local ನ್ಯೂಸ್ -ಮಂಗಳವಾರ ಹಿಂದುಳಿದ ವರ್ಗಗಳ ಸೌಹಾರ್ಧ ಸಮಾವೇಶ

ಶಿರಸಿ, ಇಲ್ಲಿಯ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಮಧ್ಯಾನ್ಹ 2 ಗಂಟೆಗೆ ಹಿಂದುಳಿದ ವರ್ಗಗಳ ಸೌಹಾರ್ದ ಸಮಾವೇಶ ನಡೆಯಲಿದೆ. ಅಂಬೇಡ್ಕರ್ ಜಯಂತಿ ಅಂಗವಾಗಿ ಹಿಂದುಳಿದ ಹಿಂದೂಗಳ ಜಾಗೃತ ವೇದಿಕೆ ಕರ್ನಾಟಕ ದ ಉತ್ತರ ಕನ್ನಡ ಘಟಕ ಆಯೋಜಿಸಿರುವ ಈ ಸಮಾವೇಶದ ಸಾನಿಧ್ಯವನ್ನು ಬೈಲೂರು ನಿಷ್ಕಲ ಮಂಟಪ ಮುಂಡರಗಿ ಶಾಖಾಮಠದ ಪೂಜ್ಯ ಶ್ರೀ ಮ. ನಿ. ಪ್ರ. ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಗಳು ವಹಿಸಲಿದ್ದಾರೆ. ಭಾ. ದ ಸಾ. ಅ. ರಾಷ್ಟ್ರೀಯ ಸಂಯೋಜಕ ಸುಭಾಷ್ ಕಾನಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಮುಕುಂದರಾಜ್ (ಸಾಹಿತಿಗಳು ) ಸುಧೀರ್ ಕುಮಾರ್ ಮೊರೊಳ್ಳಿ (ಸಾಮಾಜಿಕ ಕಾರ್ಯಕರ್ತರು ) ಕನ್ನೇಶ್ ನಾಯ್ಕ ಕೋ ಲಶಿರಸಿ (ಹಿರಿಯ ಪತ್ರಕರ್ತರು ) ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬ್ರಹ್ಮಾನಂದರ ವಿರುದ್ಧ ಪೋಸ್ಟ್‌ ಮಾಡಿದ ಯುವಕನ ಬಂಧನ
ದಿನಾಂಕ:30-04-2022 ರಂದು ಪಿರ್ಯಾದಿ ಕೃಷ್ಣ ಗೋವಿಂದ ನಾಯ್ಕ, ಹಣಜಿ ಬೈಲ್, ಸಿದ್ದಾಪುರ ಶಹರ ಅಧ್ಯಕ್ಷರು ಸಿದ್ದಾಪುರ ತಾಲೂಕಾ ನಾಮದಾರಿ ಅಭಿವೃದ್ಧಿ ಸಂಘ (ರಿ)ಇವರು ಠಾಣೆಗೆ ಬಂದು ಸಾಮಾಜಿಕ ಜಾಲತಾಣದಲ್ಲಿ ಯಾರೋ ವ್ಯಕ್ತಿ ದಿನಾಂಕ:29-04-2022 ರಂದು12-16 ಗಂಟೆಗೆ ” ನಕಲಿ ಫೇಸ್ ಬುಕ್ ಖಾತೆಯನ್ನು ತೆರೆದು ಪೆಸ್ ಬುಕ್ ಪೆಜ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುತ್ತಾರೆಂದು ತಮ್ಮ ಲಿಖಿತ ದೂರು ನೀಡಿದ್ದರಿಂದ ಸಿದ್ದಾಪುರ ಪೋಲಿಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಐ.ಪಿ.ಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು ಸದರಿ ಫೇಸ್ಬುಕ್ ಖಾತೆಯ ಪ್ರಕರಣದ ಪತ್ತೆ ಕುರಿತು ಶ್ರೀಮತಿ ಡಾ// ಸುಮನ್ ಡಿ. ಪೆನ್ನೆಕರ್, ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ. ಶ್ರೀ ಬದ್ರಿನಾಥ್ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಉತ್ತರಕನ್ನಡ ಜಿಲ್ಲೆ. ಮಾನ್ಯ ಪೊಲೀಸ್ ಉಪಾಧೀಕ್ಷಕರು ಶ್ರೀ ರವಿ ನಾಯ್ಕ ಶಿರಸಿ ಉಪವಿಭಾಗ ಶಿರಸಿ ರವರ ಮಾರ್ಗದರ್ಶನದಲ್ಲಿ, ಶ್ರೀಕುಮಾರ್ ಕೆ ಮಾನ್ಯ ಪೊಲೀಸ್ ನಿರೀಕ್ಷಕರು ಸಿದ್ದಾಪುರ ಪೊಲೀಸ್ ಠಾಣೆ, ಶ್ರೀ ಎಮ್ ಜಿ ಕುಂಬಾರ್ ಪಿಎಸ್ಐ, ‌,,(ಕಾ&ಸು) ಶ್ರೀ ಮಲ್ಲಿಕಾರ್ಜುನಯ್ಯ ಕೊರನಿ. ಪಿಎಸ್ಐ ತನಿಖೆ ಸಿದ್ದಾಪುರ ಪೊಲೀಸ್ ಠಾಣೆ ಮತ್ತು ಪೋಲಿಸ್ ಸಿಬ್ಬಂದಿಗಳಾದ ಗಂಗಾಧರ ಹೊಂಗಲ್, ರಾಘವೇಂದ್ರ ನಾಯ್ಕ, ಇವರು ಪೇಸ್ ಬುಕ್ ಪೆಜ್ ನ ಮೂಲಕ ಅವಹೇಳನಕಾರಿ ಪೋಸ್ಟ್ ಮಾಡಿದ ಫೇಸ್ಬುಕ್ ಖಾತೆದಾರ ನಾದ ಶಿವರಾಜ್ ತಂದೆ ರಾಜು ಕಲಾದಗಿ ಪ್ರಾಯ:22 ವರ್ಷ ಬಾಗಲಕೋಟೆ ವಾಸ:ನೆಹರೂನಗರ ,ಕೆರೂರು,ತಾ// ಬಾದಾಮಿ, ಜಿ//ಬಾಗಲಕೋಟೆ, ಈತನನ್ನು ದಿನಾಂಕ-08-05-2022 ರಂದು ಪತ್ತೆಹಚ್ಚಿ ಠಾಣೆಗೆ ಕರೆತಂದು ವಿಚಾರಣೆ ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅವಹೇಳನಕಾರಿ ವಿಷಯದ ಕುರಿತು ಪೊಸ್ಟ್ ಮಾಡಿದ್ದಲ್ಲಿ ಸಾಮಾಜಿಕ ಜಾಲತಾಣದ ಮೇಲೆ ನಿಗಾಇಟ್ಟು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಐ.ಪಿ.ಸಿ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರೂಗಿಸಲಾವವುದೆಂದು ಈ ಮೂಲಕ ಸಾರ್ವಜನಿಕರಿಗೆ ಸೂಚಿಸಲಾಗಿದೆ.

               ಸಹಿ        

ಪಿ.ಎಸ್ .ಐ ಸಿದ್ದಾಪುರ ಪೊಲೀಸ್ ಠಾಣೆ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *