ಮಾಧ್ಯಮಗಳು ಬಿ.ಜೆ.ಪಿ. ವಕ್ತಾರಿಕೆ ಮಾಡಬಾರದು -ಸಿದ್ಧರಾಮಯ್ಯ

ಕೆಲವು ಮಾಧ್ಯಮಗಳು,ಮಾಧ್ಯಮ ಪ್ರತಿನಿಧಿಗಳು ಬಿ.ಜೆ.ಪಿ. ಪರವಾಗಿ ವಕ್ತಾರಿಕೆ ಮಾಡುತ್ತಿವೆ ಎಂದು ಬೇಸರಿಸಿದ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಬಿ.ಜೆ.ಪಿ.ಯವರು ಹಾಗೆಂದರು, ಹೀಗೆಂದರು ಎನ್ನುವುದರ ಬದಲು ಮಾಧ್ಯಮ ಪ್ರತಿನಿಧಿಗಳು ರಾಜ್ಯದ ಒಳಿತು ಕೆಡುಕಿನ ಬಗ್ಗೆ ಚರ್ಚಿಸಬೇಕು ಎಂದು ತಿಳಿ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದ ಖಾಸಗಿ ಹೋಟೆಲ್‌ ಉದ್ಘಾಟನಾ ಸಮಾರಂಭದಲ್ಲಿ  ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ಧರಾಮಯ್ಯ ಮಕ್ಕಳಿಗೆ ಪ್ರೇರಣೆ ನೀಡುವ ಉತ್ತಮ ವ್ಯಕ್ತಿಗಳಾಗುವ ಮಾದರಿ ವ್ಯಕ್ತಿತ್ವಗಳನ್ನು ಪರಿಚಯಿಸಬೇಕು. ಬಿ.ಜೆ.ಪಿ.ಯವರಿಗೆ ಆರೋಪಿಸುವುದು, ಸುಳ್ಳು ಹೇಳುವುದು ಬಿಟ್ಟರೆ ಬೇರೆ ಕೆಲಸವಿಲ್ಲ. ಮಾಧ್ಯಮಗಳೂ ಬಿ.ಜೆ.ಪಿ.ಯ ವಕ್ತಾರಿಕೆ ಮಾಡುವುದರಲ್ಲಿ ಯಾವ ಪುರುಷಾರ್ಥವಿದೆ. ರಾಜ್ಯದ ಆಗು ಹೋಗುಗಳ ಬಗ್ಗೆ ಚರ್ಚಿಸಬೇಕಾದ ಕೆಲವು ಮಾಧ್ಯಮಗಳು ಬಿ.ಜೆ.ಪಿ. ಪರವಾಗಿ ವಕಾಲತ್ತು ವಹಿಸುತ್ತಾ ವಕ್ತಾರಿಕೆ ಮಾಡುತ್ತಿವೆ ಇದು ಉತ್ತಮ ಸಮಾಜದ ಗುಣಲಕ್ಷಣವಲ್ಲ ಎಂದರು.

ಶಿರಸಿ ಪತ್ರಕರ್ತರು ಆರೆಸ್ಸೆಸ್‌ ಮೈಂಡಾ ದೇಶಪಾಂಡೆ….. ಮಾಧ್ಯಮಗೋಷ್ಠಿಯಲ್ಲಿ ದೇಶ,ರಾಜ್ಯದ ವಿದ್ಯಮಾನ, ಪ್ರಸ್ತುತ ವಿದ್ಯಮಾನಗಳಿಗಿಂತ ಹೆಚ್ಚಾಗಿ ಮಂದಿರ, ಮಸೀದಿಗಳ ಬಗ್ಗೆ ಕೆಲವು ಪತ್ರಕರ್ತರು ಸಿದ್ಧರಾಮಯ್ಯ ನವರನ್ನು ಪ್ರಶ್ನಿಸಿದರು. ಈ ಬಗ್ಗೆ ಅಸಮಾಧಾನದಿಂದಲೇ ಪ್ರತಿಕ್ರೀಯಿಸಿದ ಸಿದ್ಧರಾಮಯ್ಯ ಮಾಧ್ಯಮಗೋಷ್ಠಿ ಮೊಟಕುಗೊಳಿಸಿ ತೆರಳುವ ಸಂದರ್ಭದಲ್ಲಿ ಮಾಜಿ ಸಚಿವ ದೇಶಪಾಂಡೆಯವರನ್ನು ಉದ್ದೇಶಿಸಿ ಇದೇನು ದೇಶಪಾಂಡೆ ಶಿರಸಿಯ ಪತ್ರಕರ್ತರು ಆರೆಸ್ಸೆಸ್‌ ಮೈಂಡಾ ಎಂದರು. ಹೌದು ಎಂಬಂತೆ ದೇಶಪಾಂಡೆ ನಕ್ಕು ಸುಮ್ಮನಾದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *