ಮುಸ್ಲಿಮರಂತೆ ತಲೆಗೆ ಟೋಪಿ ಧರಿಸಿ, ಗಲಭೆ ಸೃಷ್ಟಿಗೆ ಪ್ರಯತ್ನ, ಏಳು ಮಂದಿಯ ಬಂಧನ

ಮಸೀದಿಯೊಂದರ ಹೊರಗಡೆ ಮಾಂಸದ ಚೂರು ಸೇರಿದಂತೆ ಕೆಲ ಆಕ್ಷೇಪಾರ್ಹ ವಸ್ತುಗಳನ್ನು ಎಸೆಯುವುದರೊಂದಿಗೆ ಅಯೋಧ್ಯೆಯಲ್ಲಿ ಕೋಮು ಸೌಹಾರ್ದತೆಗೆ ಭಂಗ ತರಲು ಯತ್ನಿಸಿದ 11 ಮಂದಿಯ ಪೈಕಿ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

seven_persons_arrested_so_far1

ಲಖನೌ: ಮಸೀದಿಯೊಂದರ ಹೊರಗಡೆ ಮಾಂಸದ ಚೂರು ಸೇರಿದಂತೆ ಕೆಲ ಆಕ್ಷೇಪಾರ್ಹ ವಸ್ತುಗಳನ್ನು ಎಸೆಯುವುವ ಮೂಲಕ ಅಯೋಧ್ಯೆಯಲ್ಲಿ ಕೋಮು ಸೌಹಾರ್ದತೆಗೆ ಭಂಗ ತರಲು ಯತ್ನಿಸಿದ 11 ಮಂದಿಯ ಪೈಕಿ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಉಳಿದವರ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಗಳು ಮುಸ್ಲಿಮರಂತೆ ಟೋಪಿ ಧರಿಸುವ ಮೂಲಕ ಗಲಭೆ ಸೃಷ್ಟಿಸಲು ಪ್ರಯತ್ನಿಸಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಈ ಆರೋಪಿಗಳು ಶಾಂತಿ ಮತ್ತು ಸೌಹಾರ್ದತೆ ಕೆಡಿಸಲು ಮಾಂಸದ ತುಂಡುಗಳು, ಬೈಕ್ ಗಳು, ಕೆಲವು ಆಕ್ಷೇಪಾರ್ಹ ಫೋಸ್ಟರ್ ಗಳನ್ನು ಮಸೀದಿ ಹೊರಗಡೆ ಎಸೆದಿದ್ದರು ಎಂದು ಅಯೋಧ್ಯೆ ಎಸ್ ಎಸ್ ಪಿ  ಕೆಕೆ ಪಾಂಡೆ ತಿಳಿಸಿದ್ದಾರೆ.

ಬಂಧಿತರನ್ನು ಮಹೇಶ್ ಕುಮಾರ್ ಮಿಶ್ರಾ, ಪ್ರತ್ಯೂಷ್ ಶ್ರೀವಾಸ್ತವ, ನಿತಿನ್ ಕುಮಾರ್, ದೀಪಕ್ ಕುಮಾರ್ ಗೌರ್ ಅಲಿಯಾಸ್ ಗುಂಜನ್, ಬ್ರಜೇಶ್ ಪಾಂಡೆ, ಶತ್ರುಘ್ನ ಪ್ರಜಾಪತಿ ಮತ್ತು ವಿಮಲ್ ಪಾಂಡೆ ಎಂದು ಪೊಲೀಸರು ಗುರುತಿಸಿದ್ದಾರೆ.

ಘಟನಾ ಸ್ಥಳದಲ್ಲಿದ್ದ  ಸಿಸಿಟಿವಿ ದೃಶ್ಯಾವಳಿಗಳ ನೆರವಿನಿಂದ ಆರೋಪಿಗಳನ್ನು ಪತ್ತೆ ಹಚ್ಚಲಾಗಿದ್ದು, ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಮತ್ತು ಗ್ಯಾಂಗ್ ಸ್ಟರ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. 

ಆರೋಪಿಗಳನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ಒಂದು ಲಕ್ಷ ರೂಪಾಯಿ ಬಹುಮಾನವನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವಾನಿಸ್ ಅವಸ್ತಿ ಘೋಷಿಸಿದ್ದಾರೆ. ಮಸೀದಿ ಹೊರಗಡೆ ಆಕ್ಷೇಪಾರ್ಹ ವಸ್ತು ಎಸೆದು ಕೋಮು ಸಾಮರಸ್ಯ ಹಾಳು ಮಾಡಲು ಯತ್ನಿಸಿದ್ದ ಆರೋಪದ ಮೇರೆಗೆ ಈವರೆಗೂ 7 ಮಂದಿಯನ್ನು ಬಂಧಿಸಲಾಗಿದ್ದು, ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಐಪಿ ಕೆ ಪಿ ಸಿಂಗ್ ಹಾಗೂ ಅಯೋಧ್ಯ ಎಸ್ ಎಸ್ ಪಿ ಎಸ್ ಕೆ ಪಾಂಡ್ಯ ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *