88 ವರ್ಷದ ಎಲ್ಲಾ ದಾಖಲೆ ಉಡೀಸ್, ನಾಲ್ಕು ದಿನಗಳಲ್ಲಿ 100 ಕೋಟಿ ಕ್ಲಬ್ ಸೇರಿದ ಜೇಮ್ಸ್!

ಕನ್ನಡ ಚಿತ್ರರಂಗದ ಸಾರ್ವಕಾಲಿಕ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್’ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿದೆ.  ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ 100 ಕೋಟಿ ಕ್ಲಬ್ ಸೇರುವ ಮೂಲಕ 88 ವರ್ಷದ  ಕನ್ನಡ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ಬರೆದಿದೆ.

puneeth_Rajkumar_in_James1

ಬೆಂಗಳೂರು: ಕನ್ನಡ ಚಿತ್ರರಂಗದ ಸಾರ್ವಕಾಲಿಕ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್’ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿದೆ. ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ 100 ಕೋಟಿ ಕ್ಲಬ್ ಸೇರುವ ಮೂಲಕ 88 ವರ್ಷದ ಕನ್ನಡ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ಬರೆದಿದೆ.

ಪುನೀತ್ ರಾಜ್ ಕುಮಾರ್ ಅವರ ಹುಟ್ಟಹಬ್ಬವಾದ ಮಾರ್ಚ್ 17 ರಂದು ವಿಶ್ವದಾದ್ಯಂತ ನಾಲ್ಕು ಸಾವಿರ ಪರದೆಗಳಲ್ಲಿ ತೆರೆ ಕಂಡಿದ್ದ ‘ಜೇಮ್ಸ್’ ಚಿತ್ರ ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ಈ ಚಿತ್ರ  ಭಾವನಾತ್ಮಕವಾಗಿ ಪುನೀತ್ ಅಭಿಮಾನಿಗಳನ್ನು ಹೆಚ್ಚು ಸೆಳೆದಿದ್ದು, ಕೊನೆಯ ಬಾರಿಗೆ ತೆರೆಯ ಮೇಲೆ ತನ್ನ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. 

ಎಷ್ಟೋ ಕಡೆಗಳಲ್ಲಿ ಪುನೀತ್ ಅಭಿಮಾನಿಗಳು ಒಟ್ಟಾಗಿ ಟಿಕೆಟ್ ಖರೀದಿಸುವ ಮೂಲಕ ಊರಿನ ಜನರಿಗೆ ಸಿನಿಮಾ ತೋರಿಸುತ್ತಿರುವ ಬಗ್ಗೆಯೂ ವರದಿಯಾಗಿದೆ. ಐಎಂಡಿಬಿ ರೇಟಿಂಗ್ಸ್ ನಲ್ಲಿಯೂ ಬಾಲಿವುಡ್ ಚಿತ್ರ ”ದಿ ಕಾಶ್ಮೀರ್ ಫೈಲ್ಸ್”  ಚಿತ್ರವನ್ನು ಮೀರಿಸಿರುವ ಜೇಮ್ಸ್ ಚಿತ್ರಕ್ಕೆ ಸರ್ಕಾರ ತೆರಿಗೆ ನೀಡಬೇಕೆಂಬ ಬೇಡಿಕೆಯೂ ಇದೆ. 

ಚೇತನ್ ಕುಮಾರ್ ನಿರ್ದೇಶನದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿರುವ ಜೇಮ್ಸ್ ಚಿತ್ರ, ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ಬಾಚಿರುವ ಮಾಹಿತಿಯನ್ನು ಸ್ಯಾಂಡಲ್ ವುಡ್ ಎಂಟರ್ ಟೈನ್ ಮೆಂಟ್ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದನ್ನು ನಿರ್ದೇಶಕ ಚೇತನ್ ಕುಮಾರ್ ಕೂಡಾ ರೀ ಟ್ವೀಟ್ ಮಾಡಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *