ಎಚ್ಚರಿಕೆ..ವಾರಾಂತ್ಯದಲ್ಲಿ ಮಳೆ,ಗುಡುಗು,ಸಿಡಿಲು ಆರ್ಭಟ ಸಾಧ್ಯತೆ

ವಾರಾಂತ್ಯದವರೆಗೂ ರಾಜ್ಯದ ಹಲವೆಡೆ ಮಳೆ, ಗುಡುಗು-ಸಿಡಿಲಿನ ಅಲರ್ಟ್!

ಬೆಂಗಳೂರಲ್ಲಿ 33.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ನಾಳೆ ಮಳೆಯ ಸಾಧ್ಯತೆ ಇಲ್ಲ. ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ. ಮಧ್ಯ ಮಹಾರಾಷ್ಟ್ರದ ಕೇಂದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ ಆಗ್ನೇಯ ಅರಬ್ಬಿ ಸಮುದ್ರದಲ್ಲಿಯೂ ಮೇಲ್ಮೈ ಸುಳಿಗಾಳಿ ಇದೆ. ಈವರೆಗೆ ಇದ್ದ ವಾಯುಭಾರ ಕುಸಿತ ಮಯನ್ಮಾರ್ ಪ್ರದೇಶದತ್ತ ದುರ್ಬಲಗೊಂಡಿದೆ ಎಂದು ಹವಾಮಾನ ಕೇಂದ್ರದ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.

ಬೆಂಗಳೂರು: ಕರಾವಳಿ ಪ್ರದೇಶದ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ಸುತ್ತಲಿನ ಜಿಲ್ಲೆಗಳಿಗೆ ವಾರಾಂತ್ಯದವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, ಮುಂದಿನ ಎರಡು ದಿನ ಗುಡುಗು ಸಿಡಿಲಿನ ಅಲರ್ಟ್ ನೀಡಿದೆ. ಈ ಕುರಿತು ಹವಾಮಾನ ಕೇಂದ್ರದ ತಜ್ಞ ಸಿಬ್ಬಂದಿ ಸದಾನಂದ ಅಡಿಗ ಅವರು ಮಾಹಿತಿ ನೀಡಿದ್ದಾರೆ. ಕರಾವಳಿಯಲ್ಲಿ ಇಂದು ಹಲವೆಡೆ ಮಳೆಯಾಗಿದ್ದು, ಒಂದೆರಡು ಕಡೆ ಭಾರಿ ಮಳೆಯಾಗಿದೆ. ನಾಳೆ ಹಾಗೂ ನಾಡಿದ್ದು ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದರು.https://prod.suv.etvbharat.com/v2/smart_urls/623c8d6e71d60097bf976e23/embedplayer1?player_version=v3&notplay=true&autoplay=false&mute=false&thumbnailurl=https://etvbharatimages.akamaized.net/etvbharat/prod-7

ಹವಾಮಾನ ಕೇಂದ್ರದ ತಜ್ಞ ಸದಾನಂದ ಅಡಿಗ

ಮಾರ್ಚ್ 27 ಹಾಗೂ 28 ರಂದು ಉಡುಪಿ ಹಾಗೂ ದಕ್ಷಿಣ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಇಂದು ಎಲ್ಲ ಕಡೆ ಮಳೆಯಾಗಿದ್ದು, ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. 27, 28 ರಂದು ಪಶ್ಚಿಮ ಘಟ್ಟ ಹಾಗೂ ಚಿತ್ರದುರ್ಗದಲ್ಲಿ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ: ಸಿಲಿಕಾನ್ ಸಿಟಿಯಲ್ಲಿ 33.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ನಾಳೆ ಮಳೆಯ ಸಾಧ್ಯತೆ ಇಲ್ಲ. ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ. ಮಧ್ಯ ಮಹಾರಾಷ್ಟ್ರದ ಕೇಂದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ ಆಗ್ನೇಯ ಅರಬ್ಬಿ ಸಮುದ್ರದಲ್ಲಿಯೂ ಮೇಲ್ಮೈ ಸುಳಿಗಾಳಿ ಇದೆ. ಈವರೆಗೆ ಇದ್ದ ವಾಯುಭಾರ ಕುಸಿತ ಮಯನ್ಮಾರ್ ಪ್ರದೇಶದತ್ತ ದುರ್ಬಲಗೊಂಡಿದೆ ಎಂದರು. https://1eebe7c67ac32edabaec5e6e1975c97e.safeframe.googlesyndication.com/safeframe/1-0-38/html/container.html

ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ: ಕಳೆದ 24 ಗಂಟೆ ಅವಧಿಯಲ್ಲಿ ಕರಾವಳಿಯಲ್ಲಿ ಹಲವೆಡೆ ಮಳೆಯಾಗಿರುವ ವರದಿಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಳೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇದ್ದು, ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 41.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ಉಷ್ಣಾಂಶ ಧಾರವಾಡದಲ್ಲಿ 20 ಡಿಗ್ರಿ ಸೆಲ್ಸಿಯಸ್ ಆಗಿದೆ ಎಂದು ತಿಳಿಸಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *