ಸೇತುವೆ ಕಾಮಗಾರಿ ಮುಗಿಯದೆ ಗೋಳಾಡುತ್ತಿರುವ ಹೆಗ್ಗೇರಿ ಜನತೆ

ಸಿದ್ದಾಪುರ ಕ್ಯಾದಗಿ ಪಂಚಾಯತ್‌ ಹೆಗ್ಗೇರಿ ಗ್ರಾ.ಪಂ. ಕೇಂದ್ರದಿಂದ ಕೂಗಳತೆಯ ದೂರದ ಗ್ರಾಮ ಆದರೆ ಆ ಊರಿಗೆ ಅಭಿವೃದ್ಧಿಯೇ ಶಾಪವಾಗಿ ಪರಿಣಮಿಸಿದೆ.

ಸಿದ್ಧಾಪುರ, ಉತ್ತರ ಕನ್ನಡ ಜಿಲ್ಲೆಗೆ ನಿಗದಿತ ಸಮಯಕ್ಕಿಂತ ಮೊದಲೇ ಕಾಲಿಟ್ಟಿರುವ ಮಳೆ ಹಲವು ತೊಂದರೆಗಳಿಗೆ ಕಾರಣವಾಗಿದೆ. ರೈತರ ಕೆಲಸಗಳಾಗದೆ, ಕಾರು ಭತ್ತ ಮನೆ ಸೇರದೆ ರೈತರು ಚಿಂತೆಗೀಡಾಗಿರುವ ನಡುವೆ ಅಲ್ಲಲ್ಲಿ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳದ ಕಾಮಗಾರಿಗಳಿಂದ ಜನರು ಗೋಳಾಡುವಂತಾಗಿದೆ.

ಕ್ಯಾದಗಿ ಗ್ರಾಮ ಪಂಚಾಯತ್‌ ಬೇಗಾರಿನಲ್ಲಿ ಕಾಲು ಸೇತುವೆ ನೆಲಕ್ಕುರುಳಿದ್ದು ಆ ಬಗ್ಗೆ ಸಂಬಂಧಿಸಿದವರು ಗಮನ ಹರಿಸಿಲ್ಲ. ಕಳೆದ ಮಳೆಗಾಲದಲ್ಲಿ ಪ್ರವಾಹಕ್ಕೆ ಕೊಚ್ಚಿಹೋದ ಸಣ್ಣ ಸೇತುವೆ ಆಶ್ರಯಿಸಿದ್ದ ಜನರಿಗೆ ಈ ವರ್ಷದ ಮಳೆಗಾಲ ಶಾಪವಾಗಲಿದೆ.

ಕ್ಯಾದಗಿ ಗ್ರಾಮ ಪಂಚಾಯತ್‌ ಅಗಸರ ಹೊಳೆಗೆ ಸೇತುವೆ ನಿರ್ಮಿಸಿ ಕ್ಯಾದಗಿ ಮತ್ತು ಹೆಗ್ಗೇರಿಗೆ ಸಂಪರ್ಕ ಸುಗಮಗೊಳಿಸುವ ಉದ್ದೇಶದಿಂದ ಪ್ರಾರಂಭವಾದ ಲೋಕೋಪಯೋಗಿ ಇಲಾಖೆಯ ೩೩ ಲಕ್ಷ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿ ಮುಗಿಯದೆ ಹೆಗ್ಗೇರಿ ಜನರು ಸಂಪರ್ಕ ಕೊರತೆ ಅನುಸರಿಸುತಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ವಿಳಂವಾಗೇ ಪ್ರಾರಂಭವಾದ ಕಾಮಗಾರಿ ಮುಗಿಯದೆ ಸ್ಥಳಿಯರಿಗೆ ವಾಹನ ಸಾಗಾಟಕ್ಕೆ ತೊಂದರೆ ಆಗಿದೆ. ಸ್ಥಳಿಯ ಗ್ರಾಮ ಪಂಚಾಯತ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ, ತಾಲೂಕಾ ಪಂಚಾಯತ್‌ ಮತ್ತು ಜಿ.ಪಂ. ಗಳಿಗೆ ಪ್ರತಿನಿಧಿಗಳೇ ಇಲ್ಲ, ಶಾಸಕ- ಸಂಸದರಂತೂ ಅಪರೂಪವಾಗಿದ್ದಾರೆ ಎನ್ನುವ ಸ್ಥಳೀಯರು ಈ ಕಾಮಗಾರಿ ವಿಳಂಬದಿಂದ ತಮ್ಮ ಸಂಪರ್ಕ ವ್ಯವಸ್ಥೆ ಸ್ಥಗಿತವಾಗಿದೆ ಎಂದು ದೂರಿದ್ದಾರೆ.

ಈ ಬಗ್ಗೆ ಸಮಾಜಮುಖಿ ಡಾಟ್‌ ನೆಟ್‌ ಪ್ರತಿನಿಧಿಗೆ ಮಾಹಿತಿ ನೀಡಿದ ಇಲಾಖೆಯ ಮೂಲಗಳು ಈ ಕಾಮಗಾರಿ ವಿಳಂಬಕ್ಕೆ ಗುತ್ತಿಗೆದಾರರ ಅಸಹಕಾರ ಕಾರಣ ಸದ್ಯದಲ್ಲೇ ಸೂಕ್ತ ವ್ಯವಸ್ಥೆಗೆ ಪ್ರಯತಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *