ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಗುರುವಾರ ಪ್ರಕಟಿಸಿದ್ದಾರೆ.

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಗುರುವಾರ ಪ್ರಕಟಿಸಿದ್ದಾರೆ.

ಇಂದು ಸಂಜೆ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಈಶ್ವರಪ್ಪ ಅವರು, ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಉದ್ದೇಶದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ತಪ್ಪು ಮಾಡಿದ್ದರೆ ದೇವರು ನನಗೆ ಶಿಕ್ಷೆ ನೀಡಲಿ. ಎಲ್ಲವನ್ನೂ ಎದುರಿಸಿ ಆರೋಪಮುಕ್ತವಾಗಿ ಹೊರ ಬರುತ್ತೇನೆ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.

ನಾನು ದೇವರನ್ನು ನಂಬಿದ್ದೇನೆ.. 40% ಕಮಿಷನ್ ಆರೋಪದಿಂದ ಮುಕ್ತನಾಗಿ ಶೀಘ್ರವಾಗಿ ಹೊರಬರುತ್ತೇನೆ. ತನಿಖೆಗೆ ನನ್ನ ಸಂಪೂರ್ಣ ಸಹಕಾರ ಇರುತ್ತದೆ. ಸಚಿವನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಕೇಂದ್ರ ಹಾಗೂ ರಾಜ್ಯದ ಎಲ್ಲ ನಾಯಕರಿಗೂ ಧನ್ಯವಾದ ಸಲ್ಲಿಸುವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ರಾಜ್ಯ ಸರ್ಕಾರಕ್ಕೆ ತೀವ್ರ ತಲೆನೋವಾಗಿ ಪರಿಣಮಿಸಿತ್ತು. ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಪಾರ್ಟಿ, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದವು. ಅಲ್ಲದೆ, ಒಂದು ಹೆಜ್ಜೆ ಮುಂದೆ ಇಟ್ಟಿದ್ದ ಕಾಂಗ್ರೆಸ್ ನಾಯಕರು, ವಿಧಾನಸೌಧಲ್ಲಿ 24 ಗಂಟೆ ಅಹೋರಾತ್ರಿ ಧರಣಿ ಆರಂಭಿಸಿದ್ದರು.

ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ಮೇಲೆ ತೀವ್ರ ಒತ್ತಡ ಹಾಕಿತ್ತು. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿತ್ತು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *