ಸಾಮಾಜಿಕ ಜಾಲತಾಣದ ಒಂದು ಪೋಸ್ಟ್​ನಿಂದ 18 ಲಕ್ಷ ರೂ. ಸಂಗ್ರಹ : ಮಗಳ ಜೀವ ಉಳಿಸಿಕೊಂಡ ತಾಯಿ!

Thumbnail image

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಬಗ್ಗೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದರು. ಪೋಸ್ಟ್ ಹಾಕಿದ ಕೇವಲ 15 ದಿನದಲ್ಲಿ 18 ಲಕ್ಷ ರೂ. ಸಂಗ್ರಹವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ..

ಶಿವಮೊಗ್ಗ: ಮಾಹಿತಿ ಮತ್ತು ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣವನ್ನು ಒಳ್ಳೆಯದಕ್ಕೆ ಹೇಗೆ ಬಳಸಿಕೊಳ್ಳಬಹುದು ಎಂಬುದಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಬಳಿಯ ದಾರಿಗದ್ದೆಯ ಮಹಿಳೆಯ ಕಥೆ ಸಾಕ್ಷಿಯಾಗಿದೆ‌.

ಶರಾವತಿ ಹಿನ್ನೀರಿನ ಪ್ರದೇಶವಾದ ದಾರಿಗದ್ದೆಯ ವಿಜಯ ಜೈನ್ ಎಂಬ ಅತಿಥಿ ಶಿಕ್ಷಕಿಗೆ ಕಳೆದ ಎರಡು ವರ್ಷಗಳಿಂದ ಕಿಡ್ನಿ ಸಮಸ್ಯೆ ಪ್ರಾರಂಭವಾಗಿತ್ತು. ಅವರು ಬದುಕಲು ಕಿಡ್ನಿ ಬದಲಾವಣೆ ಅನಿವಾರ್ಯ ಹಾಗೂ ಇದಕ್ಕೆ 15 ಲಕ್ಷ ರೂ. ಹಣ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು.

ಆದರೆ, ಬಡತನವನ್ನೇ ಹೊದ್ದು ಮಲಗಿದ್ದ ವಿಜಯ ಜೈನ್​ ಅವರಿಗೆ ಇಷ್ಟೊಂದು ಹಣ ಸಂಗ್ರಹ ಕಷ್ಟಕರವಾಗಿತ್ತು. ಆಗ ಇವರ ನೆರವಿಗೆ ಬಂದಿದ್ದು ತುಮರಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ಕರೂರು. ಇವರು ತಮ್ಮ ಫೇಸ್​ಬುಕ್ ಹಾಗೂ ವಾಟ್ಸ್​ಆ್ಯಪ್​ಗಳಲ್ಲಿ ವಿಜಯ್ ಆಪರೇಷನ್ ಕುರಿತು ಪೋಸ್ಟ್ ಮಾಡಿದ್ದರು.

ಮಗಳ ಜೀವ ಉಳಿಸಿಕೊಂಡ ಮಹಿಳೆ

ಮಗಳ ಜೀವ ಉಳಿಸಿಕೊಂಡ ಮಹಿಳೆ

ಅಂತೆಯೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಕೇವಲ 15 ದಿನದಲ್ಲಿ 18 ಲಕ್ಷ ರೂ. ಸಂಗ್ರಹವಾಗಿತ್ತು. ಈ ಹಣವನ್ನು ವಿಜಯ ಜೈನ್ ಅವರ ಕಿಡ್ನಿ ಬದಲಾವಣೆಗೆ ಬಳಸಲು ನೀಡಲಾಗಿದೆ. ಮಣಿಪಾಲದ ಆಸ್ಪತ್ರೆಯಲ್ಲಿ ಆಪರೇಷನ್ ನಡೆದಿದೆ.

ವಿಜಯ ಜೈನ್ ಅವರಿಗೆ ಅವರ ತಾಯಿಯೇ ಕಿಡ್ನಿ ನೀಡಿದ್ದು ವಿಶೇಷವಾಗಿದೆ. ಈ ಮೂಲಕ ತಾಯಿಗೆ ಮಗಳ ಜೀವ ಉಳಿಸಿಕೊಂಡಂತೆಯೂ ಆಗಿದ್ದು, ಸದ್ಯ ತಾಯಿ-ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *