ಮತ್ತೆ ಮಾಸ್ಕ್‌,ಸಾಮಾಜಿಕ ಅಂತರ!

local news- ಸಂವಿಧಾನವೇ ಎಲ್ಲದಕ್ಕಿಂತ ಶ್ರೇಷ್ಠ

ಕೋವಿಡ್ 4ನೇ ಅಲೆ: ಜನಸಂದಣಿ, ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ!

ಕೋವಿಡ್ 4ನೇ ಅಲೆಯನ್ನು ತಡೆಯುವ ಮುನ್ನಚ್ಚೆರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯ ಮಾಡಲಾಗಿದೆ.

ಬೆಂಗಳೂರು: ಕೋವಿಡ್ 4ನೇ ಅಲೆಯನ್ನು ತಡೆಯುವ ಮುನ್ನಚ್ಚೆರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. 

ಸಿಎಂ ಬಸವರಾಜ್ ಬೊಮ್ಮಾಯಿಯವರ ಗೃಹ ಕಛೇರಿ ಕೃಷ್ಣಾದಲ್ಲಿ ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ, ಕಂದಾಯ ಸಚಿವ ಆರ್. ಅಶೋಕ್, ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಸಾರ್ವಜನಿಕರು ಹೆಚ್ಚು ಮುಂಜಾಗ್ರತೆ ವಹಿಸಬೇಕಿದೆ. ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ ಎಂದರು.
 
ಹೊಸ ಮಾರ್ಗಸೂಚಿಯಂತೆ ಜನ ಸಂದಣಿ ಹಾಗೂ ಒಳಾಂಗಣದಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆಗೆ ನಿರ್ದೇಶನ ನೀಡಲಾಗಿದೆ. ಸದ್ಯಕ್ಕೆ ಮಾಸ್ಕ್ ಧರಿಸದೇ ಇದ್ದರೆ ದಂಡ ಹಾಕಲಾಗುವುದಿಲ್ಲ. ಆದರೆ ಜನರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶೇಕಡ 1.9 ರಷ್ಟು ಪ್ರಕರಣಗಳು ದಾಖಲಾಗಿದೆ. ಈ ಬಗ್ಗೆ ಹೆಚ್ಚು ನಿಗಾ ಇಡಲಾಗಿದೆ. ಅವಶ್ಯಕತೆ ಇದ್ದರೆ ಸೋಂಕಿತರಿಗೆ ವಿಶೇಷ ಮೇಲ್ವಿಚಾರಣೆಯ ಜೊತೆಗೆ ಚಿಕಿತ್ಸೆ ಕೂಡ ನೀಡಲಾಗುವುದು ಎಂದರು.

ವಿಶ್ವ ಆರೊಗ್ಯ ಸಂಸ್ಥೆ ಲಸಿಕೆ ತೆಗೆದುಕೊಳ್ಳದೇ ಇರುವುದು ಸೋಂಕು ಉಲ್ಬಣಕ್ಕೆ ಕಾರಣವಾಗಿದೆ ಎಂದು ಹೇಳಿದೆ.  ಹೀಗಾಗಿ ಎಲ್ಲರೂ ಲಸಿಕೆ ಪಡೆಯಬೇಕು. 3ನೇ ಡೋಸ್ ಲಸಿಕೆ ಪಡೆಯಲು ಅರ್ಹರಾದವರು ಅದನ್ನು ಪಡೆದುಕೊಳ್ಳಬೇಕು. ಹೆಚ್ಚಿನ ರಕ್ಷಣೆ ಪಡೆದುಕೊಳ್ಳಬೇಕು. ಮಾಧ್ಯಮಗಳು ಕೂಡ ಲಸಿಕಕರಣ, ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.  

ದಕ್ಷಿಣ ಕೊರಿಯಾ, ಥೈಲೆಂಡ್ ಮತ್ತು ಜಪಾನ್ ದೇಶಗಳಲ್ಲಿ ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚುತ್ತಿದೆ. ಹೀಗಾಗಿ ಆ ದೇಶಗಳಿಂದ ಬರುವವರ ಬಗ್ಗೆ ವಿಮಾನ ನಿಲ್ದಾಣಗಳಲ್ಲಿ ನಿಗಾ ಇರಿಸಲಾಗಿದೆ.  ಅವರ ಸಂಪರ್ಕಿತರ ಬಗ್ಗೆ ಹಾಗೂ ಪ್ರಯಾಣ ಮಾಡಿದವರ ಬಗ್ಗೆ ಟ್ರ್ಯಾಕ್ ಮಾಡಲಾಗುತ್ತಿದೆ. ಟೆಲಿ ಮಾನಿಟರಿಂಗ್ ಕೂಡ ಮಾಡಲಾಗುತ್ತಿದೆ ಎಂದು ಹೇಳಿದರು. 

ರಾಜ್ಯದಲ್ಲಿ ಪ್ರತಿದಿನ 10,000 ಕೊರೊನಾ ಟೆಸ್ಟಿಂಗ್ ನಡೆಯುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರೋಗ ಲಕ್ಷಣ ಇರುವವರಿಗೆ ಟೆಸ್ಟಿಂಗ್ ಮಾಡಲಾಗುತ್ತಿದೆ. ಏಪ್ರಿಲ್ 27 ರಂದು ಪ್ರಧಾನಿ ನರೇಂದ್ರ ಮೋದಿ, ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಆರೊಗ್ಯ ಸಚಿವರ ಸಭೆ ಕರೆದಿದ್ದಾರೆ. ಆ ಸಭೆಯ ಬಳಿಕ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *