ಒಗ್ಗಟ್ಟು ಪ್ರದರ್ಶನ ಮತ್ತು ಪಂಡಿತರನ್ನು ಸುರಕ್ಷಿತವಾಗಿ ಹುಟ್ಟೂರಿಗೆ ಕರೆತಂದು ಅವರಿಗೆ ನ್ಯಾಯ ಒದಗಿಸುವ ಕೆಲಸಕ್ಕೆ ಆದ್ಯತೆ ಕೊಡಬೇಕು. ಸಿನಿಮಾ ಮೂಲಕ ಹಿಂಸೆಯ ವಿಜೃಂಭಣೆಯಿಂದ ಯಾರಿಗೂ ಲಾಭವಾಗದು ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *